For Quick Alerts
ALLOW NOTIFICATIONS  
For Daily Alerts
 

IPL 2025: ಸಂಜು ಸ್ಯಾಮ್ಸನ್ ಗಾಯದ ಬಗ್ಗೆ ಬಿಗ್ ಅಪ್ಡೇಟ್

ಐಪಿಎಲ್ 2025 ರ ಪ್ರಯಾಣವು ಇಲ್ಲಿವರೆಗೆ ಸಂಜು ಸ್ಯಾಮ್ಸನ್ ಅವರಿಗೆ ಅಂದುಕೊಂಡಂತೆ ಆಗಿಲ್ಲ. ಅವರು ಗಾಯದ ಸಮಸ್ಯೆಗಳಿಂದ ಐಪಿಎಲ್ 2025 ರಲ್ಲಿ ವಿಶೇಷವಾದುದ್ದನ್ನು ಮಾಡಲು ಸಾಧ್ಯವಾಗಿಲ್ಲ. ಈ ವರ್ಷದ ಆರಂಭದಲ್ಲಿ ಇಂಗ್ಲೆಂಡ್ ವಿರುದ್ಧದ ತವರಿನಲ್ಲಿ ನಡೆದ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಗಾಯಗೊಂಡು, ನಂತರ ಶಸ್ತ್ರ ಚಿಕಿತ್ಸೆಗೂ ಒಳಗಾಗಬೇಕಾಯಿತು. ಈ ಕಾರಣಕ್ಕಾಗಿ, ಅವರಿಗೆ ಬ್ಯಾಟಿಂಗ್ ಮಾಡಲು ಮಾತ್ರ ಬಿಸಿಸಿಐ ಅನುಮತಿ ನೀಡಿತು. ಆದಾಗ್ಯೂ, ಇದಾದ ನಂಯತರ ಅವರನ್ನು ಫಿಟ್ ಎಂದು ಘೋಷಿಸಲಾಯಿತು. ಮತ್ತೆ ರಾಜಸ್ಥಾನ ರಾಯಲ್ಸ್ ತಂಡವನ್ನು ನಾಯಕನಾಗಿ ಮುನ್ನಡೆಸಿದರು.

ಏಪ್ರಿಲ್ 16 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸ್ಯಾಮ್ಸನ್ ಮತ್ತೊಂದು ಗಾಯಕ್ಕೆ ಒಳಗಾದರು. ಅಂದಿನಿಂದ ಅವರು ರಾಜಸ್ಥಾನ ರಾಯಲ್ಸ್ ತಂಡದಿಂದ ಹೊರಗುಳಿದಿದ್ದಾರೆ. ಈಗ ಅವರು ತಂಡಕ್ಕೆ ಮರಳುವ ಬಗ್ಗೆ ಬಿಗ್ ಅಪ್ಡೇಟ್ ಸಿಕ್ಕಿದೆ.

IPL 2025 Big update on Sanju Samson injury

ರಾಜಸ್ಥಾನ ರಾಯಲ್ಸ್ ತಂಡವು ಮೇ 4 ರಂದು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ತಮ್ಮ ಮುಂದಿನ ಪಂದ್ಯವನ್ನು ಆಡಲಿದೆ. ಸಂಜು ಸ್ಯಾಮ್ಸನ್ ಈ ಪಂದ್ಯದಲ್ಲಿ ಕಾಣಿಸಿಕೊಳ್ಳುವುದು ಅಸಾಧ್ಯವಾಗಿದೆ. ಆದರೆ ಮೇ 12 ರಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸಂಜು ಮರಳುವ ಸಾಧ್ಯತೆಯಿದೆ.

ಸಂಜು ಸ್ಯಾಮ್ಸನ್ ಅವರ ನಿರೀಕ್ಷೆಗಿಂತ ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಅವರು ಆಟವಾಡಕು ಉತ್ಸುಕರಾಗಿದ್ದಾರೆ. ಸೋಮವಾರ ಚೆಪಾಕ್ ಅಂಗಳದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡವನ್ನು ಮುನ್ನಡೆಸು ನಿರೀಕ್ಷೆಯಿದೆ ಎಂದು ವರದಿಗಳು ಹೇಳಿವೆ. ಸಂಜು ಸ್ಯಾಮ್ಸನ್ ರಾಜಸ್ಥಾನ ಪರ 7 ಪಂದ್ಯಗಳನ್ನು ಆಡಿದ್ದು, 224 ರನ್ ಗಳಿಸಿದ್ದಾರೆ.

ಐಪಿಎಲ್ 2025 ರಲ್ಲಿ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಮೂರು ಪಂದ್ಯಗಳು ಬಾಕಿ ಇದ್ದು, ಈಗ ಗೌರವಕ್ಕಾಗಿ ಉಳಿದ ಪಂದ್ಯಗಳನ್ನು ಆಡಲಿದೆ. ಒಂದು ಕಾಲದಲ್ಲಿ ಚಾಂಪಿಯನ್ ಆಗಿದ್ದ ರಾಜಸ್ಥಾನ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 100 ರನ್‌ಗಳ ಹೀನಾಯ ಸೋಲನ್ನು ಅನುಭವಿಸಿತು. ಪರಿಣಾಮ ರಾಜಸ್ಥಾನ ಪ್ಲೇ ಆಫ್ ರೇಸ್‌ನಿಂದ ಹೊರಗುಳಿಯಿತು. ಪ್ರಸ್ತುತ ರಾಜಸ್ಥಾನ 11 ಪಂದ್ಯಗಳಲ್ಲಿ ಕೇವಲ 3 ಗೆಲುವುಗಳೊಂದಿಗೆ 6 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ.

Story first published: Saturday, May 3, 2025, 20:46 [IST]
Other articles published on May 3, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+