For Quick Alerts
ALLOW NOTIFICATIONS  
For Daily Alerts
 

IPL 2025: ಕಾವ್ಯ ಮಾರನ್ ತಂಡಕ್ಕೆ ಹಿನ್ನಡೆ; ಬೌಲಿಂಗ್ ಕೋಚ್ ಡೇಲ್ ಸ್ಟೇಯ್ನ್ ಹೊರಗೆ

ಐಪಿಎಲ್ 2025ರ ಮೆಗಾ ಹರಾಜಿಗೂ ಮುನ್ನ ಹಲವು ತಂಡಗಳ ಕೋಚಿಂಗ್ ಸ್ಟಾಫ್‌ನಲ್ಲಿ ಪ್ರಮುಖ ಬದಲಾವಣೆಗಳು ನಡೆಯುತ್ತಿವೆ. ಇದೀಗ ಕಾವ್ಯಾ ಮಾರನ್ ಮಾಲೀಕತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡದಿಂದ ಹೊಸ ಅಪ್ಡೇಟ್ ಹೊರ ಬಂದಿದೆ.

ದಕ್ಷಿಣ ಆಫ್ರಿಕಾದ ಮಾಜಿ ವೇಗದ ಬೌಲರ್ ಡೇಲ್ ಸ್ಟೇನ್ ಮುಂಬರುವ ಐಪಿಎಲ್ ಸೀಸನ್‌ಗೆ ಸನ್‌ರೈಸರ್ಸ್ ಹೈದರಾಬಾದ್‌ನ ಬೌಲಿಂಗ್ ಕೋಚ್ ಆಗಿರುವುದಿಲ್ಲ. ಅವರು ದಕ್ಷಿಣ ಆಫ್ರಿಕಾ ಲೀಗ್‌ನಲ್ಲಿ ಸನ್‌ರೈಸರ್ಸ್ ಈಸ್ಟರ್ನ್ ಕೇಪ್ ತಂಡದೊಂದಿಗೆ ಉಳಿಯಲಿದ್ದಾರೆ. ಈ ಬಗ್ಗೆ ಫ್ರಾಂಚೈಸಿ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ನೀಡಿದೆ.

IPL 2025 Bowling coach Dale Steyn out of Sunrisers Hyderabad team

ಡೇಲ್ ಸ್ಟೇಯ್ನ್ 2022ರ ಋತುವಿನ ಮೊದಲು ಹೈದರಾಬಾದ್ ತಂಡದ ಬೌಲಿಂಗ್ ಕೋಚ್ ಆಗಿ ನೇಮಕಗೊಂಡಿದ್ದರು. ಇದು ಐಪಿಎಲ್‌ನಲ್ಲಿ ಎಸ್‌ಆರ್‌ಎಚ್‌ನ ಬೌಲಿಂಗ್ ಕೋಚ್ ಆಗಿ ಅವರ ಚೊಚ್ಚಲ ಅಧಿಕಾರವಧಿಯಾಗಿತ್ತು.

2024ರ ಐಪಿಎಲ್‌ನಲ್ಲಿ ವೈಯಕ್ತಿಕ ಕಾರಣಗಳಿಂದ ಅವರು ತಂಡದ ಭಾಗವಾಗಿರಲಿಲ್ಲ. ಆರಂಭದಲ್ಲಿ ಟೀಮ್ ಇಂಡಿಯಾದ ಯುವ ವೇಗದ ಬೌಲರ್ ಉಮ್ರಾನ್ ಮಲಿಕ್ ಅವರ ಬೌಲಿಂಗ್ ಸುಧಾರಿಸುವಲ್ಲಿ ಸ್ಟೇನ್ ಪ್ರಮುಖ ಪಾತ್ರ ವಹಿಸಿದ್ದರು.

ಸ್ಟೇಯ್ನ್ ಹೇಳಿದ್ದೇನು?

ಸನ್‌ರೈಸರ್ಸ್ ಹೈದರಾಬಾದ್ ತಂಡದಿಂದ ಹೊರಗುಳಿದಿರುವ ಬೆನ್ನಲ್ಲೇ ಡೇಲ್ ಸ್ಟೇನ್ ಪ್ರತಿಕ್ರಿಯಿಸಿದ್ದಾರೆ. 'ನಾನು ಐಪಿಎಲ್‌ನಲ್ಲಿ ಬೌಲಿಂಗ್ ಕೋಚ್ ಆಗಿ ಕಳೆದ ಕೆಲವು ವರ್ಷಗಳಿಂದ ಸನ್‌ರೈಸರ್ಸ್ ಹೈದರಾಬಾದ್‌ ಜೊತೆ ಪ್ರಯಾಣಿಸಿರುವುದಕ್ಕೆ ಧನ್ಯವಾದಗಳು.

ದುರದೃಷ್ಟವಶಾತ್, ನಾನು 2025ರಲ್ಲಿ ಐಪಿಎಲ್‌ಗೆ ಲಭ್ಯವಿರುವುದಿಲ್ಲ. ನಾನು ದಕ್ಷಿಣ ಆಫ್ರಿಕಾದಲ್ಲಿ ಸನ್‌ರೈಸರ್ಸ್ ಈಸ್ಟರ್ನ್ ಕೇಪ್‌ಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ. ಸತತ ಮೂರನೇ ಬಾರಿ ಟ್ರೋಫಿ ಗೆಲ್ಲುವ ಪ್ರಯತ್ನ ನಮ್ಮದು ಎಂದು ಹೇಳಿದ್ದಾರೆ.

ಸ್ಟೇಯ್ನ್ ಸ್ಥಾನಕ್ಕೆ ಯಾರು?

ಐಪಿಎಲ್ 2025ರಲ್ಲಿ ಹೈದರಾಬಾದ್ ಹೆಡ್‌ ಕೋಚ್ ಡೇನಿಯಲ್ ವೆಟ್ಟೋರಿ ಅವರೊಂದಿಗೆ ಕೆಲಸ ಮಾಡಲು ಮತ್ತೊರ್ವ ನ್ಯೂಜಿಲೆಂಡ್‌ನ ಮಾಜಿ ಕ್ರಿಕೆಟಿಗ ಜೇಮ್ಸ್ ಫ್ರಾಂಕ್ಲಿನ್ ಅವರನ್ನು ಬೌಲಿಂಗ್ ಕೋಚ್ ಆಗಿ ನೇಮಕ ಮಾಡಿಕೊಳ್ಳಲಾಗಿದೆ.

ಕಳೆದ ಬಾರಿ ಆಸ್ಟ್ರೇಲಿಯಾ ಟೆಸ್ಟ್ ನಾಯಕ ಪ್ಯಾಟ್ ಕಮ್ಮಿನ್ಸ್ ನೇತೃತ್ವದಲ್ಲಿ ಹೈದರಾಬಾದ್ ತಂಡ ಸಂಘಟಿತ ಪ್ರದರ್ಶನ ನೀಡುವ ಮೂಲಕ ಹಲವು ದಾಖಲೆಗಳನ್ನು ಸೃಷ್ಟಿಸಿತ್ತು. ಅಲ್ಲದೆ ಎರಡನೇ ಬಾರಿಗೆ ಐಪಿಎಲ್‌ನಲ್ಲಿ ಫೈನಲ್‌ಗೆ ಪ್ರವೇಶಿಸಿತ್ತು. ಕೋಲ್ಕತ್ತಾ ನೈಟ್ ರೈಡರ್ಸ್‌ ವಿರುದ್ಧ ಸೋತು ರನ್ನರ್-ಅಪ್ ಆಗಿತ್ತು.

Story first published: Thursday, October 17, 2024, 20:51 [IST]
Other articles published on Oct 17, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+