ಬಹುನಿರೀಕ್ಷಿತ ಐಪಿಎಲ್ 2025ರ ಮೆಗಾ ಹರಾಜು ಪ್ರಕ್ರಿಯೆ ಮುಂದಿನ ತಿಂಗಳು ನಡೆಯಲಿದೆ. ಇದಕ್ಕೂ ಮುನ್ನ ಐಪಿಎಲ್‌ನ ಎಲ್ಲಾ 10 ತಂಡಗಳು ತಾವು ಉಳಿಸಿಕೊಂಡಿರುವ ಮತ್ತು ಬಿಟ್ಟಿರುವ ಆಟಗಾರರ ಪಟ್ಟಿ ಬಿಡುಗಡೆ ಮಾಡಿವೆ. ಅದರಂತೆ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ನಾಲ್ವರನ್ನು ತಂಡದಲ್ಲೇ ಉಳಿಸಿಕೊಂಡಿದೆ.
ಡೆಲ್ಲಿ ಕ್ಯಾಪಿಟಲ್ಸ್ ರಿಟೇನ್ ಪಟ್ಟಿಯಲ್ಲಿ ಸ್ಟಾರ್ ವಿಕೆಟ್‌ಕೀಪರ್-ಬ್ಯಾಟರ್ ರಿಷಭ್ ಪಂತ್ ಅವರ ಹೆಸರಿಲ್ಲ ಎಂಬುದು ಅಚ್ಚರಿ ತಂದಿದೆ. ಈ ಬಾರಿಯ ಮೆಗಾ ಹರಾಜಿನ ಮೂಲಕ ಪಂತ್ ಅದೃಷ್ಟ ಪರೀಕ್ಷೆಗೆ ಇಳಿಯಲು ನಿರ್ಧರಿಸಿದ್ದಾರೆ. ಈ ಕಾರಣದಿಂದಾಗಿ ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಅವರು ರಿಟೈನ್ ಆಗಿಲ್ಲ. ಈಗ ಡೆಲ್ಲಿ ಫ್ರಾಂಚೈಸಿ ರಿಟೇನ್ ಮಾಡಿಕೊಂಡಿರುವ ಆಟಗಾರರ ಬಗ್ಗೆ ಇಲ್ಲಿದೆ ಮಾಹಿತಿ.

ಕಳೆದ ಐದು ಐಪಿಎಲ್ ಆವೃತ್ತಿಗಳಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದೊಂದಿಗೆ ಪ್ರಯಾಣ ಬೆಳೆಸಿರುವ ಸ್ಟಾರ್ ಆಲ್‌ರೌಂಡರ್ ಅಕ್ಸರ್ ಪಟೇಲ್ ಅವರನ್ನು 16.5 ಕೋಟಿರೂ. ಗೆ ಮೊದಲ ಆಯ್ಕೆ ಆಟಗಾರನಾಗಿ ಉಳಿಸಿಕೊಂಡಿದೆ. ನಂತರ ಸ್ಟಾರ್ ಸ್ಪಿನ್ನರ್ ಕುಲದೀಪ್ ಯಾದವ್ 13.25 ಕೋಟಿ ರೂ. ನೀಡಿ ಡೆಲ್ಲಿ ಉಳಿಸಿಕೊಂಡಿದ್ದು, ಮೂರನೇ ಆಯ್ಕೆಯ ಆಟಗಾರನಾಗಿ ಟ್ರಿಸ್ಟಾನ್ ಸ್ಟಬ್ಸ್ ಅವರಿ 10 ಕೋಟಿ ರೂ. ಮತ್ತು ಯುವ ವಿಕೆಟ್‌ಕೀಪರ್ ಅಭಿಷೇಕ್ ಪೊರೆಲ್‌ಗೆ 4 ಕೋಟಿ ರೂ. ನೀಡಿ ಉಳಿಸಿಕೊಂಡಿದೆ.
ಮಿಚೆಲ್ ಮಾರ್ಷ್, ಡೇವಿಡ್ ವಾರ್ನರ್, ಸೈಯದ್ ಖಲೀಲ್ ಅಹ್ಮದ್, ಲಲಿತ್ ಯಾದವ್, ಲುಂಗಿಸಾನಿ ಎನ್‌ಗಿಡಿ, ಯಶ್ ಧುಲ್, ಪ್ರವೀಣ್ ದುಬೆ, ಮುಖೇಶ್ ಕುಮಾರ್, ಇಶಾಂತ್ ಶರ್ಮಾ, ರಿಷಬ್ ಪಂತ್, ಪೃಥ್ವಿ ಶಾ, ಅನ್ರಿಚ್ ನಾರ್ಟ್ಜೆ, ವಿಕ್ಕಿ ಓಸ್ತ್ವಾಲ್, ಕುಮಾರ್ ಕುಶಾಗ್ರಾ, ಝೈ ಬ್ರೋಕ್‌ಸನ್, ಹ್ಯಾರಿ ರಿಚರ್ಡ್ಸನ್, ಸುಮಿತ್ ಕುಮಾರ್, ಶಾಯ್ ಹೋಪ್, ರಿಕಿ ಭುಯಿ, ಸ್ವಸ್ತಿಕ್ ಚಿಕಾರಾ, ರಸಿಖ್ ದಾರ್.