IPL 2025: RCB ಕೈಬಿಟ್ಟ ಆಟಗಾರನಿಗೆ ಡೆಲ್ಲಿ ಕ್ಯಾಪಿಟಲ್ಸ್‌ನಲ್ಲಿ ದೊಡ್ಡ ಜವಾಬ್ದಾರಿ
18ನೇ ಆವೃತ್ತಿಯ ಐಪಿಎಲ್‌ಗೆ ಎಲ್ಲ ತಂಡಗಳು ತಮ್ಮ ತಮ್ಮ ನಾಯಕರನ್ನು ಘೋಷಿಸಿವೆ. ಕೊನೆಯದಾಗಿ ಡೆಲ್ಲಿ ಕ್ಯಾಪಿಟಲ್ಸ್ ಅಕ್ಷರ್ ಪಟೇಲ್ ಅವರನ್ನು ತಮ್ಮ ತಂಡದ ನಾಯಕ ಎಂದು ತಿಳಿಸಿತ್ತು. ಇದಾದ ಬಳಿಕ ಈಗ ಮತ್ತೊಂದು ದೊಡ್ಡ ಅಪ್‌ಡೇಟ್ ಬಂದಿದೆ. ಈಗ ಬರುತ್ತಿರುವ ಸುದ್ದಿಯ ಪ್ರಕಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೈ ಬಿಟ್ಟ ಆಟಗಾರನಿಗೆ ಡೆಲ್ಲಿ ದೊಡ್ಡ ಜವಾಬ್ದಾರಿಯನ್ನು ನೀಡಿದೆ.
ಸೌದಿಯಲ್ಲಿ ನಡೆದ ಐಪಿಎಲ್ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಆರ್‌ಸಿಬಿ ಮಾಜಿ ನಾಯಕನಿಗೆ ಮೂಲ ಬೆಲೆ ನೀಡಿ ಖರೀದಿಸಿತ್ತು. ಫಾಫ್ ಡುಪ್ಲೇಸಿಸ್ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭಾಗವಾಗಿದ್ದಾರೆ. ಈ ವೇಳೆ ಡೆಲ್ಲಿ ಅನುಭವಿ ಆಟಗಾರನಿಗೆ ದೊಡ್ಡ ಜವಾಬ್ದಾರಿಯನ್ನು ನೀಡಿದೆ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತನ್ನ ಚೊಚ್ಚಲ ಪ್ರಶಸ್ತಿ ಗೆಲುವಿನ ಕನಸನ್ನು ಸಾಕಾರಗೊಳಿಸಿಕೊಳ್ಳುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ.

ಈ ಬಗ್ಗೆ ಡೆಲ್ಲಿ ಕ್ಯಾಪಿಟಲ್ಸ್ ವಿಭಿನ್ನವಾಗಿ ಘೋಷಣೆ ಮಾಡಿದೆ. ತನ್ನ ಸಾಮಾಜಿಕ ಖಾತೆಯಲ್ಲಿ ಒಂದು ವಿಡಿಯೋವನ್ನು ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಫಾಫ್ ಡುಪ್ಲೇಸಿಸ್ ಯಾರೊಂದಿಗೋ ಕಾಲ್‌ನಲ್ಲಿ ಮಾತನಾಡುತ್ತಿದ್ದಾರೆ. ಇದೇ ವೇಳೆ ಸಂಭಾಷಣೆಯ ಮಧ್ಯದಲ್ಲಿ ಇವರು ಹೇಳುವ ಆ ಒಂದು ವಾಕ್ಯ ಎಲ್ಲರ ಗಮನ ಸೆಳೆದಿದೆ. ಫಾಫ್ ನಾನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಉಪನಾಯಕನಾಗಿರುವ ಬಗ್ಗೆ ತಿಳಿಸಿದ್ದಾರೆ. ಕಳೆದ ವರ್ಷ ಮೆಗಾ ಹರಾಜಿಗೂ ಮುನ್ನ ಆರ್‌ಸಿಬಿ ಡು ಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿತ್ತು. ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದಕ್ಷಿಣ ಆಫ್ರಿಕಾದ ದಿಗ್ಗಜನಿಗೆ 2 ಕೋಟಿ ರೂ. ನೀಡಿ ತಮ್ಮ ತಂಡಕ್ಕೆ ಸೇರಿಸಿಕೊಂಡಿತು.
ಐಪಿಎಲ್‌ನಲ್ಲಿ ಫಾಫ್ ಸಾಧನೆ
ಪ್ರಸಕ್ತ ಐಪಿಎಲ್ ಆವೃತ್ತಿಯಲ್ಲಿ ಅತಿ ಹಿರಿಯ ಆಟಗಾರರ ಪಟ್ಟಿಯಲ್ಲಿ ಫಾಫ್ ಡುಪ್ಲೇಸಿಸ್ ಸ್ಥಾನ ಪಡೆದಿದ್ದಾರೆ. ಇವರಿಗೆ 40 ವರ್ಷ ವಯಸ್ಸಾದ್ರೂ, ಆನ್ ಫಿಲ್ಡ್‌ನಲ್ಲಿ ಇವರು 18 ವರ್ಷದ ಆಟಗಾರನಿಗೂ ಭರ್ಜರಿ ಪೈಪೋಟಿ ನೀಡುವ ಕ್ಷಮತೆಯನ್ನು ಹೊಂದಿರುತ್ತಾರೆ. ಇವರು ಐಪಿಎಲ್‌ನಲ್ಲಿ ಬಿರುಸಿನ ಬ್ಯಾಟಿಂಗ್ ಹಾಗೂ ಆಕರ್ಷಕ ಫೀಲ್ಡಿಂಗ್‌ಗೆ ಹೆಸರುವಾಸಿ. ಇವರು 2023ರ ಐಪಿಎಲ್ ಆವೃತ್ತಿಯಲ್ಲಿ 730 ರನ್ ಸಿಡಿಸಿದ್ದರು. ಆದರೆ 2024ರ ಐಪಿಎಲ್‌ನಲ್ಲಿ 438 ರನ್ ಕಲೆ ಹಾಕುವಲ್ಲಿ ಮಾತ್ರ ಯಶಸ್ವಿಯಾದ್ರು. ಕಳೆದ ವರ್ಷ ಇವರು ಬೆಂಗಳೂರು ಪರ ಅತಿ ಹೆಚ್ಚು ರನ್ ದಾಖಲಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

ಐಪಿಎಲ್‌ನಲ್ಲಿ ಡು ಪ್ಲೆಸಿಸ್ ನಾಯಕತ್ವದ ದಾಖಲೆ ನೋಡುವುದಾದರೆ, ಇವರು 42 ಪಂದ್ಯಗಳಲ್ಲಿ ಆರ್‌ಸಿಬಿಯ ನಾಯಕತ್ವ ವಹಿಸಿದ್ದು, ಈ ವೇಳೆ ತಂಡ 21 ರಲ್ಲಿ ಗೆಲುವು, ಹಾಗೂ ಇಷ್ಟೇ ಪಂದ್ಯಗಳಲ್ಲಿ ಸೋಲು ಕಂಡಿದೆ. ಇವರು ಐಪಿಎಲ್‌ನಲ್ಲಿ ಆಡಿದ 145 ಪಂದ್ಯಗಳಲ್ಲಿ 4,571 ರನ್ ಸಿಡಿಸಿ ತಮ್ಮ ಕ್ಷಮತೆಯನ್ನು ಪ್ರದರ್ಶಿಸಿದ್ದಾರೆ. ಏಜ್ ಇಸ್ ಜಸ್ಟ್ ನಂಬರ್ ಎನ್ನುವ ಮಾತು ಇವರಿಗೂ ಹೊಂದುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications