Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2025: ಡೆಲ್ಲಿಗೆ ಹ್ಯಾಟ್ರಿಕ್ ಗೆಲುವು; ತವರಿನಲ್ಲಿ ಸಿಎಸ್‌ಕೆಗೆ ಮುಖಭಂಗ

ಅಕ್ಸರ್ ಪಟೇಲ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಐಪಿಎಲ್ 2025ರಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2025 ರ 17ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಮಣಿಸಿದೆ. ಈ ಸೋಲಿನೊಂದಿಗೆ ತವರಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಭಾರಿ ಮುಖಭಂಗ ಅನುಭವಿಸಿದೆ.

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿ ಆಘಾತ ಕಂಡಿತ್ತು. ಆದರೂ, ಕೆಎಲ್ ರಾಹುಲ್ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‍‌ಗಳಲ್ಲಿ 183 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ಡೆಲ್ಲಿ ನೀಡಿದ 184 ರನ್‌ಗಳ ಗೆಲುವಿನ ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ಮತ್ತೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ಪರಿಣಾಮ ಚೆನ್ನೈ 5 ವಿಕೆಟ್ ನಷ್ಟಕ್ಕೆ 158 ರನ್‌ಗಳನ್ನು ಗಳಿಸಿತು. ಈ ಮೂಲಕ ಡೆಲ್ಲಿ ಕ್ಯಾಟಪಿಲ್ಸ್ 25 ರನ್‌ಗಳ ಗೆಲುವು ಸಾಧಿಸಿತು.

IPL 2025 Delhi Capitals won by 25 runs against Chennai Super Kings

ಡೆಲ್ಲಿ ಕ್ಯಾಪಿಟಲ್ಸ್ ತಂಡದ 184 ರನ್‌ಗಳ ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ಮತ್ತೊಮ್ಮೆ ಆರಂಭಿಕ ಹಿನ್ನಡೆ ಅನುಭವಿಸಿತು. ಚೆನ್ನೈ ತಂಡಕ್ಕೆ ನ್ಯೂಜಿಲೆಂಡ್ ಜೋಡಿ ರಚಿನ್ ರವೀಂದ್ರ ಮತ್ತು ಡೆವೊನ್ ಕಾನ್ವೇ ಇನ್ನಿಂಗ್ಸ್ ತೆರೆದರು. ಆದರೆ, ಈ ಜೋಡಿ ಉತ್ತಮ ಆರಂಭ ನೀಡುವಲ್ಲಿ ವಿಫಲವಾಯಿತು. ರಚಿನ್ ರವೀಂದ್ರ 3 ರನ್ ಗಳಿಸಿ ಔಟಾದರೆ, ಡೆವೊನ್ ಕಾನ್ವೇ 13 ರನ್‌ಗಳಿಗೆ ಆಟ ನಿಲ್ಲಿಸಿದರು. ನಾಯಕ ರುತುರಾಜ್ ಗಾಯಕ್ವಾಡ್ ಕೂಡ ತಂಡಕ್ಕೆ ಆಸರೆಯಾಗದೆ ಕೇವಲ 5 ರನ್‌ಗಳಿಗೆ ವಿಕೆಟ್ ಕಳೆದುಕೊಂಡರು.

ಚೆನ್ನೈ ಸೂಪರ್ ಕಿಂಗ್ಸ್ 74 ರನ್ ಗಳಿಸುವಷ್ಟರಲ್ಲಿ 5 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟ ಸಿಲುಕಿತು. ಸ್ಪೋಟಕ ಬ್ಯಾಟರ್ ಶಿವಂ ದುಬೆ 18 ರನ್ ಗಳಿಸಿದರೆ, ರವೀಂದ್ರ ಜಡೇಜಾ 2 ರನ್‌ಗಳಿಗೆ ಔಟಾದರು. ಚೆನ್ನೈ ತಂಡದ ಸಂಕಷ್ಟದ ಸಮಯದಲ್ಲಿಯೂ ವಿಜಯ್ ಶಂಕರ್ ಜವಾಬ್ದಾರಿಯುತ ಬ್ಯಾಟಿಂಗ್ ಮಾಡುವ ಮೂಲಕ ಗಮನ ಸೆಳೆದರು.

ವಿಜಯ್ ಶಂಕರ್ ತವರಿನ ಮೈದಾನದಲ್ಲಿ ಅರ್ಧಶತಕ ಸಿಡಿಸಿ ಮಿಂಚಿದರು. ಆದರೆ ತಂಡಕ್ಕೆ ಗೆಲುವು ತಂದುಕೊಡಲು ಅವರಿಂದ ಸಾಧ್ಯವಾಗಲಿಲ್ಲ. ವಿಜಯ್ ಶಂಕರ್ 54 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್‍ ನೆರವಿನಿಂದ ಅಜೇಯ 69 ರನ್ ಬಾರಿಸಿದರು. ಮತ್ತೊಂದೆಡೆ ಮಾಜಿ ನಾಯಕ ಎಂಎಸ್ ಧೋನಿ 26 ಎಸೆತಗಳಲ್ಲಿ 30 ರನ್ ಗಳಿಸಿ ಅಜೇಯರಾಗುಳಿದರು.

ಡೆಲ್ಲಿ ಕ್ಯಾಪಿಟಲ್ಸ್ ಪರ ವಿಪ್ರಜ್ ನಿಗಮ್ 2 ವಿಕೆಟ್ ಕಬಳಿಸಿದರೆ, ಮಿಚೆಲ್ ಸ್ಟಾರ್ಕ್, ಮುಖೇಶ್ ಕುಮಾರ್ ಮತ್ತು ಕುಲದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.

ಉಭಯ ತಂಡಗಳ ಪ್ಲೇಯಿಂಗ್-11

ಚೆನ್ನೈ ಸೂಪರ್ ಕಿಂಗ್ಸ್: ರಚಿನ್ ರವೀಂದ್ರ, ಡೆವೊನ್ ಕಾನ್ವೆ, ರಿತುರಾಜ್ ಗಾಯಕ್ವಾಡ್ (ನಾಯಕ), ವಿಜಯ್ ಶಂಕರ್, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ನೂರ್ ಅಹ್ಮದ್, ಮುಖೇಶ್ ಚೌಧರಿ, ಖಲೀಲ್ ಅಹ್ಮದ್, ಮತಿಶಾ ಪತಿರಣ.

ಡೆಲ್ಲಿ ಕ್ಯಾಪಿಟಲ್ಸ್: ಜೇಕ್ ಫ್ರೇಸರ್-ಮೆಕ್‌ಗುರ್ಕ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಭಿಷೇಕ್ ಪೊರೆಲ್, ಟ್ರಿಸ್ಟಾನ್ ಸ್ಟಬ್ಸ್, ಸಮೀರ್ ರಿಜ್ವಿ, ಅಕ್ಷರ್ ಪಟೇಲ್ (ನಾಯಕ), ಅಶುತೋಷ್ ಶರ್ಮಾ, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲ್ದೀಪ್ ಯಾದವ್, ಮೋಹಿತ್ ಶರ್ಮಾ.

Story first published: Saturday, April 5, 2025, 19:27 [IST]
Other articles published on Apr 5, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+