Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2025: ಗುಜರಾತ್ ಟೈಟಾನ್ಸ್ ವಿರುದ್ಧ ರೋಹಿತ್ ಶರ್ಮಾಗೆ ಕೊನೆಯ ಅವಕಾಶ?

ಐಪಿಎಲ್ 2025 ರ ಸೀಸನ್ ಅದ್ಧೂರಿಯಾಗಿ ನಡೆಯುತ್ತಿದೆ. ಈ ಮೆಗಾ ಟಿ20 ಲೀಗ್‌ನಲ್ಲಿ ಶನಿವಾರ ರೋಚಕ ಪಂದ್ಯ ನಡೆಯಲಿದೆ. ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಐಪಿಎಲ್ 2025 ರ 9ನೇ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಉಭಯ ತಂಡಗಳು ಆರಂಭಿಕ ಪಂದ್ಯಗಳಲ್ಲಿ ಸೋಲು ಕಂಡಿದ್ದು, ಇಂದು ಗೆಲುವಿನ ನಿರೀಕ್ಷೆಯಲ್ಲಿವೆ.

ಈ ಬಾರಿಯ ಐಪಿಎಲ್‌ನಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಆಡುತ್ತಿರುವ ಮುಂಬೈ ಇಂಡಿಯನ್ಸ್ ತಂಡ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಅವರಿಂದ ಭಾರಿ ನಿರೀಕ್ಷೆಯಿಟ್ಟುಕೊಂಡಿದೆ. ಹಿಟ್‌ಮ್ಯಾನ್ ರೋಹಿತ್ ಶರ್ಮಾ ಐಪಿಎಲ್ 2025ರ ಮೊದಲ ಪಂದ್ಯದಲ್ಲಿ ಖಾತೆ ತೆರೆಯುವಲ್ಲಿ ವಿಫಲವಾದರು. ಇಂತಹ ಸಂದರ್ಭದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರೋಹಿತ್ ಶರ್ಮಾ ಅವರಿಂದ ಬಿಗ್ ಇನ್ನಿಂಗ್ಸ್ ಆಡುವ ನಿರೀಕ್ಷೆಯಿದೆ. ಆದರೆ, ಪ್ರಸ್ತುತ ರೋಹಿತ್ ಶರ್ಮಾ ಫಾರ್ಮ್ ತಂಡಕ್ಕೆ ಟೆಕ್ಷನ್ ತಂದಿದೆ.

IPL 2025 GT vs MI Last chance for Rohit Sharma against Gujarat Titans

ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ಉತ್ತಮ ಪ್ರದರ್ಶನ ನೀಡಲಿಲ್ಲ. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾದರು. ಹೀಗಾಗಿ ಮುಂಬೈ ಇಂಡಿಯನ್ಸ್ ತಂಡ ಸಂಕಷ್ಟಕ್ಕೆ ಸಿಲುಕಿತು.

ಐಪಿಎಲ್ 2021 ರಿಂದ ಇಲ್ಲಿವರೆಗೆ ರೋಹಿತ್ ಶರ್ಮಾ ಅವರ ಅಂಕಿ-ಅಂಶ ನೋಡಿದರೆ, ಅವರು 58 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು ಕೇವಲ 4 ಅರ್ಧಶತಕ ಮತ್ತು 1 ಶತಕವನ್ನು ಗಳಿಸಿದ್ದಾರೆ. ಆದರೆ ರೋಹಿತ್ ಶರ್ಮಾ ಕಳೆದ ಐದು ಸೀಸನ್‌ಗಳಲ್ಲಿ ಒಮ್ಮೆ ಮಾತ್ರ 400 ರನ್‌ಗಳ ಗಡಿ ದಾಟಲು ಸಾಧ್ಯವಾಗಿದೆ.

ಒಂದು ಕಾಲದಲ್ಲಿ ಎದುರಾಳಿ ತಂಡಗಳ ಬೌಲರ್‍‌ಗಳ ಎದೆಯಲ್ಲಿ ನಡುಕ ಹುಟ್ಟಿಸಿದ್ದ ರೋಹಿತ್ ಶರ್ಮಾ ಇಂದು ಮಂಕಾಗಿದ್ದಾರೆ. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ನಂತರ ರೋಹಿತ್ ಶರ್ಮಾ ಭವಿಷ್ಯ ನಿರ್ಧಾರವಾಗಲಿದೆ ಎಂದು ವರದಿಗಳು ಹೇಳಿವೆ. ಒಂದು ವೇಳೆ ರೋಹಿತ್ ಶರ್ಮಾ ಬಿಗ್ ಇನ್ನಿಂಗ್ಸ್ ಆಡುವಲ್ಲಿ ವಿಫಲವಾದರೆ, ಫ್ರಾಂಚೈಸಿ ತಂಡದ ಹಿತವನ್ನು ಗಮನದಲ್ಲಿಟ್ಟುಕೊಂಡು ಅವರನ್ನು ಆಡುವ ಹನ್ನೊಂದರ ಬಳಗಿದಿಂದ ಕೈಬಿಡುವ ನಿರ್ಧಾರ ತೆಗೆದುಕೊಳ್ಳಬೇಕಾಗಬಹುದು. ಇದರಿಂದ ರೋಹಿತ್ ಶರ್ಮಾ ಅವರಿಗೆ ಕೊನೆಯ ಅವಕಾಶ ಎನ್ನಲಾಗುತ್ತಿದೆ.

ಸಂಭಾವ್ಯ ಪ್ಲೇಯಿಂಗ್-11

ಗುಜರಾತ್ ಟೈಟಾನ್ಸ್ ತಂಡ: ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಶೆರ್ಫೇನ್ ರುದರ್ಫೋರ್ಡ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅರ್ಷದ್ ಖಾನ್, ಆರ್ ಸಾಯಿ ಕಿಶೋರ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ, ರಯಾನ್ ರಿಕಲ್ಟನ್ (ವಿಕೆಟ್ ಕೀಪರ್), ವಿಲ್ ಜ್ಯಾಕ್ಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ಟ್ರೆಂಟ್ ಬೌಲ್ಟ್, ಸತ್ಯನಾರಾಯಣ ರಾಜು, ವಿಘ್ನೇಶ್ ಪುತ್ತೂರು.

Story first published: Saturday, March 29, 2025, 14:14 [IST]
Other articles published on Mar 29, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+