IPL 2025: ಮೊದಲ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ ನಿಷೇಧ; ಮುಂಬೈ ಕಮಾಂಡ್ ಯಾರಿಗೆ?
ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಮೆಗಾ ಹರಾಜು ಪ್ರಕ್ರಿಯೆ ಯಶಸ್ವಿಯಾಗಿ ಮುಕ್ತಾಯವಾಗಿದೆ. ಇದಾದ ನಂತರ ಎಲ್ಲಾ ತಂಡಗಳು ತಮ್ಮ ತಮ್ಮ ತಯಾರಿಯನ್ನು ಆರಂಭಿಸಿವೆ. ಐಪಿಎಲ್‌ನ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾಗಿರುವ ಮುಂಬೈ ಇಂಡಿಯನ್ಸ್ ಈ ಬಾರಿ ಆವೃತ್ತಿಗೆ ಬಲಿಷ್ಠ ತಂಡವನ್ನು ಕಟ್ಟುವಲ್ಲಿ ಯಶಸ್ವಿಯಾಗಿದೆ. ಆದರೆ 16 ಕೋಟಿ ರೂ.ಗೆ ಉಳಿಸಿಕೊಂಡಿರುವ ಸ್ಟಾರ್ ಆಲ್‌ರೌಂಡರ್ ಮತ್ತು ಸಂಭಾವ್ಯ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ಐಪಿಎಲ್ 2025 ರ ಮೊದಲ ಪಂದ್ಯಕ್ಕೆ ನಿಷೇಧ ಹೇರಲಾಗಿದೆ.
ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್‌ನ ಕೊನೆಯ ಪಂದ್ಯದಲ್ಲಿ ನಿಧಾನಗತಿಯ ಓವರ್‌ನಿಂದಾಗಿ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ಒಂದು ಪಂದ್ಯಕ್ಕೆ ಬಿಸಿಸಿಐ ನಿಷೇಧಿಸಿದೆ. ಐಪಿಎಲ್ ಆವೃತ್ತಿಯಲ್ಲಿ ಸ್ಲೋ ಓವರ್ ರೇಟ್ 3 ಬಾರಿ ಕಂಡುಬಂದರೆ, ತಂಡದ ನಾಯಕನಿಗೆ 1 ಪಂದ್ಯಕ್ಕೆ ನಿಷೇಧ ಹೇರಲಾಗುತ್ತದೆ. ಹೀಗಾಗಿ ಹಾರ್ದಿಕ್ ಪಾಂಡ್ಯ ಅವರು ಐಪಿಎಲ್ 2025 ರ ಮೊದಲ ಪಂದ್ಯವನ್ನು ಕಳೆದುಕೊಂಡಿದ್ದಾರೆ.

ಐಪಿಎಲ್ 2025ರಲ್ಲಿಯೂ ಹಾರ್ದಿಕ್ ಪಾಂಡ್ಯ ಅವರನ್ನೇ ಮುಂಬೈ ಇಂಡಿಯನ್ಸ್ ನಾಯಕನಾಗಿ ಮುಂದುವರೆಸುವ ನಿರೀಕ್ಷೆಯಿದೆ. ಇಂತಹ ಪರಿಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ಬದಲಿಗೆ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆ ಕ್ರಿಕೆಟ್ ಅಭಿಮಾನಿಗಳಲ್ಲಿ ಮೂಡಿದೆ.
ಹಾರ್ದಿಕ್ ಪಾಂಡ್ಯ ಬದಲಿಗೆ ಮುಂಬೈ ಇಂಡಿಯನ್ಸ್ ತಂಡವನ್ನು ಮೊದಲ ಪಂದ್ಯದಲ್ಲಿ ಮುನ್ನಡೆಸಲು ಮೂವರು ಸ್ಟಾರ್ ಆಟಗಾರಿದ್ದಾರೆ. ಮುಂಬೈ ಮಾಜಿ ನಾಯಕ ರೋಹಿತ್ ಶರ್ಮಾ ಮೊದಲ ಆಯ್ಕೆಯಾದರೆ, ಸೂರ್ಯಕುಮಾರ್ ಯಾದವ್ ಮತ್ತು ಜಸ್ಪ್ರೀತ್ ಬುಮ್ರಾ ಕೂಡ ಈ ರೇಸ್‌ನಲ್ಲಿದ್ದಾರೆ. ಈಗಾಗಲೇ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಪ್ರಸ್ತುತ ಟೀಮ್ ಇಂಡಿಯಾವನ್ನು ಮುನ್ನಡೆಸುತ್ತಿರುವ ಸೂರ್ಯಕುಮಾರ್ ಯಾದವ್ ಅವರಿಗೆ ಮುಂಬೈ ಇಂಡಿಯನ್ಸ್ ತಂಡವನ್ನು ಮೊದಲ ಪಂದ್ಯದಲ್ಲಿ ನೋಡಿಕೊಳ್ಳುವ ಜವಾಬ್ದಾರಿ ಸಿಗುವ ಸಾಧ್ಯತೆಯಿದೆ ಹೆಚ್ಚಿದೆ.
ರೋಹಿತ್ ಶರ್ಮಾ ನಂತರ ಭಾರತ ಟಿ20 ತಂಡದ ಅಧಿಕಾರ ಚುಕ್ಕಾಣಿ ಹಿಡಿದ ಸೂರ್ಯಕುಮಾರ್ ಯಶಸ್ವಿ ನಾಯಕರಾಗಿದ್ದಾರೆ. ಈಗಾಗಲೇ ಸೂರ್ಯಕುಮಾರ್ ನೇತೃತ್ವದಲ್ಲಿ ಟೀಮ್ ಇಂಡಿಯಾ ಆಡಿರುವ ಮೂರು ಟಿ20 ಸರಣಿಗಳಲ್ಲಿ ಗೆಲುವು ಸಾಧಿಸಿದೆ. ಜೊತೆಗೆ ಅವರು ಕೂಡ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ತಂಡಕ್ಕೆ ಆಸರೆಯಾಗಿದ್ದಾರೆ.
ಐಪಿಎಲ್ 2025ಕ್ಕೆ ಮುಂಬೈ ಇಂಡಿಯನ್ಸ್ ತಂಡ
ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ, ತಿಲಕ್ ವರ್ಮಾ, ಟ್ರೆಂಟ್ ಬೌಲ್ಟ್, ನಮನ್ ಧೀರ್, ರಾಬಿನ್ ಮಿಂಜ್, ಕರ್ಣ್ ಶರ್ಮಾ, ರಿಯಾನ್ ರಿಕಲ್ಟನ್, ದೀಪಕ್ ಚಾಹರ್, ಅಲ್ಲಾ ಘಜನ್ಫರ್, ವಿಲ್ ಜಾಕ್ವೆಸ್, ಅಶ್ವಿನಿಯಂತ್ ಕುಮಾರ್, ಅಶ್ವಿನಿಯಂತ್ ಕುಮಾರ್ , ರೀಸ್ ಟೋಪ್ಲಿ, ಶ್ರೀಜಿತ್ ಕೃಷ್ಣ, ಎಸ್ ರಾಜು, ಬೆವೆನ್ ಜೇಕಬ್ಸ್, ಅರ್ಜುನ್ ತೆಂಡೂಲ್ಕರ್, ಹಲ್ಲಿ ವಿಲಿಯಮ್ಸ್, ವಿಗ್ರೇಶ್ ಪುತ್ತೂರು, ರಾಜ್ ಅಂಗದ್ ಬಾವ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications