IPL 2025 CSK vs RCB: ವಿರಾಟ್ ಕೊಹ್ಲಿ ಚೆನ್ನೈ ಸೂಪರ್ ಕಿಂಗ್ಸ್‌ಗೆ ಈ 3 ಕಾರಣಗಳಿಗೆ ವಿಲನ್
ಐಪಿಎಲ್ 2025 ರಲ್ಲಿ ಇಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಐಪಿಎಲ್ 2025ರ ಎಂಟನೇ ಪಂದ್ಯ ನಡೆಯಲಿದೆ. ಉಭಯ ತಂಡಗಳಲ್ಲಿ ಸ್ಟಾರ್ ಆಟಗಾರರ ದಂಡೆಯಿದ್ದು, ದಾಖಲೆಗಳನ್ನು ಸೃಷ್ಟಿಸಲು ಸಜ್ಜಾಗಿದ್ದಾರೆ. ಸಿಎಸ್‌ಕೆ ಮಾಜಿ ನಾಯಕ ಎಂಎಸ್ ಧೋನಿ ಮತ್ತು ಆರ್‍ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಇಬ್ಬರು ಆಟಗಾರರು ತಮ್ಮ ತಂಡಗಳಿಗೆ ನಾಯಕರಾಗಿಲ್ಲ. ಆದರೂ ಈ ಇಬ್ಬರೂ ಮೇಲಿರುವ ಕ್ರೇಜ್ ಕಮ್ಮಿ ಆಗಿಲ್ಲ.
ಕಳೆದ ಕೆಲವು ಐಪಿಎಲ್ ಸೀಸನ್‌ಗಳಿಂದ ಧೋನಿ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹೀಗಾಗಿ ಅವರ ಬ್ಯಾಟಿಂಗ್ ನೋಡಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದಾರೆ. ಮತ್ತೊಂದೆಡೆ ವಿರಾಟ್ ಕೊಹ್ಲಿ ಟಾಪ್ ಆರ್ಡರ್‍ನಲ್ಲಿ ಬ್ಯಾಟಿಂಗ್ ಮಾಡುವ ರನ್ ಗಳಿಸುತ್ತಿದ್ದಾರೆ.

ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ವಿರಾಟ್ ಕೊಹ್ಲಿ ಪ್ರದರ್ಶನದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಮೂರು ಕಾರಣಗಳಿಗೆ ವಿರಾಟ್ ಕೊಹ್ಲಿ ಸಿಎಸ್‌ಕೆ ತಂಡಕ್ಕೆ ವಿಲನ್ ಆಗಿದ್ದು, ಈ ಬಗ್ಗೆ ಇಲ್ಲಿದೆ ಮಾಹಿತಿ.
ಸಿಎಸ್‌ಕೆ ವಿರುದ್ಧ ಉತ್ತಮ ದಾಖಲೆ
ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ಹಲವು ತಂಡಗಳ ವಿರುದ್ಧ ಸಾವಿರಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಅವುಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೂಡ ಒಂದು. ಸಿಎಸ್‌ಕೆ ವಿರುದ್ಧ ವಿರಾಟ್ ಕೊಹ್ಲಿ ಅದ್ಭುತ ದಾಖಲೆ ಹೊಂದಿದ್ದಾರೆ. ಇದುವರೆಗೆ ಸಿಎಸ್‌ಕೆ ವಿರುದ್ಧ 33 ಪಂದ್ಯಗಳಲ್ಲಿ 37.60 ಸರಾಸರಿಯಲ್ಲಿ 1053 ರನ್ ಗಳಿಸಿದ್ದಾರೆ. ಈ ವೇಳೆ ಅವರು 9 ಭರ್ಜರಿ ಅರ್ಧಶತಕ ಸಿಡಿಸಿದ್ದಾರೆ.
ವಿರಾಟ್ ಕೊಹ್ಲಿ ಪ್ರಸ್ತುತ ಫಾರ್ಮ್
ಇತ್ತೀಚೆಗೆ ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಮ್ ಇಂಡಿಯಾ ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು. ಈ ಟೂರ್ನಿಯಲ್ಲಿ ವಿರಾಟ್ವ ಕೊಹ್ಲಿ ಕೆಲವು ಅಮೋಘ ಇನ್ನಿಂಗ್ಸ್‌ಗಳನ್ನು ಆಡಿದ್ದರು. ಪಾಕಿಸ್ತಾನ ವಿರುದ್ಧ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಕೊಹ್ಲಿ ಅದೇ ಫಾರ್ಮ್‌ನೊಂದಿಗೆ ಐಪಿಎಲ್ 2025 ರ ಸೀಸನ್‌ಗೆ ಬಂದಿದ್ದಾರೆ. ಕೆಕೆಆರ್ ವಿರುದ್ಧದ ಮೊದಲ ಪಂದ್ಯದಲ್ಲಿಯೇ ಅದ್ಭುತ ಅರ್ಧಶತಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಉತ್ತಮ ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ ಸಿಎಸ್‌ಕೆ ಬೌಲರ್ಸ್‌ಗೆ ಕಾಟ ನೀಡಬಹುದು.
ಬಿಗ್ ಮ್ಯಾಚ್ ಇನ್ನಿಂಗ್ಸ್
ವಿರಾಟ್ ಕೊಹ್ಲಿಮ ಪ್ರತಿಯೊಂದು ಪಂದ್ಯದಲ್ಲೂ ತಮ್ಮ ಅತ್ಯುತ್ತಮ ಪ್ರದರ್ಶನ ನೀಡುತ್ತಾರೆ. ಆದರೆ ಬಿಗ್ ಮ್ಯಾಚ್ ಆಡುವಾಗ ವಿರಾಟ್ ಕೊಹ್ಲಿ ಬೇರೆ ರೂಪದಲ್ಲಿ ಕಾಣಿಸಿಕೊಳ್ಳುತ್ತಾರೆ. ಕ್ರಿಕೆಟ್ ಅಭಿಮಾನಿಗಳು ಇದನ್ನು ಸಾಕಷ್ಟು ವೇಳೆ ಅಂತಾರಾಷ್ಟ್ರೀಯ ಕ್ರಿಕೆಟ್ ಮತ್ತ ಐಪಿಎಲ್‌ನಲ್ಲಿ ನೋಡಿರುತ್ತಾರೆ. ಇಂದಿನ ಐಪಿಎಲ್ 2025ರ ಲೀಗ್ ಪಂದ್ಯದಲ್ಲಿ ನಡೆಯುತ್ತಿದ್ದರೂ, ಉಭಯ ತಂಡಗಳು ನಡುವಿನ ಪೈಪೋಟಿ ಪ್ರಬಲವಾಗಿದೆ. ಈ ಕಾರಣಕ್ಕಾಗಿ ವಿರಾಟ್ ಕೊಹ್ಲಿ ಮತ್ತೊಮ್ಮೆ ಸಿಎಸ್‌ಕೆ ವಿರುದ್ಧ ಬಿಗ್ ಇನ್ನಿಂಗ್ಸ್ ಆಡುವ ನಿರೀಕ್ಷೆಯಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications