ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ರ ಟೂರ್ನಿಯಲ್ಲಿ ಆಸ್ಟ್ರೇಲಿಯಾದ ಯುವ ಬ್ಯಾಟರ್ ಜೇಕ್ ಫ್ರೇಸರ್ ಮೆಕ್‌ಗುರ್ಕ್ ಸದ್ದು ಮಾಡಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಜೇಕ್ ಫ್ರೇಸರ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಅವರು ಆಡಿದ 9 ಇನಿಂಗ್ಸ್‌ಗಳಲ್ಲಿ ಒಟ್ಟು 330 ರನ್ ಕಲೆ ಹಾಕಿದ್ದರು. ಸ್ಥಿರ ಬ್ಯಾಟಿಂಗ್ ಪ್ರದರ್ಶನ ತೋರಿದ ಅವರು 32 ಫೋರ್ ಹಾಗೂ 28 ಸಿಕ್ಸರ್‌ಗಳನ್ನು ಬಾರಿಸಿದ್ದರು. ಐಪಿಎಲ್‌ನಲ್ಲಿ ಇಷ್ಟೆಲ್ಲ ಸದ್ದು ಮಾಡಿದ ಜೇಕ್ ಫ್ರೇಸರ್ ಅವರು ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್‌ನಲ್ಲಿ ಅಟ್ಟರ್ ಫ್ಲಾಪ್ ಆಗಿದ್ದಾರೆ.
ಬಿಗ್ ಬ್ಯಾಷ್ ಲೀಗ್‌ನಲ್ಲಿ ಜೇಕ್ ಫ್ರೇಸರ್ ಎದುರಿಸುತ್ತಿರುವ ಫಾರ್ಮ್ ಸಮಸ್ಯೆ ಐಪಿಎಲ್ 2025ರ ಟೂರ್ನಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಟೆಕ್ಷನ್ ತರಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿಯ ಮೆಗಾ ಹರಾಜಿನಲ್ಲಿ ಸ್ಟಾರ್ ಆಟಗಾರರಿಗೆ ಮಣೆ ಹಾಕುವ ಮೂಲಕ ತಂಡಕ್ಕೆ ಸೇರಿಸಿಕೊಂಡಿದೆ. ಅದರಲ್ಲಿ ಸ್ಪೋಟಕ ಬ್ಯಾಟರ್ ಜೇಕ್ ಫ್ರೇಸರ್ ಕೂಡ ಒಬ್ಬರು.

ಕಳೆದ ಬಾರಿ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಜೇಕ್ ಫ್ರೇಸರ್ ಅಬ್ಬರಿಸಿದ್ದರು. ಹೀಗಾಗಿ ಐಪಿಎಲ್ 2025ರ ಟೂರ್ನಿಗೂ ಯುವ ಆಟಗಾರನನ್ನು ಬರೋಬ್ಬರಿ 9 ಕೋಟಿ ರೂ. ನೀಡಿ ಮತ್ತೆ ಡೆಲ್ಲಿ ಫ್ರಾಂಚೈಸಿ ಖರೀದಿಸಿದೆ. ಆದರೆ ಬಿಗ್ ಬ್ಯಾಷ್ ಲೀಗ್‌ನಲ್ಲಿ ಜೇಕ್ ಫ್ರೇಸರ್ ಹೇಳಿಕೊಳ್ಳವಂತಹ ಬ್ಯಾಟಿಂಗ್ ಪ್ರದರ್ಶನ ನೀಡಿಲ್ಲ. ಇದು ಡೆಲ್ಲಿ ಕ್ಯಾಪಿಟಲ್ಸ್‌ಗೆ ತಲೆನೋವು ತಂದಿದೆ.
ಬಿಗ್ ಬ್ಯಾಷ್ ಲೀಗ್‌ನಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ಪರ ಜೇಕ್ ಫ್ರೇಸರ್ ಆಡುತ್ತಿದ್ದಾರೆ. ಇದುವರೆಗೆ ಅವರು ಆಡಿರುವ 9 ಇನಿಂಗ್ಸ್‌ಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದಾರೆ. ಆದರೆ, ಅವರು ರನ್ ಗಳಿಸುವುದರಲ್ಲಿ ಹಿಂದೆ ಉಳಿದಿದ್ದು, ಒಟ್ಟು 93 ರನ್‌ಗಳನ್ನು ಮಾತ್ರ ಗಳಿಸಿದ್ದಾರೆ. ಅವರ ಬ್ಯಾಟ್‌ನಿಂದ ಒಂದೂ ಅರ್ಧಶತಕ ಬರದೆ ಇರುವುದು ಅತ್ಯಂತ ದುಃಖಕರ ಸಂಗತಿ.
ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಅವರನ್ನು ಆರಂಭಿಕ ಬ್ಯಾಟರ್ ಆಗಿ ಕಣಕ್ಕಿಳಿಸುವ ಯೋಜನೆ ಹಾಕಿಕೊಂಡಿತ್ತು. ಆದರೆ, ಇದೀಗ ಜೇಕ್ ಫ್ರೇಸರ್ ಈ ನಿರೀಕ್ಷೆಗೆ ತಕ್ಕಂತೆ ಆಡುತ್ತಿಲ್ಲ. ಇಂತಹ ಸಂದರ್ಭದಲ್ಲಿ ಡೆಲ್ಲಿ ಜೇಕ್ ಫ್ರೇಸರ್ ಅವರನ್ನು ಆರಂಭಿಕ ಬ್ಯಾಟರ್ ಆಗಿ ಆಡಿಸುತ್ತದೆಯೇ? ಎಂಬುದು ಕುತೂಹಲ ಮೂಡಿಸಿದೆ.
ಅಕ್ಷರ್ ಪಟೇಲ್, ಕುಲ್‌ದೀಪ್ ಯಾದವ್, ಟ್ರಿಸ್ಟಾನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಮಿಚೆಲ್ ಸ್ಟಾರ್ಕ್, ಕೆಎಲ್ ರಾಹುಲ್, ಹ್ಯಾರಿ ಬ್ರೂಕ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಟಿ. ನಟರಾಜನ್, ಕರುಣ್ ನಾಯರ್, ಸಮೀರ್ ರಿಜ್ವಿ, ಅಶುತೋಷ್ ಶರ್ಮಾ, ಮೋಹಿತ್ ಶರ್ಮಾ, ಫಾಫ್ ಡು ಪ್ಲೆಸಿಸ್, ಮುಖೇಶ್ ಕುಮಾರ್, ದರ್ಶನ್ ನಲ್ಕಂಡೆ, ವಿಪ್ರಜ್ ನಿಗಮ್, ದುಷ್ಮಂತ ಚಮೀರಾ, ಡೊನೊವನ್ ಫೆರೇರಾ, ಅಜಯ್ ಮಂಡಲ್, ಮನ್ವಂತ್ ಕುಮಾರ್, ತ್ರಿಪುರಾಣ ವಿಜಯ್, ಮಾಧವ್ ತಿವಾರಿ.