IPL 2025 :ಅಪ್ಪನನ್ನು ಮೈದಾನದಲ್ಲಿ ಹುರಿದುಂಬಿಸಿದ ಅಂಗದ್ ಬುಮ್ರಾ
ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮುಂಬೈ ಇಂಡಿಯನ್ಸ್ 4 ವಿಕೆಟ್‌ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರ ಪುತ್ರ ಅಂಗದ್ ಬುಮ್ರಾ ಗಮನ ಸೆಳೆದರು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅಂಗದ್ ಬುಮ್ರಾ ಮತ್ತು ಅವರ ತಾಯಿ ಸಂಜನಾ ಗಣೇಶನ್ ಅವರ ತಂದೆ ಜಸ್ಪ್ರೀತ್ ಬುಮ್ರಾ ಅವರನ್ನು ಹುರಿದುಂಬಿಸಲು ಹಾಜರಿದ್ದರು.
ಗುರುವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ನ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ 4 ಓವರ್‌ಗಳಲ್ಲಿ 21 ರನ್‌ಗಳಿಗೆ 1 ವಿಕೆಟ್ ಪಡೆದರು. ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಪೋಟಕ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ (37) ಅವರನ್ನು ಜಸ್ಪ್ರೀತ್ ಬುಮ್ರಾ ಔಟ್ ಮಾಡುವ ಮೂಲಕ ಪಂದ್ಯಕ್ಕೆ ತಿರುವು ನೀಡಿದ್ದರು.

ಜಸ್ಪ್ರೀತ್ ಬುಮ್ರಾ ಹೆನ್ರಿಕ್ ಕ್ಲಾಸೆನ್ ಅವರನ್ನು ಔಟ್ ಮಾಡಿದ ತಕ್ಷಣ, ಕ್ರೀಡಾಂಗಣದಲ್ಲಿ ಹಾಜರಿದ್ದ ಅವರ ಮಗ ಅಂಗದ್ ಮತ್ತು ಪತ್ನಿ ಸಂಜನಾ ಗಣೇಶನ್ ಸಂಭ್ರಮಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ದಕ್ಷಿಣ ಆಫ್ರಿಕಾದ ಸನ್‌ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟರ್ ಜಸ್ಪ್ರೀತ್ ಬುಮ್ರಾ ಅವರು 28 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳ ನೆರವಿನಿಂದ 37 ರನ್ ಗಳಿಸಿದರು. ಆದರೆ ಹೆನ್ರಿಕ್ ಕ್ಲಾಸೆನ್ ಅವರನ್ನು ಅದ್ಭುತ ಯಾರ್ಕರ್ ಮೂಲಕ ಬುಮ್ರಾ ಔಟ್ ಮಾಡಿದರು. ವಿಲ್ ಜ್ಯಾಕ್ಸ್ ಅವರ ಆಲ್‌ರೌಂಡರ್ ಪ್ರದರ್ಶನದ ಸಹಾಯದಿಂದ ಮುಂಬೈ ಇಂಡಿಯನ್ಸ್ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿ ಎರಡು ಪ್ರಮುಖ ಅಂಕಗಳನ್ನು ಪಡೆಯಿತು.
ಮುಂಬೈಗೆ ಜ್ಯಾಕ್ಸ್ ಗಿಫ್ಟ್
ಮುಂಬೈ ಇಂಡಿಯನ್ಸ್ ಪರ ವಿಲ್ ಜ್ಯಾಕ್ಸ್ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದರು. ವಿಲ್ ಜ್ಯಾಕ್ಸ್ 3 ಓವರ್‌ಗಳಲ್ಲಿ 14 ರನ್‌ಗಳಿಗೆ 2 ವಿಕೆಟ್‌ಗಳನ್ನು ಪಡೆದರು. ಇನ್ನೂ ಬ್ಯಾಟಿಂಗ್‌ನಲ್ಲಿಯೂ ವಿಲ್ ಜ್ಯಾಕ್ಸ್ 26 ಎಸೆತಗಳಲ್ಲಿ 3 ಬೌಂಡರಿ ಮತ್ತು 3 ಸಿಕ್ಸರ್‌ಗಳೊಂದಿಗೆ 36 ರನ್‌ಗಳನ್ನು ಬಾರಿಸುವ ಮೂಲಕ ಮುಂಬೈ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ಬ್ಯಾಟರ್ಸ್ 20 ಓವರ್‌ಗಳಲ್ಲಿ ಐದು ವಿಕೆಟ್‌ಗಳಿಗೆ 162 ರನ್‌ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications