IPL 2025: ಮುಂಬೈ ಇಂಡಿಯನ್ಸ್‌ಗೆ ಹಿನ್ನಡೆ; ಆರಂಭಿಕ ಪಂದ್ಯಗಳಿಗೆ ಜಸ್ಪ್ರೀತ್ ಬುಮ್ರಾ ಅಲಭ್ಯ
ಚಾಂಪಿಯನ್ಸ್ ಟ್ರೋಫಿ 2025ರ ನಂತರ ಟೀಮ್ ಇಂಡಿಯಾ ಆಟಗಾರರು ಐಪಿಎಲ್ 18ನೇ ಸೀಸನ್‌ಗೆ ತಯಾರಿ ನಡೆಸುತ್ತಿದ್ದಾರೆ. ಐಪಿಎಲ್ 2025ರ ಟೂ ಮಾರ್ಚ್ 22 ರಿಂದ ಪ್ರಾರಂಭವಾಗಲಿದೆ. ಉದ್ಘಾಟನಾ ಪಂದ್ಯವು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಡುವೆ ನಡೆಯಲಿದೆ. ಆದರೆ ಈ ಮೆಗಾ ಲೀಗ್ ಆರಂಭವಾಗುವ ಮೊದಲೇ ಗಾಯಾಳು ಆಟಗಾರರ ಭವಿಷ್ಯ ಪ್ರಶ್ನಾರ್ಥಕ ಚಿಹ್ನೆಯಾಗಿಯೇ ಉಳಿದಿವೆ. ವರದಿಗಳ ಪ್ರಕಾರ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಮತ್ತು ಇತರ ಇಬ್ಬರು ಸ್ಟಾರ್ ಆಟಗಾರರು ಐಪಿಎಲ್ 2025 ರ ಆರಂಭಿಕ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.
ಆಸ್ಟ್ರೇಲಿಯಾ ಪ್ರವಾಸದ ವೇಳೆ ಗಾಯಗೊಂಡಿದ್ದ ಜಸ್ಪ್ರೀತ್ ಬುಮ್ರಾ ಕೆಲವು ತಿಂಗಳುಗಳಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ. ಫಿಟ್ನೆಸ್ ಸಮಸ್ಯೆಯಿಂದಾಗಿ ಅವರನ್ನು 2025 ರ ಚಾಂಪಿಯನ್ಸ್ ಟ್ರೋಫಿಯ ಭಾರತ ತಂಡದಿಂದ ಹೊರಗಿಡಲಾಯಿತು.

ಇತ್ತೀಚೆಗೆ ಜಸ್ಪ್ರೀತ್ ಬುಮ್ರಾ ಬೌಲಿಂಗ್ ಮಾಡಲು ಪ್ರಾರಂಭಿಸಿರುವುದು ಸಮಾಧಾನಕರ ಸಂಗತಿಯಾಗಿದೆ. ಆದರೆ ವರದಿಗಳ ಪ್ರಕಾರ, ಅವರು ಮೈದಾನಕ್ಕೆ ಇಳಿಯಲು ಸಂಪೂರ್ಣವಾಗಿ ಫಿಟ್ ಆಗಿಲ್ಲ ಎಂದು ವರದಿಗಳಾಗಿವೆ. ಬುಮ್ರಾ ಐಪಿಎಲ್‌ನ ಆರಂಭಿಕ ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆ ಇದೆ. ಏಪ್ರಿಲ್ ಮೊದಲ ವಾರದಲ್ಲಿ ಬುಮ್ರಾ ಮುಂಬೈ ಇಂಡಿಯನ್ಸ್ ತಂಡವನ್ನು ನಿರೀಕ್ಷೆಯಿದೆ.
ಲಕ್ನೋಗೆ ಹೊಡೆತ
ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ಮಯಾಂಕ್ ಯಾದವ್ ಐಪಿಎಲ್ 2024 ರಲ್ಲಿ 150 ಕಿಮೀ ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ಸುದ್ಧಿಯಾಗಿದ್ದರು. ತಮ್ಮ ಐಪಿಎಲ್ ಚೊಚ್ಚಲ ಪಂದ್ಯದಲ್ಲಿಯೇ ಸ್ಥಿರ ಬೌಲಿಂಗ್ ಪ್ರದರ್ಶನ ಮಾಡುವ ಮೂಲಕ ಅವರು ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದರು. ಅವರು ಸತತ ಎರಡು ಪಂದ್ಯಗಳಲ್ಲಿ ಅದ್ಭುತ ಬೌಲಿಂಗ್ ಮಾಡಿದರು. ಆದರೆ ಫಿಟ್ನೆಸ್ ಸಮಸ್ಯೆಗಳಿಂದಾಗಿ, ಅವರು ಕೇವಲ 4 ಪಂದ್ಯಗಳನ್ನು ಮಾತ್ರ ಆಡುವಲ್ಲಿ ಯಶಸ್ವಿಯಾದರು. ಮೈದಾನಕ್ಕೆ ಹಿಂದಿರುಗಿದ ನಂತರ, ಅವರಿಗೆ ಬಾಂಗ್ಲಾದೇಶ ವಿರುದ್ಧ ಭಾರತದ ಪರ ಪಾದಾರ್ಪಣೆ ಮಾಡುವ ಅವಕಾಶವೂ ಸಿಕ್ಕಿತು.
ಈಗ ಐಪಿಎಲ್ 2025 ಕ್ಕೂ ಮೊದಲು, ಮಯಾಂಕ್ ಯಾದವ್ ಅವರು ಹೊಸ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಮಯಾಂಕ್ ಗಾಯದ ಬಗ್ಗೆ ಬಿಸಿಸಿಐ ಇನ್ನೂ ಯಾವುದೇ ಮಾಹಿತಿ ನೀಡಿಲ್ಲ, ಆದರೆ ವರದಿಯ ಪ್ರಕಾರ, ಮಯಾಂಕ್ ಒತ್ತಡ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಈ ಗಾಯದಿಂದಾಗಿ ಅವರು ಆರಂಭಿಕ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ.
ಪಾಂಡ್ಯ ನಿಷೇಧ
ಟೀಮ್ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಐಪಿಎಲ್ 2025ರ ಆರಂಭಿಕ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಮುಂಬೈ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಕಳೆದ ಋತುವಿನ ಕೊನೆಯ ಪಂದ್ಯದಲ್ಲಿ ಮೂರನೇ ಬಾರಿಗೆ ನಿಧಾನಗತಿಯ ಓವರ್ ಮಾಡಿದ್ದರು. ಹೀಗಾಗಿ ನಿಯಮಗಳ ಪ್ರಕಾರ, ಮೊದಲ ಬಾರಿಗೆ 12 ಲಕ್ಷ ರೂ., ಎರಡನೇ ಬಾರಿಗೆ 24 ಲಕ್ಷ ರೂ. ಮತ್ತು ಮೂರನೇ ಬಾರಿಗೆ ತಂಡದ ಇತರ ಆಟಗಾರರಿಗೂ ದಂಡ ವಿಧಿಸಲಾಗುತ್ತದೆ. ಇದರಲ್ಲಿ ಒಂದು ಪಂದ್ಯದ ನಿಷೇಧವನ್ನೂ ವಿಧಿಸಲಾಗಿದೆ. ನಿಷೇಧದಿಂದಾಗಿ ಹಾರ್ದಿಕ್ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications