Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2025: ಆರ್‌ಸಿಬಿಗೆ ಗುಡ್ ನ್ಯೂಸ್; ವೇಗಿ ಎಂಐ ಸೇರೋದು ಡೌಟ್

ಸೋಮವಾರ ವಾಂಖೆಡೆ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ತವರಿನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋತ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನ ನಿರೀಕ್ಷೆಯಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗುಡ್ ನ್ಯೂಸ್ ಸಿಕ್ಕಿದೆ. ಸ್ಟಾರ್ ವೇಗಿಯ ಆಗಮನಕ್ಕಾಗಿ ಕಾಯುತ್ತಿದ್ದ ಮುಂಬೈ ಇಂಡಿಯನ್ಸ್ ತಂಡಕ್ಕೆ ನಿರಾಸೆಯಾಗಿದೆ.

ವರದಿಗಳ ಪ್ರಕಾರ, ಜಸ್ಪ್ರೀತ್ ಬುಮ್ರಾ ಶನಿವಾರ ಸಂಜೆ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಇದಕ್ಕೂ ಮೊದಲು ಅವರು ಶನಿವಾರ ಬೆಳಿಗ್ಗೆ ಸಿಒಇಯಲ್ಲಿ ಅಭ್ಯಾಸ ಪಂದ್ಯವನ್ನು ಆಡಿದ್ದಾರೆ. ನಂತರ ಅವರಿಗೆ ವೈದ್ಯಕೀಯ ತಂಡದಿಂದ ಹಸಿರು ನಿಶಾನೆ ಸಿಕ್ಕಿದೆ.

IPL 2025 Jasprit Bumrah Will play for Mumbai Indians in the match against Royal Challengers Bengaluru

ಜಸ್ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್ ಪರ ಆಡಲು ಸಂಪೂರ್ಣವಾಗಿ ಫಿಟ್ ಆಗಿದ್ದು, ತಂಡಕ್ಕೆ ಮರಳಿರುವುದು ತಂಡಕ್ಕೆ ಆನೆ ಬಲ ಬಂತಾಗಿದೆ. ಐಪಿಎಲ್ 2025 ರಲ್ಲಿ ಕಳಪೆ ಪ್ರದರ್ಶನದಿಂದ ಮುಂಬೈ ಇಂಡಿಯನ್ಸ್ ಉತ್ತಮ ಆರಂಭ ಕಂಡಿಲ್ಲ. ಇಂತಹ ಸಂದರ್ಭದಲ್ಲಿ ಅವರು ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಆಡುತ್ತಾರೋ ಇಲ್ಲವೋ ಎಂಬುದು ಇನ್ನೂ ಖಚಿತವಾಗಿಲ್ಲ.

ಆಸ್ಟ್ರೇಲಿಯಾ ವಿರುದ್ಧದ ಐದನೇ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಪಂದ್ಯದ ಎರಡನೇ ದಿನದಂದು ಬೆನ್ನುನೋವಿನಿಂದ ಬಳಲುತ್ತಿದ್ದ ಜಸ್ಪ್ರೀತ್ ಬುಮ್ರಾ ಕ್ರಿಕೆಟ್ ಮೈದಾನದಿಂದ ಹೊರಗುಳಿದಿದ್ದರು. ಆ ಗಾಯದಿಂದಾಗಿ, ಜಸ್ಪ್ರೀತ್ ಬುಮ್ರಾ ಎರಡನೇ ಇನ್ನಿಂಗ್ಸ್‌ನಲ್ಲಿ ಬೌಲಿಂಗ್ ಮಾಡಲು ಸಾಧ್ಯವಾಗಿಲಿಲ್ಲ.

ಇದಾದ ಬಳಿಕ ಜಸ್ಪ್ರೀತ್ ಬುಮ್ರಾ ಅವರಿಗೆ ಐದು ವಾರಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಲಾಗಿತ್ತು. ಜಸ್ಪ್ರೀತ್ ಬುಮ್ರಾ ಅವರ ಚೇತರಿಕೆ ಪ್ರಕ್ರಿಯೆಯು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ (ಸಿಒಇ) ನಲ್ಲಿ ಪ್ರಾರಂಭವಾಯಿತು. ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್‌ಗಳ ಸರಣಿ ಮತ್ತು ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯಿಂದ ಬುಮ್ರಾ ಹೊರಗುಳಿದಿದ್ದರು. ಈಗ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಭಾರತ ತಂಡದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಪುನರಾಗಮನದ ಬಗ್ಗೆ ಸಾಮಾಜಿಕ ಜಾಲತಾದಲ್ಲಿ ಮಾಹಿತಿ ಹಂಚಿಕೊಂಡಿದೆ.

ಬುಮ್ರಾ ಯಾವಾಗ ಆಡುತ್ತಾರೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಆಡಬೇಕೆ ಅಥವಾ ಬೇಡವೇ ಎಂಬುದು ಅವರ ನಿರ್ಧಾರವಾಗಿರುತ್ತದೆ. ಮುಂಬೈ ಇಂಡಿಯನ್ಸ್ ಹೆಡ್ ಕೋಚ್ ಮಹೇಲ ಜಯವರ್ಧನೆ ಜೊತೆಗೆ ಮ್ಯಾನೇಜ್ಮೆಂಟ್ ಚರ್ಚಿಸಿದ ನಂತರ ಬುಮ್ರಾ ಆಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು.

ಭಾನುವಾರ ಸಂಜೆ 5:30 ಕ್ಕೆ ಮುಂಬೈ ಇಂಡಿಯನ್ಸ್ ಪಂದ್ಯಪೂರ್ವ ಪತ್ರಿಕಾಗೋಷ್ಠಿ ನಡೆಸಲಿದೆ. ಈ ವೇಳೆ ಬುಮ್ರಾ ಆಡುವ ಬಗ್ಗೆ ಜಯವರ್ಧನೆ ಮಾಹಿತಿ ನೀಡುವ ಸಾಧ್ಯತೆಯಿದೆ. ನಂತರ ಸಂಜೆ 6 ರಿಂದ ರಾತ್ರಿ 9 ರವರೆಗೆ ವಾಂಖೆಡೆ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಿದ ನಂತರ ಬುಮ್ರಾ ಲಭ್ಯತೆ ಅಧಿಕೃತವಾಗಿ ತಿಳಿಯಲಿದೆ.

ಜಸ್ಪ್ರೀತ್ ಬುಮ್ರಾ 2013 ರಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿದಾಗಿನಿಂದ ಮುಂಬೈ ಇಂಡಿಯನ್ಸ್ ತಂಡದ ಬೌಲಿಂಗ್‌ನ ಪ್ರಮುಖ ಆಧಾರಸ್ತಂಭವಾಗಿದ್ದಾರೆ. ಮುಂಬೈ ಪರ 133 ಪಂದ್ಯಗಳಲ್ಲಿ 165 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಅವರು ಆಡದ ಏಕೈಕ ಸೀಸನ್ 2023 ಆಗಿತ್ತು. ಆಗ ಅವರು ಬೆನ್ನು ಶಸ್ತ್ರಚಿಕಿತ್ಸೆಯಿಂದಾಗಿ ಚೇತರಿಸಿಕೊಳ್ಳುತ್ತಿದ್ದರು.

Story first published: Sunday, April 6, 2025, 15:16 [IST]
Other articles published on Apr 6, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+