Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2025: ಕೆಕೆಆರ್ vs ಆರ್‌ಸಿಬಿ ಪಂದ್ಯ ನಡೆಯುವುದು ಅನುಮಾನ!

ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರ ಟೂರ್ನಿ ಮಾರ್ಚ್ 22 ರಿಂದ ಪ್ರಾರಂಭವಾಗಲಿದೆ. ಐಪಿಎಲ್ 2025 ರ ಉದ್ಘಾಟನಾ ಪಂದ್ಯವನ್ನು ಆಡಲು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಸಜ್ಜಾಗಿವೆ. ಉಭಯ ತಂಡಗಳ ಆಭಿಮಾನಿಗಳು ಕೂಡ ಹೈವೋಲ್ಟೇಜ್ ಉದ್ಘಾಟನಾ ಪಂದ್ಯಕ್ಕಾಗಿ ಕಾಯುತ್ತಿದ್ದಾರೆ. ಆದರೆ ವರದಿಗಳ ಪ್ರಕಾರ, ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಕೆಕೆಆರ್ ಮತ್ತು ಆರ್‍‌ಸಿಬಿ ನಡುವಿನ ಪಂದ್ಯ ನಡೆಯುವುದು ಅನುಮಾನವಾಗಿದೆ.

ಐಪಿಎಲ್ 2025 ರ ಸೀಸನ್ ಅದ್ಧೂರಿ ಉದ್ಘಾಟನಾ ಕಾರ್ಯಕ್ರಮಗಳೊಂದಿಗೆ ಆರಂಭವಾಗಲಿದ್ದು, ಬಹುಭಾಷಾ ಗಾಯಕಿ ಶ್ರೇಯಾ ಘೋಷಾಲ್, ಕರಣ್ ಔಜ್ಲಾ ಮತ್ತು ಬಾಲಿವುಡ್ ಸ್ಟಾರ್ ನಟಿ ದಿಶಾ ಪಟಾನಿ ಐಪಿಎಲ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಲಿದ್ದಾರೆ. ಆದರೆ, ಮಳೆ ಈ ಕಾರ್ಯಕ್ರಮಕ್ಕೆ ಅಡ್ಡಿಯಾಗಬಹುದು ಎಂಬ ಆತಂಕಗಳಿವೆ.

IPL 2025 KKR vs RCB match in doubt due to rain

ಭಾರತ ಹವಾಮಾನ ಇಲಾಖೆ (ಐಎಂಡಿ) ಮಾರ್ಚ್ 22 ರವರೆಗೆ ಕೋಲ್ಕತ್ತಾದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಮಾರ್ಚ್ 20 ರಿಂದ 22 ರವರೆಗೆ ಪಶ್ಚಿಮ ಬಂಗಾಳದ ಕೆಲವು ಭಾಗಗಳಿಗೆ ಕೋಲ್ಕತ್ತಾದ ಪ್ರಾದೇಶಿಕ ಹವಾಮಾನ ಕೇಂದ್ರವು ಆರೆಂಜ್ ಅಲರ್ಟ್ ನೀಡಿದೆ. ಬಂಗಾಳಕೊಲ್ಲಿಯಿಂದ ಕೆಳ ಉಷ್ಣವಲಯದ ಮಟ್ಟದಲ್ಲಿ ಗಾಳಿ ಮತ್ತು ತೇವಾಂಶ ಇರುವುದರಿಂದ ಸತತ ಎರಡು ದಿನಗಳ ಕಾಲ ಪಶ್ಚಿಮ ಬಂಗಾಳದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿ ಮತ್ತು ಮಿಂಚು ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ. ಹೀಗಾಗಿ ಐಪಿಎಲ್ 2025ರ ಉದ್ಘಾಟನಾ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.

ಪಂದ್ಯ ರದ್ದಾದರೆ ನಿಯಮ ಏನು?

ಐಪಿಎಲ್ 2025ರ ಕೆಕೆಆರ್ ಮತ್ತು ಆರ್‍‌ಸಿನಿ ನಡುವಿನ ಉದ್ಘಾಟನಾ ಪಂದ್ಯ ಮಳೆಯಿಂದಾಗಿ ಪಂದ್ಯ ರದ್ದಾದರೆ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕ ಸಿಗಲಿದೆ. ರಜತ್ ಪಟಿದಾರ್ ನೇತೃತ್ವದ ಆರ್‌ಸಿಬಿ ಮತ್ತು ಅಜಿಂಕ್ಯ ರಹಾನೆ ಮುನ್ನಡೆಸುತ್ತಿರುವ ಕೆಕೆಆರ್ ಎರಡೂ ತಂಡಗಳು ಗೆಲುವಿನೊಂದಿಗೆ ಶುಭಾರಂಭ ಮಾಡಲು ಸಜ್ಜಾಗಿವೆ.

ಉಭಯ ತಂಡಗಳು

ಆರ್‌ಸಿಬಿ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಯಶ್ ದಯಾಳ್, ಜೋಶ್ ಹ್ಯಾಜಲ್‌ವುಡ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ರಸಿಕ್ ದಾರ್, ಸುಯಾಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ನುವಾನ್ ತುಷಾರ, ಮನೋಜ್ ಭಂಡಾಗೆ, ಜಾಕೋಬ್ ಬೆಥೆಲ್, ದೇವದತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ.

ಕೆಕೆಆರ್: ಅಜಿಂಕ್ಯ ರಹಾನೆ (ನಾಯಕ), ರಿಂಕು ಸಿಂಗ್, ಕ್ವಿಂಟನ್ ಡಿ ಕಾಕ್, ರಹಮಾನಲ್ಲಾ ಗುರ್ಬಾಜ್, ಅಂಗ್ಕ್ರಿಶ್ ರಘುವಂಶಿ, ವೆಂಕಟೇಶ್ ಅಯ್ಯರ್, ರಮಣದೀಪ್ ಸಿಂಗ್, ಆಂಡ್ರೆ ರಸೆಲ್, ಅನ್ರಿಚ್ ನಾರ್ಟ್ಜೆ, ಹರ್ಷಿತ್ ರಾಣಾ, ಸುನಿಲ್ ನರೈನ್, ವರುಣ್ ಚಕ್ರವರ್ತಿ, ವೈಭವ್ ಅರೋರಾ, ಮಯಾಂಕ್ ಮಾರ್ಕಂಡೆ, ರೋವ್ಮನ್ ಪೊವೆಲ್, ಮನೀಶ್ ಪಾಂಡೆ, ಸ್ಪೆನ್ಸರ್ ಜಾನ್ಸನ್, ಲವ್ನಿತ್ ಸಿಸೋಡಿಯಾ, ಅನುಕುಲ್ ರಾಯ್, ಮೊಯಿನ್ ಅಲಿ, ಉಮ್ರಾನ್ ಮಲಿಕ್.

Story first published: Friday, March 21, 2025, 14:55 [IST]
Other articles published on Mar 21, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+