IPL 2025 MVP: ಚೆಪಾಕ್‌ನಲ್ಲಿ ಸಿಎಸ್‌ಕೆ ಬೌಲರ್‌ಗಳ ಬೆಂಡೆತ್ತಿದ ಕೆಎಲ್ ರಾಹುಲ್
ಐಪಿಎಲ್ 2025ರ 17ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿಕೆಟ್‌ಕೀಪರ್-ಬ್ಯಾಟರ್ ಕೆಎಲ್ ರಾಹುಲ್ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದರು. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಬೌಲರ್‍ಗಳಿಗೆ ಕೆಎಲ್ ರಾಹುಲ್ ಬೆಂಡೆತ್ತಿದರು. ಈ ಮೂಲಕ ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ಕೆಎಲ್ ರಾಹುಲ್ ಅವರು 51 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ 77 ರನ್‌ಗಳನ್ನು ಬಾರಿಸಿದರು. ರಾಹುಲ್ ಅವರ ಅದ್ಭುತ ಇನ್ನಿಂಗ್ಸ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್‍ಗಳಲ್ಲಿ 6 ವಿಕೆಟ್ ನಷ್ಟಕ್ಕೆ 183 ರನ್ ಕಲೆ ಹಾಕಿತು. ಈ ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಡೆಲ್ಲಿ 25 ರನ್‌ಗಳ ಗೆಲುವು ಕಂಡಿತು.

ಫಾಪ್ ಡು ಪ್ಲೆಸಿಸ್ ಅನುಪಸ್ಥಿತಿಯಲ್ಲಿ ಆರಂಭಿಕ ಬ್ಯಾಟರ್ ಆಗಿ ಆಡಿದ ಕೆಎಲ್ ರಾಹುಲ್ ಮೊದಲ ಓವರ್‍ನಿಂದಲ್ಲೇ ಬಿರುಸಿನ ಬ್ಯಾಟಿಂಗ್ ಮಾಡಿದರು. ವಿಶಾಖಪಟ್ಟಣದಲ್ಲಿ ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಬಿಗ್ ಇನ್ನಿಂಗ್ಸ್ ಆಡುವಲ್ಲಿ ವಿಫಲವಾಗಿದ್ದರು. ಆದರೆ ಸಿಎಸ್‌ಕೆ ವಿರುದ್ಧ ತಮ್ಮ ಆಟವನ್ನು ಸಂಪೂರ್ಣವಾಗಿ ವಿಭಿನ್ನ ಮಟ್ಟಕ್ಕೆ ಕೊಂಡೊಯ್ದರು.
ಕೆಎಲ್ ರಾಹುಲ್ ಐಪಿಎಲ್ 2025 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಮೊದಲ ಅರ್ಧಶತಕ ಸಿಡಿಸಿ ಮಿಂಚಿದರು. ಇದಲ್ಲದೆ, ಸಿಎಸ್‌ಕೆ ವಿರುದ್ಧ ಅವರು ಆರನೇ ಅರ್ಧಶತಕ ಬಾರಿಸಿ ದಾಖಲೆಯನ್ನು ಮಾಡಿದರು. ಈ ಮೂಲಕ ಚೆನ್ನೈ ವಿರುದ್ಧ ಅತಿ ಹೆಚ್ಚು ಅರ್ಧಶತಕಗಳ ಸಿಡಿಸಿದವರ ಪಟ್ಟಿಯಲ್ಲಿ ಕೆಎಲ್ ರಾಹುಲ್ 4ನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಇದಕ್ಕೂ ಮೊದಲು ಗೌತಮ್ ಗಂಭೀರ್ ಸಹ ಚೆನ್ನೈ ವಿರುದ್ಧ 6 ಅರ್ಧಶತಕ ಗಳಿಸಿ ಸಾಧನೆ ಮಾಡಿದ್ದರು.
ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅತಿ ಹೆಚ್ಚು ಅರ್ಧಶತಕ ಗಳಿಸಿರುವ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಮಾಜಿ ಸ್ಪೋಟಕ ಬ್ಯಾಟರ್ ಡೇವಿಡ್ ವಾರ್ನರ್ (9 ಅರ್ಧಶತಕ, 1 ಶತಕ) ಮೊದಲ ಸ್ಥಾನದಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ಮಾಜಿ ಆರಂಭಿಕ ಬ್ಯಾಟರ್ ಶಿಖರ್ ಧವನ್ (8 ಅರ್ಧಶತಕ, 1 ಶತಕ) ಇದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (9) ಮೂರನೇ ಸ್ಥಾನದಲ್ಲಿದ್ದಾರೆ.
ಪವರ್ ಪ್ಲೇನಲ್ಲಿ ಕೆಎಲ್ ರಾಹುಲ್ ಹೆಚ್ಚಾಗಿ ಸ್ಟ್ರೇಕ್ ಉಳಿಸಿಕೊಂಡು ರನ್ ಕಲೆ ಹಾಕಿದರು. ಜೇಕ್ ಫ್ರೇಸರ್ ಮೆಕ್‌ಗುರ್ಕ್ ಔಟಾದ ನಂತರ ಯುವ ಬ್ಯಾಟರ್ ಅಭಿಷೇಕ್ ಪೊರೆಲ್ ಅವರೊಂದಿಗೆ ರಾಹುಲ್ 54 ರನ್‌ಗಳ ಜೊತೆಯಾಟ ಆಡುವ ಮೂಲಕ ಡೆಲ್ಲಿ ತಂಡಕ್ಕೆ ನೆರೆವಾದರು. ಇದಾದ ಬಳಿಕ ಮಧ್ಯಮ ಓವರ್‍ಗಳಲ್ಲಿಯೂ ಸಿಎಸ್‌ಕೆ ಬೌಲರ್‍ಗಳನ್ನು ರಾಹುಲ್ ಕಾಡಿದರು. ಇದರೊಂದಿಗೆ ಡೆಲ್ಲಿ ತಂಡ ಬಿಗ್ ಸ್ಕೋರ್ ಗಳಿಸಲು ರಾಹುಲ್ ಕಾರಣವಾದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications