Bhuvneshwar Kumar: ಆರ್‌ಸಿಬಿ ಬೌಲಿಂಗ್‌ಗೆ ಬಲ ತುಂಬಿದ ಭುವಿ!
ಭಾರತ ತಂಡದಲ್ಲಿ ಅವಕಾಶ ಸಿಗದೆ ಹೊರಗುಳಿದಿದ್ದ ಸ್ಟಾರ್ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಅವರ ಅದೃಷ್ಟ ಖುಲಾಯಿಸಿದೆ. ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಫ್ರಾಂಚೈಸಿ ಭುವನೇಶ್ವರ್ ಕುಮಾರ್ ಅವರನ್ನು 10.75 ಕೋಟಿ ರೂ. ಬಿಡ್ ಮಾಡಿದೆ. ಈ ಮೂಲಕ ಆರ್‌ಸಿಬಿ ತನ್ನ ಬೌಲಿಂಗ್ ವಿಭಾಗವನ್ನು ಮತ್ತಷ್ಟು ಬಲಿಷ್ಠ ಮಾಡಿಕೊಂಡಿದೆ.
ಭುವಿ ಟೀಮ್ ಇಂಡಿಯಾ ಪರ ಕರಾರುವಕ್ಕಾದ ಬೌಲಿಂಗ್ ಪ್ರದರ್ಶನದ ಮೂಲಕ ಎದುರಾಳಿ ಬ್ಯಾಟರ್‌ಗಳ ನಿದ್ದೆಗೆಡಿಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಯುವ ಆಟಗಾರರ ಆಗಮನದಿಂದಾಗಿ ಭುವಿ ಟೀಮ್ ಇಂಡಿಯಾದಲ್ಲಿ ಅವಕಾಶ ಕಳೆದುಕೊಂಡಿದ್ದಾರೆ. ಆದರೆ, ಈಗ ಐಪಿಎಲ್ 2025ರ ಆವೃತ್ತಿಯಲ್ಲಿ ಆರ್‌ಸಿಬಿ ಪರ ಮಿಂಚಲು ಸಜ್ಜಾಗಿದ್ದಾರೆ. ಈಗಾಗಲೇ ಆರ್‌ಸಿಬಿ ಜೋಶ್ ಹ್ಯಾಜಲ್‌ವುಡ್, ಯಶ ದಯಾಳ್, ರಸಿಖ್ ದರ್ ಅವರಂತಹ ವೇಗದ ಬೌಲರ್‌ಗಳನ್ನು ಹೊಂದಿದೆ. ಈಗ ಮತ್ತೊಮ್ಮೆ ಆರ್‌ಸಿಬಿ ಸೇರಿರುವ ಭುವಿ ಬೌಲಿಂಗ್ ವಿಭಾಗಕ್ಕೆ ಬಲ ತಂದಿದ್ದಾರೆ.

ಭುವನೇಶ್ವರ್ ಕುಮಾರ್ ಪವರ್ ಪ್ಲೇ ಮತ್ತು ಡೆತ್ ಓವರ್‌ಗಳಲ್ಲಿ ಬೌಲಿಂಗ್ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಅಲ್ಲದೆ, ತಮ್ಮ ಸ್ವಿಂಗ್ ಬೌಲಿಂಗ್ ಮೂಲಕ ವಿಕೆಟ್ ಟೇಕರ್ ಬೌಲರ್ ಆಗಿಯೂ ಗುರುತಿಸಿಕೊಂಡಿದ್ದಾರೆ. ಈ ಎಲ್ಲಾ ಅನುಭವಗಳನ್ನು ಹೊಂದಿರುವ ಭುವಿ ಅವರನ್ನು ಆರ್‌ಸಿಬಿ ಬಿಡ್ ಮಾಡಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications