IPL 2025 Mega Auction: ಮೊದಲ ದಿನ ದುಬಾರಿ ಬೆಲೆಗೆ ಬಿಕರಿ ಆದ ಆಟಗಾರರು
ಐಪಿಎಲ್ 2025ರ ಮೆಗಾ ಹರಾಜಿನ ಮೊದಲ ದಿನವು ಉತ್ಸಾಹದಿಂದ ತುಂಬಿತ್ತು. ನವೆಂಬರ್ 24 ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ಫ್ರಾಂಚೈಸಿಗಳು ಆಟಗಾರರನ್ನು ಶ್ರೀಮಂತರಾಗಿ ಮಾಡಿದವು. ಆದರೆ, ಕೆಲ ಆಟಗಾರರಿಗೆ ಅದೃಷ್ಟ ಒಲಿಯಲಿಲ್ಲ. ಮೊದಲ ದಿನ 84 ಆಟಗಾರರ ಮೇಲೆ ಬಿಡ್ಡಿಂಗ್ ನಡೆದಿದ್ದು, ಅದರಲ್ಲಿ 72 ಆಟಗಾರರ ಮೇಲೆ ಹಣದ ಸುರಿಮಳೆಯಾಯಿತು. 12 ಮಾರಾಟವಾಗದಿರುವುದು ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.
ಈಗ ನವೆಂಬರ್ 25 ರಂದು ನಡೆಯಲಿರುವ ಐಪಿಎಲ್ ಮೆಗಾ ಹರಾಜಿನಲ್ಲಿ ಇನ್ನುಳಿದ ಸ್ಟಾರ್ ಆಟಗಾರರ ಭವಿಷ್ಯ ನಿರ್ಧಾರವಾಗಲಿದೆ. ಏಕೆಂದರೆ ಇನ್ನೂ ಅನೇಕ ಸ್ಲಾಟ್‌ಗಳು ಉಳಿದಿವೆ. ಈಗ ಮೊದಲ ದಿನ ಮೆಗಾ ಹರಾಜಿನಲ್ಲಿ ದುಬಾರಿ ಬೆಲೆಗೆ ಸೇಲ್ ಆದ ಟಾಪ್ ಐದು ಆಟಗಾರರ ಬಗ್ಗೆ ಇಲ್ಲಿದೆ ಮಾಹಿತಿ.

ಐಪಿಎಲ್ 2025ರ ಮೆಗಾ ಹರಾಜಿನ ಮೊದಲ ದಿನ 72 ಆಟಗಾರರು ಶ್ರೀಮಂತರಾಗಿದ್ದು, ಟೀಮ್ ಇಂಡಿಯಾದ ಸ್ಟಾರ್ ವಿಕೆಟ್‌ಕೀಪರ್-ಬ್ಯಾಟರ್ ರಿಷಬ್ ಪಂತ್ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) 27 ಕೋಟಿ ರೂ. ಗೆ ರಿಷಬ್ ಪಂತ್ ಅವರನ್ನು ಬಿಡ್ ಮಾಡಿದೆ. ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಆಟಗಾರ ಎಂಬ ದಾಖಲೆ ಅವರ ಹೆಸರಿನಲ್ಲಿ ದಾಖಲಾಗಿದೆ.
ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಚಾಂಪಿಯನ್ ನಾಯಕ ಶ್ರೇಯಸ್ ಅಯ್ಯರ್ ಅವರಿಗೆ ಭಾರಿ ಮೊತ್ತವನ್ನು ಖರ್ಚು ಮಾಡಿದೆ. ಅಯ್ಯರ್‌ಗೆ ಪಂಜಾಬ್ 26.75 ಕೋಟಿ ರೂ. ನೀಡಿದೆ. ಇವರಿಬ್ಬರನ್ನು ಹೊರತುಪಡಿಸಿದರೆ ಮೂರನೇ ಅತ್ಯಂತ ದುಬಾರಿ ಆಟಗಾರನಾಗಿ ಸ್ಟಾರ್ ಆಲ್‌ರೌಂಡರ್ ವೆಂಕಟೇಶ್ ಅಯ್ಯರ್ ಕಾಣಿಸಿಕೊಂಡಿದ್ದಾರೆ. ವೆಂಕಟೇಶ್ ಅವರನ್ನು ಮತ್ತೆ ತಂಡಕ್ಕೆ ಕರೆತರಲು ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) 23.75 ಕೋಟಿ ರೂ. ಖರ್ಚು ಮಾಡಿದೆ. ಇದರೊಂದಿಗೆ ವೆಂಕಟೇಶ್ ಅಯ್ಯರ್ ಮೂರನೇ ದುಬಾರಿ ಆಟಗಾರನಾಗಿ ಹೊರಹೊಮ್ಮಿದ್ದಾರೆ. ವೆಂಕಟೇಶ್ ಬಿಡ್ ಮಾಡಲು ಕೆಕೆಆರ್ ಜೊತೆ ಆರ್‌ಸಿಬಿ ಪೈಪೋಟಿ ನಡೆಸಿತ್ತು.
ಟೀಮ್ ಇಂಡಿಯಾ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಮತ್ತು ಎಡಗೈ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅವರನ್ನು ಪಂಜಾಬ್ ಕಿಂಗ್ಸ್ 18 ಕೋಟಿ ರೂ. ಬಿಡ್ ಮಾಡಿದೆ. ಈ ಮೂಲಕ ಚಹಾಲ್ ಹಾಗು ಅರ್ಷದೀಪ್ ಸಿಂಗ್ ಅವರು ಕೂಡ ಐಪಿಎಲ್ ಮೆಗಾ ಹರಾಜಿನಲ್ಲಿ ಮೊದಲನೇ ದಿನ ದುಬಾರಿಗೆ ಬೆಲೆಗೆ ಸೇಲ್ ಆದ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications