IPL 2025 Mega Auction: ಮೆಗಾ ಹರಾಜಿನಲ್ಲಿ ಅನ್‌ಸೋಲ್ಡ್ ಆದ ಆಟಗಾರರ ಪ್ಲೇಯಿಂಗ್-11
ಐಪಿಎಲ್ 2025ರ ಮೆಗಾ ಹರಾಜು ಪ್ರಕ್ರಿಯೆ ಸೌದಿ ಅರೇಬಿಯಾದ ಜಿಡ್ಡಾದಲ್ಲಿ ನವೆಂಬರ್ 24-25 ರಂದು ಸತತ ಎರಡು ದಿನಗಳ ಕಾಲ ಯಶಸ್ವಿಯಾಗಿ ನಡೆದಿದೆ. ಹಲವು ಆಟಗಾರರ ಅದೃಷ್ಟ ರಾತ್ರೋರಾತ್ರಿ ಖುಲಾಯಿಸಿದೆ. ಆದರೆ ಐಪಿಎಲ್ ಕಂಡ ದಿಗ್ಗಜ ಆಟಗಾರರನ್ನು ಯಾವುದೇ ಫ್ರಾಂಚೈಸಿಗಳು ಬಿಡ್ ಮಾಡದಿರುವುದು ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ಅನ್‌ಸೋಲ್ಡ್ ಆದ ಆಟಗಾರರ ಪಟ್ಟಿಯಲ್ಲಿ ದೊಡ್ಡ ಹೆಸರುಗಳಿವೆ.
ಆಸ್ಟ್ರೇಲಿಯಾದ ಡೇವಿಡ್ ವಾರ್ನರ್, ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್, ಟೀಮ್ ಇಂಡಿಯಾ ಸ್ಟಾರ್ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಅವರಂತಹ ಹಲವು ಆಟಗಾರು ಮೆಗಾ ಹರಾಜಿನಲ್ಲಿ ಅನ್‌ಸೋಲ್ಡ್ ಆಗಿದ್ದಾರೆ. ಈ ಆಟಗಾರರು ಮೆಗಾ ಹರಾಜಿನಲ್ಲಿ ಅನ್‌ಸೋಲ್ಡ್ ಆಗುತ್ತಾರೆ ಎಂದು ಯಾರು ಭಾವಿಸಿರಲಿಲ್ಲ. ಆದರೆ, ಫ್ರಾಂಚೈಸಿಗಳು ಈ ಆಟಗಾರರ ಮೇಲೆ ಆಸಕ್ತಿ ತೋರದ ಕಾರಣ ಐಪಿಎಲ್ 2025ರ ಟೂರ್ನಿಯಿಂದ ಹೊರಗುಳಿದಿದ್ದಾರೆ.

ಮೆಗಾ ಹರಾಜಿನಲ್ಲಿ ಮಾರಾಟವಾಗದ ಆಟಗಾರರನ್ನು ಒಟ್ಟುಗೂಡಿಸಿದರೆ, ಅವರು ಯಾವುದೇ ತಂಡಕ್ಕೆ ಸವಾಲೊಡ್ಡಬಲ್ಲರು. ಐಪಿಎಲ್ ಮೆಗಾ ಹರಾಜಿನ ಅನ್‌ಸೋಲ್ಡ್ ಆಟಗಾರರ ತಂಡವನ್ನು ಕೇನ್ ವಿಲಿಯಮ್ಸನ್ ನಾಯಕರಾಗಿ ಮುನ್ನಡೆಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಈ ತಂಡದ ವಿಕೆಟ್‌ಕೀಪರ್ ಜವಾಬ್ದಾರಿಯನ್ನು ಇಂಗ್ಲೆಂಡ್‌ನ ಜಾನಿ ಬೈರ್‌ಸ್ಟೋ ಹೊತ್ತಿಕೊಳ್ಳಬಹುದು.
ಅನ್‌ಸೋಲ್ಡ್ ಆಟಗಾರರ ಪ್ಲೇಯಿಂಗ್-11: ಡೇವಿಡ್ ವಾರ್ನರ್, ಪೃಥ್ವಿ ಶಾ, ಕೇನ್ ವಿಲಿಯಮ್ಸನ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್‌ಕೀಪರ್), ಸಿಕಂದರ್ ರಾಜಾ, ಸುಯಶ್ ಪ್ರಭುದೇಸಾಯಿ, ಶಾರ್ದೂಲ್ ಠಾಕೂರ್, ಮುರುಗನ್ ಅಶ್ವಿನ್, ಪಿಯೂಷ್ ಚಾವ್ಲಾ, ಉಮೇಶ್ ಯಾದವ್
ವಾರ್ನರ್ ವಿದಾಯ
ಐಪಿಎಲ್ ಇತಿಹಾಸದಲ್ಲಿ ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಅವರು ತನ್ನದೆ ಆದ ಛಾಪು ಮೂಡಿಸಿದ್ದಾರೆ. ನಾಯಕರಾಗಿ ಡೇವಿಡ್ ವಾರ್ನರ್ ಅವರು 2016ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಚೊಚ್ಚಲ ಪ್ರಶಸ್ತಿಯನ್ನು ತಂದು ಕೊಟ್ಟಿದ್ದಾರೆ. ಅಲ್ಲದೆ, ಐಪಿಎಲ್‌ನಲ್ಲಿ ಅತಿಹೆಚ್ಚು ಅರ್ಧಶತಕಗಳನ್ನು ಬಾರಿಸಿರುವ ದಾಖಲೆಯನ್ನು ಹೊಂದಿದ್ದಾರೆ. ಮೂರು ಐಪಿಎಲ್ ಆವೃತ್ತಿಗಳಲ್ಲಿ ಅತಿಹೆಚ್ಚು ರನ್‌ಗಳನ್ನು ಕಲೆ ಹಾಕಿ ಆರೆಂಜ್ ಕ್ಯಾಪ್ ವಿನ್ನರ್ ಆಗಿದ್ದಾರೆ. ಆದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ನಂತರ ವಾರ್ನರ್ ಅವರನ್ನು ಐಪಿಎಲ್ ಫ್ರಾಂಚೈಸಿಗಳು ಬಿಡ್ ಮಾಡದಿರುವುದು ಬೇಸರದ ಸಂಗತಿ. ಇದರೊಂದಿಗೆ ವಾರ್ನರ್ ಐಪಿಎಲ್‌ಗೂ ವಿದಾಯ ಹೇಳುವ ಸಾಧ್ಯತೆಯಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications