For Quick Alerts
ALLOW NOTIFICATIONS  
For Daily Alerts
 

MI Retention: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಸೂರ್ಯ, ಹಾರ್ದಿಕ್‌, ಬುಮ್ರಾಗೆ ಸ್ಥಾನ

ಐದು ಬಾರಿಯ ಐಪಿಎಲ್ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಅಳೆದು ತೂಗಿ ಆಟಗಾರರಿಗೆ ಮಣೆ ಹಾಕಿದೆ. ಇಷ್ಟು ದಿನಗಳಿಂದ ಎದ್ದಿದ್ದ ಊಹಾಪೋಹಗಳಿಗೆ ಇಂದು ತೆರೆಬಿದ್ದಿದೆ. ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರನ್ನು ಮುಂಬೈ ಇಂಡಿಯನ್ಸ್‌ ಉಳಿಸಿಕೊಂಡಿದ್ದು ರೆಡ್‌ ಕಾರ್ಪೆಟ್‌ ಹಾಕಿದೆ. ಅಲ್ಲದೆ ಸ್ಟಾರ್‌ ಆಟಗಾರರ ಮನವೊಲಿಸುವಲ್ಲಿ ಮುಂಬೈ ಇಂಡಿಯನ್ಸ್‌ ಸಫಲವಾಗಿದೆ.

ಯರ್ಕರ್ ಸ್ಪೇಷಲಿಸ್ಟ್‌ ಜಸ್ಪ್ರಿತ್ ಬುಮ್ರಾ ಅವರನ್ನು ಮುಂಬೈ ಎರಡನೇ ಆಯ್ಕೆಯ ಆಟಗಾರನಾಗಿ ತಂಡದಲ್ಲಿ ಉಳಿಯಲಿದ್ದಾರೆ. ಅಲ್ಲದೆ ಟಿ20 ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸುವ ಸೂರ್ಯಕುಮಾರ್ ಯಾದವ್ ಅವರನ್ನು ಸಹ ಮುಂಬೈ ತಂಡದಲ್ಲಿ ಉಳಿಸಿಕೊಂಡಿದೆ. ಕಳೆದ ಬಾರಿ ಐಪಿಎಲ್‌ನಲ್ಲಿ ತಂಡವನ್ನು ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ, ಅವರನ್ನು ಸಹ ತಂಡ ಉಳಿಸಿಕೊಂಡಿದೆ. ನಾಲ್ಕು ಜನ ಸ್ಟಾರ್ ಆಟಗಾರರಿಗೆ ಮುಂಬೈ ಇಂಡಿಯನ್ಸ್‌ 16.35 ಕೋಟಿ ರೂ. ನೀಡಿ ತಂಡದಲ್ಲಿ ಉಳಿಸಿಕೊಂಡಿದೆ.

IPL 2025 MI Retention Uncapped Players Strategy Key Choices amp amp Hardik Pandya s Value

IPL 2025 ಗಾಗಿ, ಮುಂಬೈ ಇಂಡಿಯನ್ಸ್ ಆರಂಭಿಕ ಋತುವಿನಲ್ಲಿ ಹಾರ್ದಿಕ್ ಪಾಂಡ್ಯ ಅವರಿಗೆ ನಾಯಕತ್ವವನ್ನು ನೀಡುವುದಾಗಿ ಮಾಹಿತಿ ನೀಡಿದೆ. ಹಾರ್ದಿಕ್ ಪಾಂಡ್ಯ ಕಳೆದ ಋತುವಿನಲ್ಲಿ ಗುಜರಾತ್ ಟೈಟಾನ್ಸ್ ತಂಡದಿಂದ ಮುಂಬೈ ಇಂಡಿಯನ್ಸ್ ತಂಡಕ್ಕೆ ಟ್ರೇಡ್ ಆಗಿದ್ದರು. ಇವರ ಮುಂದಾಳತ್ವದಲ್ಲಿ ಮುಂಬೈ ಇಂಡಿಯನ್ಸ್‌ ತಂಡ ಕಳಪೆ ಪ್ರದರ್ಶನ ನೀಡಿತ್ತು. ಆದರೂ ಹಾರ್ದಿಕ್ ಅವರ ಮೇಲೆ ತಂಡ ನಂಬಿಕೆ ಇಟ್ಟಿದೆ. ಕಳೆದ ಸೀಜನ್‌ನಲ್ಲಿ ಮುಂಬೈ 10 ನೇ ಸ್ಥಾನವನ್ನು ಪಡೆದಿತ್ತು. ಮುಂಬೈ ಇಂಡಿಯನ್ಸ್ ಮತ್ತೊಮ್ಮೆ ಹಾರ್ದಿಕ್ ಪಾಂಡ್ಯ ಮೇಲೆ ವಿಶ್ವಾಸ ವ್ಯಕ್ತಪಡಿಸಿದೆ. ಮುಂಬೈ ಇಂಡಿಯನ್ಸ್ ಕೊನೆಯ ಬಾರಿಗೆ 2020 ರಲ್ಲಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.

ಎಷ್ಟು ಹಣ ಖರ್ಚು?

ಇಷ್ಟು ದಿನಗಳಿಂದ ಎದ್ದಿದ್ದ ಊಹಾಪೋಹಗಳಿಗೆ ಈಗ ತೆರೆ ಬಿದ್ದಿದೆ. ಮುಂಬೈ ತಂಡ ತನ್ನ ಐದು ಆಟಗಾರರನ್ನು ಉಳಿಸಿಕೊಳ್ಳಲು ಸುಮಾರು 75 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ಇನ್ನು ಹರಾಜು ಅಂಗಳಕ್ಕೆ 45 ಕೋಟಿ ರೂಪಾಯಿಗಳೊಂದಿಗೆ ಅಂಗಳ ಪ್ರವೇಶಿಸಲಿದೆ. ಈ ವೇಳೆ ಮುಂಬೈ 18 ರಿಂದ 25 ಆಟಗಾರರನ್ನು ಟಾರ್ಗೆಟ್‌ ಮಾಡಲಿದೆ.

ಮುಂಬೈ ಇಂಡಿಯನ್ಸ್ ಪರ ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಮತ್ತು ರೋಹಿತ್ ಶರ್ಮಾ ಮಾಲೀಕರ ಚಿತ್ತ ಕದಿಯುವಲ್ಲಿ ಸಫಲರಾಗಿದ್ದಾರೆ. ಈ ನಾಲ್ವರು ಆಟಗಾರರನ್ನು ಮುಂಬೈ ಇಂಡಿಯನ್ಸ್‌ನ ಆಧಾರ ಸ್ತಂಭಗಳೆಂದು ಪರಿಗಣಿಸಲಾಗಿದೆ. ರೋಹಿತ್ ಶರ್ಮಾ ಕೂಡ ಈ ಋತುವಿನಲ್ಲಿ ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ. ಅವರ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಒಟ್ಟು ಐದು ಐಪಿಎಲ್ ಪ್ರಶಸ್ತಿಗಳನ್ನು ಗೆದ್ದಿದೆ.

Story first published: Thursday, October 31, 2024, 17:54 [IST]
Other articles published on Oct 31, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+