For Quick Alerts
ALLOW NOTIFICATIONS  
For Daily Alerts
 

IPL 2025: ಪಾದಾರ್ಪಣೆ ಪಂದ್ಯದಲ್ಲೇ ಸೈ ಎನಿಸಿಕೊಂಡ ಅಶ್ವನಿ ಕುಮಾರ್

ಐಪಿಎಲ್ 2025 ರ 12 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮುಂಬೈ ಇಂಡಿಯನ್ಸ್ 8 ವಿಕೆಟ್‌ಗಳಿಂದ ಸೋಲಿಸಿತು. ಐಪಿಎಲ್ 2025 ರಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಇದು ಮೊದಲ ಗೆಲುವು. ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ತಂಡ ಸತತ ಎರಡು ಪಂದ್ಯಗಳಲ್ಲಿ ಸೋತು ಗೆಲುವಿನ ಹುಡುಕಾಟದಲ್ಲಿತ್ತು. ಈಗ ಕೆಕೆಆರ್ ತಂಡವನ್ನು ಮಣಿಸುವ ಮೂಲಕ ಹ್ಯಾಟ್ರಿಕ್ ಸೋಲಿನಿಂದ ತಪ್ಪಿಸಿಕೊಂಡಿದೆ. ಮುಂಬೈ ತಂಡ ಗುಜರಾತ್ ಟೈಟಾನ್ಸ್ ವಿರುದ್ಧ 36 ರನ್‌ಗಳಿಂದ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 4 ವಿಕೆಟ್‌ಗಳಿಂದ ಸೋತಿತ್ತು.

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಕೋಲ್ಕತ್ತಾ ತಂಡಕ್ಕೆ ಮುಂಬೈ ಬೌಲರ್‌ಗಳು ಒಂದರ ನಂತರ ಒಂದರಂತೆ ಶಾಕ್ ನೀಡಿದರು. ಇದರಿಂದಾಗಿ ಕೆಕೆಆರ್ ತಂಡವು 16.2 ಓವರ್‌ಗಳಲ್ಲಿ 116 ರನ್‌ಗಳಿಗೆ ಆಲೌಟ್ ಆಯಿತು. 117 ರನ್‌ಗಳ ಗೆಲುವಿನ ಗುರಿ ಬೆನ್ನಟ್ಟಿದ ಮುಂಬೈ ತಂಡ 12.5 ಓವರ್‌ಗಳಲ್ಲಿ 2 ವಿಕೆಟ್‌ಗಳ ನಷ್ಟಕ್ಕೆ 121 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.

IPL 2025 MI vs KKR Ashwani Kumar wins Most Valuable Player award

ಕೆಕೆಆರ್ ವಿರುದ್ಧ ಬಿರುಸಿನ ಬ್ಯಾಟಿಂಗ್ ಮಾಡಿದ ರಯಾನ್ ರಿಕಲ್ಟನ್ 44 ಎಸೆತಗಳಲ್ಲಿ 4 ಬೌಂಡರಿ ಮತ್ತು 5 ಸಿಕ್ಸರ್‌ಗಳೊಂದಿಗೆ ಅಜೇಯ 62 ರನ್ ಗಳಿಸಿದರು. ಹೀಗಾಗಿ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಸಿಕ್ಕಿತು. ಆದರೆ ಈ ಪಂದ್ಯದ ಗೆಲುವಿನಲ್ಲಿ ಮತ್ತೊಬ್ಬ ಮುಂಬೈ ಇಂಡಿಯನ್ಸ್ ಆಟಗಾರ ಪ್ರಮುಖ ಪಾತ್ರವಹಿಸಿದರು. ಅವರು ಬೇರೆ ಯಾರು ಅಲ್ಲ, ಯುವ ವೇಗದ ಬೌಲರ್ ಅಶ್ವನಿ ಕುಮಾರ್.

ಮುಂಬೈ ಇಂಡಿಯನ್ಸ್ ಪರ ಐಪಿಎಲ್‌ನಲ್ಲಿ ಚೊಚ್ಚಲ ಪಂದ್ಯವನ್ನು ಆಡಿದ ಅಶ್ವನಿ ಕುಮಾರ್ ತಮ್ಮ ಬೌಲಿಂಗ್ ಮೂಲಕ ಸಂಚಲನ ಮೂಡಿಸಿದರು. ಕೆಕೆಆರ್‍‌ ತಂಡದ ಸ್ಟಾರ್ ಆಟಗಾರರ ವಿಕೆಟ್ ಪಡೆಯುವ ಮೂಲಕ ತವರಿನಲ್ಲಿ ಮುಂಬೈ ಗೆಲುವು ಸಾಧಿಸಿಲು ಪ್ರಮುಖ ಪಾತ್ರವಹಿಸಿದರು. ಮುಂಬೈ ಪರ ಭರ್ಜರಿ ಪ್ರದರ್ಶನ ನೀಡಿದ ಅಶ್ವನಿ ಕುಮಾರ್ ನಾಲ್ಕು ವಿಕೆಟ್ ಕಬಳಿಸಿದರು.

ಅಶ್ವನಿ ಐಪಿಎಲ್ ಚೊಚ್ಚಲ ಪಂದ್ಯದಲ್ಲಿ ಅತ್ಯುತ್ತಮ ಬೌಲರ್ ಎನಿಸಿಕೊಂಡರು. ಅವರು 3 ಓವರ್‌ಗಳಲ್ಲಿ 24 ರನ್‌ಗಳಿಗೆ 4 ವಿಕೆಟ್‌ಗಳನ್ನು ಪಡೆದರು. ಇದು ಐಪಿಎಲ್‌ನಲ್ಲಿ ಚೊಚ್ಚಲ ಪಂದ್ಯದಲ್ಲಿ ಭಾರತೀಯ ಬೌಲರ್‌ಗಳ ಅತ್ಯುತ್ತಮ ಪ್ರದರ್ಶನವಾಗಿದೆ. ಜಸ್ಪ್ರೀತ್ ಬುಮ್ರಾ ಮತ್ತು ಭುವನೇಶ್ವರ್ ಕುಮಾರ್ ಅವರಂತಹ ಶ್ರೇಷ್ಠ ಬೌಲರ್‌ಗಳು ಸಹ ಈ ದಾಖಲೆಯನ್ನು ಮಾಡಲು ಸಾಧ್ಯವಾಗಲಿಲ್ಲ.

ಅಶ್ವನಿ ಕೆಕೆಆರ್ ನಾಯಕ ಅಜಿಂಕ್ಯ ರಹಾನೆ, ಬಿಗ್ ಹಿಟ್ಟರ್ ಆಂಡ್ರೆ ರಸೆಲ್, ರಿಂಕು ಸಿಂಗ್ ಮತ್ತು ಮನೀಶ್ ಪಾಂಡೆ ಅವರ ವಿಕೆಟ್‌ಗಳನ್ನು ಪಡೆದರು. ಅವರ ಮಾರಕ ಬೌಲಿಂಗ್‌ಗೆ ಕೋಲ್ಕತ್ತಾ ಬ್ಯಾಟರ್‍‌ಗಳು ಪೆವಿಲಿಯನ್ ಪರೇಡ್ ನಡೆಸಿದರು. ಮುಂಬೈ ಇಂಡಿಯನ್ಸ್ ಪರ ಚೊಚ್ಚಲ ಐಪಿಎಲ್ ಪಂದ್ಯದಲ್ಲಿ ಮಿಂಚುವ ಮೂಲಕ ಸೈ ಎನಿಸಿಕೊಂಡ ಅಶ್ವನಿ ಕುಮಾರ್ ಅವರಿಗೆ ಮೌಲ್ಯಯುತ ಆಟಗಾರ ಪ್ರಶಸ್ತಿ ಸಿಕ್ಕಿತು. ಅಶ್ವನಿ ಕುಮಾರ್ ಪವರ್ ಪ್ಲೇನಲ್ಲಿ ವಿಕೆಟ್ ಪಡೆದು ಮುಂಬೈ ಇಂಡಿಯನ್ಸ್‌ಗೆ ನೆರವಾದರು.

Story first published: Monday, March 31, 2025, 23:32 [IST]
Other articles published on Mar 31, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+