IPL 2025: ಐದು ವಿಕೆಟ್ ಉರುಳಿಸಿ ಇತಿಹಾಸ ನಿರ್ಮಿಸಿದ ಮಿಚೆಲ್ ಸ್ಟಾರ್ಕ್
ಆಸ್ಟ್ರೇಲಿಯಾದ ಅನುಭವಿ ಸ್ಟಾರ್ ವೇಗದ ಬೌಲರ್ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಮಾಡುವ ಎಲ್ಲರ ಗಮನ ಸಳೆದಿದ್ದಾರೆ. ಐಪಿಎಲ್ 2025 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಮಿಚೆಲ್ ಸ್ಟಾರ್ಕ್ ಐದು ವಿಕೆಟ್ ಪಡೆಯುವ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಲು ಪ್ರಮುಖ ಪಾತ್ರವಹಿಸಿದರು. ಇದರೊಂದಿಗೆ ಮಿಚೆಲ್ ಸ್ಟಾರ್ಕ್ ಮತ್ತೊಂದು ದಾಖಲೆ ಮಾಡಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ ಸ್ಟಾರ್ಕ್ ಐದು ವಿಕೆಟ್ ಪಡೆದಿರುವುದು ಇದೇ ಮೊದಲು. ಅಲ್ಲದೆ, ಟಿ20 ಕ್ರಿಕೆಟ್‌ನಲ್ಲಿಯೂ ಅವರ ಮೊದಲ ಐದು ವಿಕೆಟ್ ಇದಾಗಿದೆ.

ವಿಶಾಖಪಟ್ಟಣಂ ಮೈದಾನದಲ್ಲಿ ನಡೆದ ಐಪಿಎಲ್ 2025 ರ 10 ನೇ ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್ ಮಿಂಚಿನ ಬೌಲಿಂಗ್ ಪ್ರದರ್ಶನ ನೀಡಿದರು. ಸ್ಟಾರ್ಕ್ 3.4 ಓವರ್‌ಗಳಲ್ಲಿ 9.54 ರ ಎಕಾನಮಿಯೊಂದಿಗೆ 35 ರನ್‌ಗಳಿಗೆ 5 ವಿಕೆಟ್‌ಗಳನ್ನು ಪಡೆದರು. ಅವರು ಇಶಾನ್ ಕಿಶನ್ (2), ನಿತೀಶ್ ಕುಮಾರ್ ರೆಡ್ಡಿ (0), ಟ್ರಾವಿಸ್ ಹೆಡ್ (22), ಹರ್ಷಲ್ ಪಟೇಲ್ (5) ಮತ್ತು ವಿಯಾನ್ ಮುಲ್ಡರ್ (9) ಅವರನ್ನು ಔಟ್ ಮಾಡುವ ಮೂಲಕ ಐದು ವಿಕೆಟ್ ಪಡೆದು ಡೆಲ್ಲಿ ಕ್ಯಾಪಿಟಲ್ಸ್ ಗೆಲುವಿಗೆ ಕೊಡುಗೆ ನೀಡಿದರು.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗೆಲುವಿನ ಪ್ರಮುಖ ಪಾತ್ರ ವಹಿಸಿದ ಮಿಚೆಲ್ ಸ್ಟಾರ್ಕ್ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಸಿಕ್ಕಿದೆ. ಇದಲ್ಲದೆ, ಅವರು ಡೆಲ್ಲಿ ಕ್ಯಾಪಿಟಲ್ಸ್ ಪರ ಐದು ವಿಕೆಟ್ ಪಡೆದ ಎರಡನೇ ಬೌಲರ್ ಎನಿಸಿಕೊಂಡರು. ಅವರಿಗಿಂತ ಮೊದಲು, ಭಾರತದ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ ಈ ಸಾಧನೆ ಮಾಡಿದ್ದರು. ಮಿಶ್ರಾ ಅವರು 2008 ರ ಐಪಿಎಲ್‌ನಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ 17 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಬಳಿಸಿದ್ದರು.
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡ 18.4 ಓವರ್‌ಗಳಲ್ಲಿ 163 ರನ್‌ಗಳಿಗೆ ಆಲೌಟ್ ಆಯಿತು. ತಂಡದ ಪರ ಅನಿಕೇತ್ ವರ್ಮಾ 74 ರನ್ ಗಳಿಸಿದರೆ, ಹೆನ್ರಿಕ್ ಕ್ಲಾಸೆನ್ 32 ರನ್ ಮತ್ತು ಟ್ರಾವಿಸ್ ಹೆಡ್ 22 ರನ್ ಬಾರಿಸಿದರು. ಡೆಲ್ಲಿ ಪರ ಸ್ಟಾರ್ಕ್ ಹೊರತುಪಡಿಸಿ, ಕುಲ್‌ದೀಪ್ ಯಾದವ್ 3 ವಿಕೆಟ್ ಪಡೆದರು. ಹೈದರಾಬಾದ್ ನೀಡಿದ 164 ರನ್‌ಗಳನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೇವಲ 16 ಓವರ್‍ಗಳಲ್ಲಿ 2 ವಿಕೆಟ್ ನಷ್ಟಕ್ಕೆ 166 ಗಳಿಸಿ ಜಯ ಕಂಡಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications