IPL 2025 CSK: ಚೆನ್ನೈ ತಲುಪಿದ ಸಿಎಸ್‌ಕೆ ಸೂಪರ್ ಸ್ಟಾರ್ ಧೋನಿ
18ನೇ ಆವೃತ್ತಿಯ ಐಪಿಎಲ್‌ಗೆ ದಿನಗಣನೆ ಆರಂಭವಾಗಿದೆ. ಮೆಗಾ ಟೂರ್ನಿಯಲ್ಲಿ ಭಾಗವಹಿಸಲು ಸ್ಟಾರ್ ಆಟಗಾರರು ತಮ್ಮ ತಮ್ಮ ತಂಡಗಳತ್ತ ಮುಖ ಮಾಡಿದ್ದಾರೆ. ಐಪಿಎಲ್ ತಂಡದ ಯಶಸ್ವಿ ತಂಡಗಳಲ್ಲಿ ಒಂದಾಗಿರುವ ಚೆನ್ನೈ ಸೂಪರ್ ಕಿಂಗ್ಸ್ ಸಹ ತನ್ನ ಸಿದ್ಧತೆ ಆರಂಭಿಸಿದೆ. ಈ ಟೂರ್ನಿಯಲ್ಲಿ ಭಾಗವಹಿಸಲು ಟೀಮ್ ಇಂಡಿಯಾದ ಮಾಜಿ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ತಂಡ ಸೇರಿದ್ದಾರೆ.
ಕ್ರಿಕೆಟ್‌ನ ಶ್ರೀಮಂತ ಲೀಗ್ ಎಂದೇ ಖ್ಯಾತಿ ಪಡೆದಿರುವ ಐಪಿಎಲ್‌ನಲ್ಲಿ, ಇತಿಹಾಸದ ಅತಿದೊಡ್ಡ ಸೂಪರ್ ಸ್ಟಾರ್ 43ನೇ ವಯಸ್ಸಿನಲ್ಲಿ ಮತ್ತೊಮ್ಮೆ ಅಖಾಡಕ್ಕೆ ಇಳಿಯಲು ಸಿದ್ಧರಾಗಿದ್ದಾರೆ. ಇವರ ಆಟವನ್ನು ಕಣ್ಣು ತುಂಬಿಕೊಳ್ಳಲು ಅಭಿಮಾನಿಗಳು ಸಹ ಕಾತುರದಿಂದ ಕಾಯುತ್ತಿದ್ದಾರೆ. ಐದು ಬಾರಿ ಐಪಿಎಲ್ ಟ್ರೋಫಿಗೆ ಮುತ್ತಿಟ್ಟಿರುವ ಧೋನಿ, ಮತ್ತೊಂದು ಕಪ್ ಗೆಲುವಿನ ಹುಡುಕಾಟದಲ್ಲಿದ್ದಾರೆ. ಈ ಮೆಗಾ ಟೂರ್ನಿಯಲ್ಲಿ ಭಾಗವಹಿಸಲು ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಮಹೇಂದ್ರ ಸಿಂಗ್ ಧೋನಿ ಚೆನ್ನೈಗೆ ತಲುಪಿದ್ದಾರೆ.

ಸಖತ್ ಲುಕ್
ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿ ಬಹು ವರ್ಷಗಳೇ ಕಳೆದಿವೆ. ಆದರೆ ಧೋನಿ ತಮ್ಮ ಅಭಿಮಾನಿಗಳಿಗೆ ಐಪಿಎಲ್‌ನಲ್ಲಿ ಆಡುವ ಮೂಲಕ ರಂಜಿಸುತ್ತಿದ್ದಾರೆ. ಹೀಗಾಗಿ ಇವರ ಆಟವನ್ನು ನೋಡುವ ಅಭಿಮಾನಿಗಳ ಕ್ರೇಜ್ ಹೆಚ್ಚಾಗಿದೆ. ಮುಂಬರುವ ಐಪಿಎಲ್‌ನ ತಯಾರಿಗಾಗಿ ಮಹೇಂದ್ರ ಸಿಂಗ್ ಧೋನಿ ಚೆನ್ನೈ ತಲುಪಿದ್ದಾರೆ. ಪ್ರತಿ ಐಪಿಎಲ್‌ನಲ್ಲಿ ಧೋನಿ ಹೊಸ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಾರಿಯ ಅವರ ಲುಕ್ ಸದ್ಯ ಸಾಮಾಜಿಕ ತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಸಿಎಸ್‌ಕೆ ತಂಡದ ಕ್ಯಾಪ್ಟನ್ ರುತುರಾಜ್ ಗಾಯಕ್ವಾಡ್ ಈಗಾಗಲೇ ತಂಡವನ್ನು ಸೇರಿಕೊಂಡಿದ್ದಾರೆ. ಧೋನಿ ಶೀಘ್ರವಾಗಿ ತಂಡವನ್ನು ಸೇರಿಕೊಳ್ಳಲಿ ಎಂದು ಅಭಿಮಾನಿಗಳ ಆಶಯವಾಗಿದೆ.
ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಬಹು ವರ್ಷಗಳಿಂದ ಆಟದ ಹಿನ್ನೆಲೆಯಲ್ಲಿ ಇವರನ್ನು ಅನ್‌ಕ್ಯಾಪ್ಡ್ ಆಟಗಾರ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಉಳಿಸಿಕೊಂಡಿದೆ. ಹರಾಜಿಗೂ ಮುನ್ನ ಸಿಎಸ್‌ಕೆ ಮ್ಯಾನೇಜ್ಮೆಂಟ್ ಇವರಿಗೆ 4 ಕೋಟಿ ರೂ. ನೀಡಿ ತಂಡದಲ್ಲಿ ಉಳಿಸಿಕೊಂಡಿದೆ. ಕಳೆದ ಎರಡು ಐಪಿಎಲ್‌ನಲ್ಲಿ ಧೋನಿ ಕೊನೆಯ ಎರಡು ಮೂರು ಓವರ್ ಬ್ಯಾಟ್ ಮಾಡುವುದನ್ನು ಮಾತ್ರ ಅಭಿಮಾನಿಗಳು ನೋಡಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಧೋನಿ ವಿಶೇಷವಾದದನ್ನು ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಐಪಿಎಲ್ 2025ಕ್ಕಾಗಿ ಮಹೇಂದ್ರ ಸಿಂಗ್ ಧೋನಿ ನಾಲ್ಕು ಬ್ಯಾಟ್‌ಗಳನ್ನು ಮೀರಟ್‌ನಿಂದ ತರೆಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೊಸ ಬ್ಯಾಟ್‌ನಿಂದ ಧೋನಿ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಈಗಾಗಲೇ ಮಾಹಿ ಐಪಿಎಲ್‌ನಲ್ಲಿ ತಮ್ಮ ಬ್ಯಾಟಿಂಗ್ ಮೂಲಕ ಛಾಪು ಮೂಡಿಸಿದ್ದಾರೆ. ಇವರ ಹ್ಯಾಲಿಕ್ಯಾಪ್ಟರ್ ಶಾಟ್‌ಗಳನ್ನು ಕಣ್ಣು ತುಂಬಿಕೊಳ್ಳಲು ಅಭಿಮಾನಿಗಳು ಸಹ ಕಾತುರದಿಂದ ಕಾಯುತ್ತಿದ್ಧಾರೆ. ಈ ಆವೃತ್ತಿಯ ಮೊದಲ ಪಂದ್ಯದಲ್ಲಿ ಚೆನ್ನೈ, ಮುಂಬೈ ಇಂಡಿಯನ್ಸ್ ವಿರುದ್ಧ ಕಾದಾಟ ನಡೆಸಲಿದ್ದು, ಮಾರ್ಚ್ 23 ರಂದು ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications