Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2025: ಚೆನ್ನೈಗೆ 150 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿದ ಮುಂಬೈ

ಐಪಿಎಲ್ 2025 ರ ಮೂರನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಿವೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್‌ಕೆ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಹಂಗಾಮಿ ನಾಯಕ ಸೂರ್ಯಕುಮಾರ್ ಯಾದವ್ ನೇತೃತ್ವದ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಮಾಡಿತು.

ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‍‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 155 ರನ್‌ ಗಳಿಸಿದೆ. ಸಿಎಸ್‌ಕೆ ಬೌಲಿಂಗ್ ದಾಳಿಗೆ ಸಿಲುಕಿದ ಮುಂಬೈ ಬ್ಯಾಟರ್‍‌ಗಳು ಹೆಚ್ಚು ರನ್ ಕಲೆ ಹಾಕಲು ಸಾಧ್ಯವಾಗಲಿಲ್ಲ.

IPL 2025 Mumbai Indians set competitive target of 150 runs for Chennai Super Kings

ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ ಮತ್ತು ರಯಾನ್ ರಿಕಲ್ಟನ್ ಇನ್ನಿಂಗ್ಸ್ ಆರಂಭಿಸಿದರು. ರೋಹಿತ್ ಶರ್ಮಾ ಶೂನ್ಯಕ್ಕೆ ಔಟ್ ಆಗುವ ಮೂಲಕ ನಿರಾಸೆ ಮೂಡಿಸಿದರು. ಇದಾದ ನಂತರ, ರಿಕಲ್ಟನ್ 13 ರನ್‌ಗಳಿಗೆ ವಿಕೆಟ್ ಕಳೆದುಕೊಂಡರು. ಈ ವೇಳೆ ಒಂದಾದ ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ತಂಡಕ್ಕೆ ಆಸರೆಯಾದರು.

ಮುಂಬೈ ಇಂಡಿಯನ್ಸ್ ಪರ ತಿಲಕ್ ವರ್ಮಾ 31 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ನಾಯಕ ಸೂರ್ಯಕುಮಾರ್ ಕೂಡ 29 ರನ್ ಗಳಿಸಿದರು. ಉಳಿದ ಯಾವುದೇ ಬ್ಯಾಟರ್‍‌ಗಳು ಸಿಎಸ್‌ಕೆ ಬೌಲಿಂಗ್ ದಾಳಿಯನ್ನು ಎದುರಿಸುವಲ್ಲಿ ಯಶಸ್ವಿಯಾಗಲಿಲ್ಲ. ಚೆನ್ನೈ ಪರ ನೂರ್ ಅಹ್ಮದ್ 4 ವಿಕೆಟ್ ಕಬಳಿಸಿದರು ಮಿಂಚಿದರೆ, ಖಲೀಲ್ ಅಹ್ಮದ್ 3 ವಿಕೆಟ್ ಪಡೆದರು. ನಾಥನ್ ಎಲ್ಲಿಸ್ ಮತ್ತು ರವಿಚಂದ್ರನ್ ಅಶ್ವಿನ್ ತಲಾ ಒಂದೊಂದು ವಿಕೆಟ್ ಪಡೆದರು.

ಸ್ಪಿನ್ ದಾಳಿ

ಸಿಎಸ್‌ಕೆ ಪರ ಅಫ್ಘಾನಿಸ್ತಾನದ ಯುವ ಸ್ಪಿನ್ನರ್ ನೂರ್ ಅಹ್ಮದ್ ಅದ್ಭುತ ಬೌಲಿಂಗ್ ಪ್ರದರ್ಶನ ಮಾಡಿದರು. ಬಿಗ್ ಸ್ಕೋರ್ ಕಲೆ ಹಾಕುವ ನಿರೀಕ್ಷೆಯಲ್ಲಿದ್ದ ಮುಂಬೈ ಇಂಡಿಯನ್ಸ್ ತಂಡವನ್ನು ನೂರ್ ಕಟ್ಟಿ ಹಾಕಿದರು. ನೂರ್ ತಮ್ಮ 4 ಓವರ್‍‌ಗಳ ಕೋಟಾದಲ್ಲಿ 4.50 ಎಕಾನಮಿಯಲ್ಲಿ 18 ರನ್‌ಗಳಿಗೆ 4 ವಿಕೆಟ್ ಕಬಳಿಸಿದರು. ಇದು ಮುಂಬೈ ಇಂಡಿಯನ್ಸ್‌ಗೆ ಕಾಡಿವಾಣ ಆಯಿತು.

ಮಂಕಾದ ರೋಹಿತ್

ಐಪಿಎಲ್ 2025ರ ಮುಂಬೈ ಇಂಡಿಯನ್ಸ್ ತಂಡದ ಮೊದಲ ಪಂದ್ಯದಲ್ಲಿ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಅಬ್ಬರಿಸುತ್ತಾರೆ ಎಂದು ಅಭಿಮಾನಿಗಳು ಭಾವಿಸಿದ್ದರು. ಆದರೆ ರೋಹಿತ್ ಶರ್ಮಾ ಐಪಿಎಲ್ ಇತಿಹಾಸದಲ್ಲಿ 18ನೇ ಬಾರಿಗೆ ಡಕೌಟ್ ಆದರು. ಇದು ಅವರ ಹೆಸರಿನಲ್ಲಿ ಅನಗತ್ಯ ದಾಖಲೆ ಸೃಷ್ಟಿಯಾಗಲು ಕಾರಣವಾಯಿತು. ಮುಂಬೈ ಇಂಡಿಯನ್ಸ್ ಇನ್ನ ಇನ್ನಿಂಗ್ಸ್‌ನ ಮೊದಲ ಓವರ್‍‌ನಲ್ಲಿ ಖಲೀಲ್ ಅಹ್ಮದ್ ನಾಲ್ಕನೇ ಎಸೆತದಲ್ಲಿ ಶೂನ್ಯಕ್ಕೆ ರೋಹಿತ್ ವಿಕೆಟ್ ಕಳೆದುಕೊಂಡರು.

Story first published: Sunday, March 23, 2025, 21:27 [IST]
Other articles published on Mar 23, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+