Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Turning Point: ಮುಂಬೈ ವಿರುದ್ಧ ಕೆಕೆಆರ್ ಹೀನಾಯ ಸೋಲಿಗೆ ಕಾರಣಗಳು

ಐಪಿಎಲ್ 2025 ರಲ್ಲಿ ಸೋಮವಾರ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಪಂದ್ಯ ನಡೆಯಿತು. ಈ ಪಂದ್ಯವನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಯೋಜಿಸಲಾಗಿತ್ತು. ಸತತ ಎರಡು ಸೋಲುಗಳಿಂದ ಕಂಗೆಟ್ಟಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ತವರಿನಲ್ಲಿ ಅದೃಷ್ಟ ಕೈ ಹಿಡಿಯಿತು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸುವ ಮೂಲಕ ಐಪಿಎಲ್ 2025 ರಲ್ಲಿ ಮುಂಬೈ ಇಂಡಿಯನ್ಸ್ ಮೊದಲು ಗೆಲುವು ಕಂಡಿತು. ಮತ್ತೊಂದೆಡೆ ಸತತ ಎರಡನೇ ಗೆಲುವು ಸಾಧಿಸುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆಸೆ ಈಡೇರಲಿಲ್ಲ.

ಮುಂಬೈ ಎದುರು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲು ಬಂದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಬ್ಯಾಟರ್‍‌ಗಳು ರನ್ ಗಳಿಸುವಲ್ಲಿ ಹಿಂದೆ ಉಳಿದರು. ಒಬ್ಬರ ನಂತರ ಒಬ್ಬರು ಪೆವಿಲಿಯನ್ ಪರೇಡ್ ನಡೆಸಿದರು. ಪರಿಣಾಮ 16.5 ಓವರ್‍‌ಗಳಲ್ಲಿ ಕೆಕೆಆರ್ 116 ರನ್‌ಗಳಿಗೆ ಆಲೌಟಾಯಿತು. ಇದಕ್ಕೆ ಉತ್ತರವಾಗಿದೆ ಮುಂಬೈ ಇಂಡಿಯನ್ಸ್ ರಯಾನ್ ರಿಕಲ್ಟನ್ ಅರ್ಧಶತಕದ ನೆರವಿನಿಂದ 12.5 ಓವರ್‍‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 121 ಗಳಿಸಿ ಸುಲಭ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಕೋಲ್ಕತ್ತಾ ಸೋಲಿಗೆ ಹಲವು ಕಾರಣಗಳಿವೆ. ಇದರಲ್ಲಿ ಪಂದ್ಯದ ಟರ್ನಿಂಗ್ ಪಾಯಿಂಟ್ ಕೂಡ ಒಂದಾಗಿದೆ.

IPL 2025 Mumbai Indians vs Kolkata Knight Riders Match Turning Point

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಪರ ಕ್ವಿಂಟನ್ ಡಿ ಕಾಕ್ ಮತ್ತು ಸುನಿಲ್ ನರೈನ್ ಇನ್ನಿಂಗ್ಸ್ ತೆರೆಯುವ ಅವಕಾಶ ಪಡೆದರು. ಆದರೆ ಈ ಇಬ್ಬರೂ ಬ್ಯಾಟರ್‍‌ಗಳು ಮೊದಲ ಎರಡು ಓವರ್‍‌ಗಳಲ್ಲಿ ಪೆವಿಲಿಯನ್‌ಗೆ ಮರಳಿದರು. ಮೊದಲ ಓವರ್‍‌ನಲ್ಲಿ ನರೈನ್ ಶೂನ್ಯಕ್ಕೆ ಔಟಾದರೆ, ಡಿ ಕಾಕ್ ಕೇವಲ 1 ರನ್ ಗಳಿಸಿ ಎರಡನೇ ಓವರ್‍‌ನಲ್ಲಿ ವಿಕೆಟ್ ಕಳೆದುಕೊಂಡರು. ಕಳಪೆ ಆರಂಭದಿಂದಾಗಿ ಕೆಕೆಆರ್ ಇನ್ನಿಂಗ್ಸ್ ಚೇತರಿಸಿಕೊಳ್ಳಲಿ ಸಾಧ್ಯವಾಗಲಿಲ್ಲ. ಇದರ ಭಾರವನ್ನು ತಂಡ ಕೂಡ ಹೊರಬೇಕಾಯಿತು.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆರಂಭದಲ್ಲೇ ಹಿನ್ನಡೆ ಅನುಭವಿಸಿದ ಕಾರಣ ಸಂಕಷ್ಟದ ಪರಿಸ್ಥಿತಿಗೆ ಸಿಲುಕಿತ್ತು. ಇಂತಹ ಸಂದರ್ಭದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್‍‌ಗಳು ಕೂಡ ತಮ್ಮ ಜವಾಬ್ದಾರಿಯನ್ನು ಮರೆತರು. ಮಧ್ಯಮ ಕ್ರಮಾಂಕದ ಬ್ಯಾಟರ್‍‌ಗಳು ಜವಾಬ್ದಾರಿಯುತ ಬ್ಯಾಟಿಂಗ್ ಮಾಡುವ ಮೂಲಕ ತಂಡವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಬೇಕಿತ್ತು.

ಆದರೆ ವೆಂಕಟೇಶ್ ಅಯ್ಯರ್ ಮತ್ತು ರಿಂಕು ಸಿಂಗ್ ಬಿಗ್ ಇನ್ನಿಂಗ್ಸ್ ಆಡುವಲ್ಲಿ ವಿಫಲವಾದರು. ಕೆಕೆಆರ್ ತಂಡದ ವಿಕೆಟ್‌ಗಳು ಒಂದೊಂದಾಗಿ ಬೀಳುತ್ತಲೇ ಇದ್ದವು. ಪರಿಣಾಮ ಕೆಕೆಆರ್ ನಿಗದಿತ 20 ಓವರ್‍‌ಗಳನ್ನು ಪೂರ್ಣವಾಗಿ ಆಡಲು ಸಾಧ್ಯವಾಗಲಿಲ್ಲ.

Story first published: Tuesday, April 1, 2025, 0:20 [IST]
Other articles published on Apr 1, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+