ಇನ್ನೇನು ಕೆಲವೇ ದಿನಗಳಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭವಾಗಲಿದೆ. 18ನೇ ಆವೃತ್ತಿಯ ಮೊದಲ ಪಂದ್ಯಕ್ಕೆ ಕೋಲ್ಕತ್ತಾದ ಈಡನ್ ಗಾರ್ಡನ್ ಅಂಗಳ ಸಜ್ಜಾಗಿದೆ. ಉದ್ಘಾಟನಾ ಪಂದ್ಯಕ್ಕೂ ಮುನ್ನ ನಡೆಯುವ ಕಾರ್ಯಕ್ರಮದಲ್ಲಿ ಬಾಲಿವುಡ್ ದಂಡೇ ಹರಿದು ಬರಲಿದೆ. ಹಾಗಿದ್ದರೆ ಮಾರ್ಚ್ 22 ರಂದು ನಡೆಯುವ ಉದ್ಘಾಟನಾ ಕಾರ್ಯಕಮ್ರಮದಲ್ಲಿ ಯಾವೆಲ್ಲಾ ಸ್ಟಾರ್‌ಗಳು ವೇದಿಕೆಯ ಮೇಲೆ ಪ್ರದರ್ಶನ ನೀಡಲಿದ್ದಾರೆ ಎಂಬ ಬಗ್ಗೆ ವರದಿ ಇಲ್ಲಿದೆ.
ಮಾರ್ಚ್ 22 ರಂದು ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯಕ್ಕೂ ಮುನ್ನ ಬಾಲಿವುಡ ತಾರೆಯನ್ನು ತಮ್ಮ ಪ್ರದರ್ಶನದ ಮೂಲಕ ಅಭಿಮಾನಿಗಳ ಮನ ಗೆಲ್ಲಲು ಸಜ್ಜಾಗಿದ್ದಾರೆ. ಈ ವೇಳೆ ಅನೇಕ ಬಾಲಿವುಡ್ ತಾರೆಯರು ಪ್ರದರ್ಶನ ನೀಡಲಿದ್ದಾರೆ. ಗಾಯಕ ಕರಣ್ ಔಜ್ಲಾ ಮತ್ತು ನಟಿ ದಿಶಾ ಪಟಾನಿ ಅವರ ಉದ್ಘಾಟನಾ ಪಂದ್ಯಕ್ಕೂ ಮುನ್ನ ಅಭಿಮಾನಿಗಳನ್ನು ತಮ್ಮ ಕಲೆಯ ಮೂಲಕ ಸೆಳೆಯಲಿದ್ದಾರೆ.

ಈ ಪಂದ್ಯದಲ್ಲಿ ಅಭಿಮಾನಿಗಳಿಗೆ ಸ್ಟಾರ್ ಪ್ಲೇಯರ್ ವಿರಾಟ್ ಕೊಹ್ಲಿ ಅವರ ಆಟವನ್ನು ಆನಂದಿಸುವ ಮುನ್ನ ಬಾಲಿವುಡ್ ತಾರೆಯರ ಕಾರ್ಯಕ್ರಮವನ್ನು ಆನಂದಿಸಲಿದ್ದಾರೆ. ಐಪಿಎಲ್ 2025 ರ ಉದ್ಘಾಟನಾ ಸಮಾರಂಭವು ಪಂದ್ಯ ಪ್ರಾರಂಭವಾಗುವ 1 ಗಂಟೆ ಮೊದಲು ಪ್ರಾರಂಭವಾಗುತ್ತದೆ. ಬಾಲಿವುಡ್ ಜಗತ್ತಿನ ಅನೇಕ ಪ್ರಸಿದ್ಧ ಕಲಾವಿದರು ಇದರಲ್ಲಿ ಭಾಗವಹಿಸಲಿದ್ದಾರೆ.
ಒಂದು ಗಂಟೆ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಪಂಜಾಬಿ ಗಾಯಕ ಕರಣ್ ಔಜ್ಲಾ, ನಟಿ ದಿನಶಾ ಪಟಾನಿ ಪ್ರದರ್ಶನ ನೀಡಲಿದ್ದಾರೆ ಎಂದು ವರದಿಗಳು ಬಂದಿವೆ. ಇವರಲ್ಲದೆ, 'ಚಿಕ್ನಿ ಚಮೇಲಿ', 'ಜಲಿಮಾ' ಮುಂತಾದ ಸೂಪರ್ ಹಿಟ್ ಹಾಡುಗಳಿಗೆ ತಮ್ಮ ಕಂಠ ಸಿರಿಯನ್ನು ನೀಡಿರುವ ಗಾಯಕಿ ಶ್ರೇಯಾ ಘೋಷಾಲ್ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಯಾವೆಲ್ಲಾ ಕಲಾವಿದರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುತ್ತಾರೆ ಎಂಬ ಬಗ್ಗೆ ಮಾಹಿತಿಯನ್ನು ಐಪಿಎಲ್ ಮಂಡಳಿ ಧೃಡ ಪಡಿಸಿಲ್ಲ.
IPL 2025 ಉದ್ಘಾಟನಾ ಸಮಾರಂಭದ ಟಿಕೆಟ್‌ಗಳು ಈಗಾಗಲೇ ಭರ್ಜರಿಯಾಗಿ ಮಾರಾಟವಾಗುತ್ತಿವೆ. ಕೆಕೆಆರ್ ತನ್ನ ತವರಿನಲ್ಲಿ ಮೊದಲ ಪಂದ್ಯವನ್ನು ಆಡಲಿದ್ದು, ಅಭಿಮಾನಿಗಳು ತವರಿನ ತಂಡವನ್ನು ಬೆಂಬಿಸಲಿಸಲಿ ಸಾಗರೋಪಾದಿಯಲ್ಲಿ ಹರಿದು ಬರುವ ನಿರೀಕ್ಷೆ ಇದೆ. ಈ ಪಂದ್ಯದ ಟಿಕೆಟ್‌ಗಳು ಆನ್‌ಲೈನ್‌ನಲ್ಲಿ ಮಾರಾಟಕ್ಕೆ ಲಭ್ಯವಿವೆ. ಅಭಿಮಾನಿಗಳು BookMyShow ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಬಹುದು.