IPL 2025: ಶಾರೂಖ್ ಖಾನ್ ಜೊತೆ ವಿರಾಟ್ ಕೊಹ್ಲಿ ಡ್ಯಾನ್ಸ್; ವಿಡಿಯೋ ವೈರಲ್
ಕೋಲ್ಕತ್ತಾದ ಐಕಾನಿಕ್ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ಸಿಕ್ಕಿದೆ. ಐಪಿಎಲ್ 2025ರ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‍ಸಿಬಿ) ತಂಡಗಳು ಮುಖಾಮುಖಿಯಾಗಿವೆ. ಇದಕ್ಕೂ ಮುನ್ನ ಆರ್‍ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟ ಶಾರೂಖ್ ಖಾನ್ ಎಲ್ಲರ ಗಮನ ಸೆಳೆದಿದ್ದಾರೆ.
ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಐಪಿಎಲ್ 2025ರ ಉದ್ಘಾಟನಾ ಸಮಾರಂಭದಲ್ಲಿ ಶಾರೂಖ್ ಖಾನ್ ಜೊತೆಗೆ ವಿರಾಟ್ ಕೊಹ್ಲಿ ಡ್ಯಾನ್ಸ್ ಮಾಡಿದ್ದಾರೆ. "ಜೂಮ್ ಜೋ ಪಠಾಣ್' ಹಾಡಿಗೆ ಶಾರೂಖ್ ಮತ್ತು ಕೊಹ್ಲಿ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತರ್ ವೈರಲ್ ಆಗುತ್ತಿದೆ.

ಉದ್ಘಾಟನಾ ಸಮಾರಂಭದಲ್ಲಿ ಕೊಹ್ಲಿ ಮತ್ತು ರಿಂಕು ಸಿಂಗ್ ಇಬ್ಬರೂ ಶಾರೂಖ್ ಖಾನ್ ಅವರೊಂದಿಗೆ ವೇದಿಕೆ ಹಂಚಿಕೊಂಡರು. ಈ ವೇಳೆ ಮಾತನಾಡಿದ ಶಾರೂಖ್, ವಿರಾಟ್ ಕೊಹ್ಲಿಯನ್ನು ಎಲ್ಲಾ ಐಪಿಎಲ್ ಆವೃತ್ತಿಗಳಲ್ಲಿ ಒಂದೇ ತಂಡಕ್ಕಾಗಿ ಆಡಿದ ಏಕೈಕ ಆಟಗಾರ ಹೊಗಳಿದರು. "ಹೊಸ ಆಟಗಾರರಿಗೆ ಸ್ವಾಗತ. ನಮ್ಮೊಂದಿಗೆ ಸೇರಿಕೊಂಡು ನಮ್ಮ ನಾಯಕನ ಪಾತ್ರವನ್ನು ವಹಿಸಿಕೊಂಡಿದ್ದಕ್ಕಾಗಿ ಧನ್ಯವಾದಗಳು, ಅಜಿಂಕ್ಯ ರಹಾನೆ ಅವರಿಗೆ ದೇವರು ಆಶೀರ್ವದಿಸಲಿ. ನೀವು ಇಲ್ಲಿ ಉತ್ತಮ ನೆಲೆಯನ್ನು ಕಂಡುಕೊಳ್ಳುತ್ತೀರಿ ಮತ್ತು ನಮ್ಮೆಲ್ಲರೊಂದಿಗೆ ಉತ್ತಮವಾಗಿ ಪ್ರದರ್ಶನ ನೀಡುತ್ತೀರಿ ಅಂದುಕೊಂಡಿದ್ದೇನೆ ಎಂದು ಆಟಗಾರರನ್ನು ಹುರಿದುಂಬಿಸಿದರು.
ಐಪಿಎಲ್ ಉದ್ಘಾಟನಾ ಸಮಾರಂಭ ಮುಗಿದ ಸ್ವಲ್ಪ ಸಮಯದ ನಂತರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಆರ್‍ಸಿಬಿ ತಂಡವನ್ನು ಹೊಸ ನಾಯಕ ರಜತ್ ಪಟಿದಾರ್ ಮುನ್ನಡೆಸುತ್ತಿದ್ದಾರೆ. ಕೆಕೆಆರ್ ತಂಡಕ್ಕೆ ಅಜಿಂಕ್ಯ ರಹಾನೆ ನಾಯಕತ್ವ ವಹಿಸಿದ್ದಾರೆ. ಉಭಯ ತಂಡಗಳು ಬಲಿಷ್ಠ ಆಡುವ ಹನ್ನೊಂದರ ಬಳಗದೊಂದಿಗೆ ಕಣಕ್ಕಿಳಿದಿವೆ. ಉಭಯ ತಂಡಗಳ ಆಡುವ ಹನ್ನೊಂದರ ಬಳಗ ಹೀಗಿದೆ.
ಪ್ಲೇಯಿಂಗ್-11
ಕೋಲ್ಕತ್ತಾ ನೈಟ್ ರೈಡರ್ಸ್: ಕ್ವಿಂಟನ್ ಡಿ ಕಾಕ್ (ವಿಕೆಟ್‌ಕೀಪರ್), ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ (ನಾಯಕ), ರಿಂಕು ಸಿಂಗ್, ಆಂಗ್ಕ್ರಿಶ್ ರಘುವಂಶಿ, ಸುನಿಲ್ ನರೈನ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಸ್ಪೆನ್ಸರ್ ಜಾನ್ಸನ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್‌ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರಸಿಖ್ ದಾರ್ ಸಲಾಂ, ಸುಯಾಶ್ ಶರ್ಮಾ, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಳ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications