For Quick Alerts
ALLOW NOTIFICATIONS  
For Daily Alerts
 

IPL 2025: ಎಸ್‌ಆರ್‌ಹೆಚ್ ಪರ ಈ ದಾಖಲೆ ಮಾಡಿದ ಮೊದಲ ನಾಯಕ ಪ್ಯಾಟ್ ಕಮ್ಮಿನ್ಸ್

ಶುಕ್ರವಾರ ನಡೆದ ಐಪಿಎಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಇನ್ನೂ 8 ಎಸೆತಗಳು ಬಾಕಿ ಇರುವಂತೆಯೇ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಸನ್‌ರೈಸರ್ಸ್ ಹೈದರಾಬಾದ್ ನಾಯಕ ಪ್ಯಾಟ್ ಕಮ್ಮಿನ್ಸ್ ಇತಿಹಾಸ ಸೃಷ್ಟಿಸಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಗೆಲುವಿನ ಸಂಭ್ರಮ ನೋಡಲು ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಚೆಪಾಕ್‌ನ ತವರು ಮೈದಾನಕ್ಕೆ ಆಗಮಿಸಿದ್ದರು. ಆದರೆ ಈ ಸೀಸನ್‌ನಲ್ಲಿ ಅಭಿಮಾನಿಗಳು ಚೆನ್ನೈ ತಂಡದ ಸತತ ಸೋಲಿನಿಂದ ಮತ್ತೊಮ್ಮೆ ಎದೆಗುಂದಿದರು. ಮತ್ತೊಂದೆಡೆ, ಸನ್‌ರೈಸರ್ಸ್ ಹೈದರಾಬಾದ್ ಐಪಿಎಲ್ 2025 ರಲ್ಲಿ ತನ್ನ ಮೂರನೇ ಗೆಲುವು ದಾಖಲಿಸಿತು.

ಚೆಪಾಕ್ ಅಂಗಳದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಗೆದ್ದ ಬಳಿಕ ಪ್ಯಾಟ್ ಕಮ್ಮಿನ್ಸ್ ಅವರ ಹೆಸರು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಇದುವರೆಗೆ ಚೆಪಾಕ್ ಮೈದಾನದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಯಾವ ನಾಯಕನೂ ಗೆಲುವಿನ ಕಡೆಗೆ ಮುನ್ನಡೆಸಲು ಸಾಧ್ಯವಾಗಿರಲಿಲ್ಲ. ಈಗ ಪ್ಯಾಟ್ ಕಮ್ಮಿನ್ಸ್ ಈ ದಾಖಲೆಯನ್ನು ಮಾಡಿದ್ದಾರೆ.

IPL 2025 Pat Cummins creates history for SRH after victory at Chepauk Stadium

ಪ್ಯಾಟ್ ಕಮ್ಮಿನ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹೈದರಾಬಾದ್ ತಂಡಕ್ಕೆ ಗೆಲುವು ತಂದುಕೊಟ್ಟ ಮೊದಲ ನಾಯಕ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾತರೆ. ಸನ್‌ರೈಸರ್ಸ್ ಹೈದರಾಬಾದ್ ತಂಡವು ಈ ಹಿಂದೆ ಚೆಪಾಕ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ಐಪಿಎಲ್ ಪಂದ್ಯಗಳನ್ನು ಆಡಿದೆ. ಆದರೆ ಒಮ್ಮೆಯೂ ಗೆಲ್ಲುವಲ್ಲಿ ಯಶಸ್ವಿಯಾಗಿರಲಿಲ್ಲ.

ಸನ್‌ರೈಸರ್ಸ್ ಹೈದರಾಬಾದ್ ತಂಡವು 2013 ರಿಂದ ಐಪಿಎಲ್‌ನ ಭಾಗವಾಗಿದೆ. ಆದರೆ ಇದಕ್ಕೂ ಮೊದಲು ಅವರು ಚೆಪಾಕ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಎಂದಿಗೂ ಗೆದ್ದಿರಲಿಲ್ಲ. ಪ್ಯಾಟ್ ಕಮ್ಮಿನ್ಸ್ ಈಗ ಗೆಲುವು ತಂದುಕೊಟ್ಟು ಇತಿಹಾಸ ಸೃಷ್ಟಿಸಿದ್ದಾರೆ. ಐಪಿಎಲ್ 2025 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 17 ವರ್ಷಗಳ ನಂತರ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 15 ವರ್ಷಗಳ ನಂತರ ಮತ್ತು ಈಗ ಮೊದಲ ಬಾರಿಗೆ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಚೆಪಾಕ್‌ನಲ್ಲಿ ಐಪಿಎಲ್ ಪಂದ್ಯಗಳನ್ನು ಸೋತಿದೆ.

ಚೆಪಾಕ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಗೆಲುವು ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಪ್ರಸ್ತುತ ಐಪಿಎಲ್ 2025 ರಲ್ಲಿ ಮೂರನೇ ಗೆಲುವು. ಸನ್‌ರೈಸರ್ಸ್ ಹೈದರಾಬಾದ್ 9 ಪಂದ್ಯಗಳಿಂದ 6 ಅಂಕಗಳೊಂದಿಗೆ ಪಾಯಿಂಟ್ ಟೇಬಲ್‌ನಲ್ಲಿ 8ನೇ ಸ್ಥಾನಕ್ಕೆ ತಲುಪಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡವು ತನ್ನ ಉಳಿದ 5 ಲೀಗ್ ಪಂದ್ಯಗಳನ್ನು ದೊಡ್ಡ ಅಂತರದಿಂದ ಗೆದ್ದರೆ, ಪ್ಲೇಆಫ್‌ಗೆ ಅರ್ಹತೆ ಪಡೆಯುವ ಅವಕಾಶವನ್ನು ಹೊಂದಿದೆ. ಚೆನ್ನೈ ಸೂಪರ್ ಕಿಂಗ್ಸ್ ಆಡಿರುವ 9 ಪಂದ್ಯಗಳಲ್ಲಿ ಚೆನ್ನೈ ಕೇವಲ 2 ರಲ್ಲಿ ಗೆಲುವು ಸಾಧಿಸಿದರೆ, 7 ರಲ್ಲಿ ಸೋಲನ್ನು ಎದುರಿಸಿದೆ. ಇದರೊಂದಿಗೆ ಚೆನ್ನೈ ಪ್ಲೇ ಆಫ್ ರೇಸ್‌ನಿಂದ ಹೊರಗುಳಿದೆ.

Story first published: Saturday, April 26, 2025, 13:14 [IST]
Other articles published on Apr 26, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+