ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಭಾರತ ಕ್ರಿಕೆಟ್ ತಂಡಕ್ಕೆ ಹಲವು ಪ್ರತಿಭೆಗಳನ್ನು ಕೊಟ್ಟಿದೆ. ಐಪಿಎಲ್‌ನಲ್ಲಿ ಮಿಂಚಿದ ಸಾಕಷ್ಟು ಪ್ರತಿಭೆಗಳು ಟೀಮ್ ಇಂಡಿಯಾ ಪರವೂ ಆಡುವ ಅವಕಾಶವನ್ನು ಪಡೆದಿದ್ದಾರೆ. ಈಗ ಐಪಿಎಲ್ 2025 ರಲ್ಲಿ ಕೆಲವು ಯುವ ಪ್ರತಿಭೆಗಳು ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಭವಿಷ್ಯಕ್ಕಾಗಿ ಸ್ಫೋಟಕ ಮಧ್ಯಮ ಕ್ರಮಾಂಕದ ಬ್ಯಾಟರ್ ಅನ್ನು ಪಡೆದುಕೊಂಡಿದೆ. ಈ ಬ್ಯಾಟರ್ ಐಪಿಎಲ್‌ನಲ್ಲಿನ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಇದರ ಆಧಾರದ ಮೇಲೆ ನಿರಂತರವಾಗಿ ಟೀಮ್ ಇಂಡಿಯಾದ ಬಾಗಿಲು ತಟ್ಟುತ್ತಿದ್ದಾರೆ. ಭಾರತದ 24 ವರ್ಷದ ಯುವ ಬ್ಯಾಟರ್ ನೆಹಾಲ್ ವಾಧೇರಾ ಐಪಿಎಲ್ 2025 ರಲ್ಲಿ ಸದ್ದು ಮಾಡುತ್ತಿದ್ದಾರೆ.
ಶುಕ್ರವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಬ್ಯಾಟರ್ ನೆಹಾಲ್ ವಾಧೇರಾ 19 ಎಸೆತಗಳಲ್ಲಿ ಅಜೇಯ 33 ರನ್ ಗಳಿಸಿ ಸ್ಫೋಟಕ ಇನ್ನಿಂಗ್ಸ್ ಆಡಿದರು.173.68 ಸ್ಟ್ರೈಕ್ ರೇಟ್ ನಲ್ಲಿ ಬ್ಯಾಟಿಂಗ್ ಮಾಡಿದ ನೆಹಾಲ್ ವಾಧೇರಾ 3 ಬೌಂಡರಿ ಮತ್ತು 3 ಸಿಕ್ಸರ್ ಗಳನ್ನು ಬಾರಿಸಿ ಪಂಜಾಬ್ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಇನ್ನಿಂಗ್ಸ್ ಮೂಲಕ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಚಿತ್ತ ಕದ್ದಿದ್ದಾರೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತು. ಹೀಗಾಗಿ ಪಂದ್ಯವನ್ನು ತಲಾ 14 ಓವರ್‌ಗಳಿಗೆ ಇಳಿಸಲಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 95 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ 12.1 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 98 ರನ್ ಗಳಿಸುವ ಮೂಲಕ ಪಂದ್ಯವನ್ನು ಗೆದ್ದುಕೊಂಡಿತು.
ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಪಂಜಾಬ್ ಕಿಂಗ್ಸ್ ನೆಹಾಲ್ ವಧೇರಾ ಅವರನ್ನು 4.2 ಕೋಟಿ ರೂ.ಗೆ ಖರೀದಿಸಿತು. ಪಂಜಾಬ್ ಪರ ನೆಹಾಲ್ ವಧೇರಾ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಅವರು ಇದುವರೆಗೆ ಆಡಿರುವ 6 ಪಂದ್ಯಗಳಲ್ಲಿ 46 ಸರಾಸರಿ ಮತ್ತು 149.59 ಸ್ಟ್ರೈಕ್ ರೇಟ್‌ನಲ್ಲಿ 184 ರನ್ ಗಳಿಸಿದ್ದಾರೆ. ನೆಹಾಲ್ ವಧೇರಾ 2025 ರ ಐಪಿಎಲ್‌ನಲ್ಲಿ ಇದುವರೆಗೆ ಒಂದು ಅರ್ಧಶತಕ ಗಳಿಸಿದ್ದು, 14 ಬೌಂಡರಿ ಮತ್ತು 12 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಐಪಿಎಲ್ 2025 ರಲ್ಲಿ ಅವರ ಇದುವರೆಗಿನ ಗರಿಷ್ಠ ಸ್ಕೋರ್ 62 ರನ್‌ಗಳು.
ನೆಹಾಲ್ ವಧೇರಾ ಅವರ ಸ್ಥಿರ ಪ್ರದರ್ಶನ ಟೀಮ್ ಇಂಡಿಯಾಕ್ಕೂ ಅವಶ್ಯಕತೆಯಿದೆ. ಹೀಗಾಗಿ ಮುಂಬರುವ ಟಿ20 ಸರಣಿಗಳಿಗೆ ಅವರನ್ನು ಬಿಸಿಸಿಐ ಆಯ್ಕೆ ಮಾಡುವ ಸಾಧ್ಯತೆಯಿದೆ. ಮಧ್ಯಮ ಕ್ರಮಾಂಕದಲ್ಲಿ ಅವರು ತಂಡಕ್ಕೆ ಆಸರೆಯಾಗುವ ಮೂಲಕ ಗೆಲುವಿನ ಕಡೆ ಸಾಗಿಸಬಲ್ಲ ಸಾಮರ್ಥ್ಯವನ್ನು ಹೊಂದಿದ್ದಾರೆ. ನೆಹಾಲ್ ವಧೇರಾ ಇದುವರೆಗೆ 26 ಐಪಿಎಲ್ ಪಂದ್ಯಗಳಲ್ಲಿ 28.11 ಸರಾಸರಿ ಮತ್ತು 143.17 ಸ್ಟ್ರೈಕ್ ರೇಟ್‌ನಲ್ಲಿ 534 ರನ್ ಗಳಿಸಿದ್ದಾರೆ. ನೆಹಾಲ್ ವಾಧೇರಾ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಇದುವರೆಗೆ ಮೂರು ಅರ್ಧಶತಕಗಳನ್ನು ಹೊಂದಿದ್ದಾರೆ.
ನೆಹಾಲ್ ವಧೇರಾ ಲುಧಿಯಾನ (ಪಂಜಾಬ್) ನಿವಾಸಿ ಅಗಿದ್ದು, ಪಂಜಾಬ್ ಪರ ದೇಶೀಯ ಕ್ರಿಕೆಟ್ ಆಡುತ್ತಿದ್ದಾರೆ. ನೆಹಾಲ್ ವಧೇರಾ ಇದುವರೆಗೆ 14 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, 40.15 ಸರಾಸರಿಯಲ್ಲಿ 803 ರನ್ ಗಳಿಸಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅವರ ಅತ್ಯಧಿಕ ಸ್ಕೋರ್ 214 ರನ್‌ಗಳು. ನೆಹಾಲ್ ವಧೇರಾ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 3 ಶತಕ ಮತ್ತು ಒಂದು ಅರ್ಧಶತಕ ಬಾರಿಸಿದ್ದಾರೆ. ನೆಹಾಲ್ ವಧೇರಾ 14 ಲಿಸ್ಟ್ ಎ ಪಂದ್ಯಗಳನ್ನು ಆಡಿದ್ದು, 1 ಅರ್ಧಶತಕದೊಂದಿಗೆ 298 ರನ್ ಕಲೆ ಹಾಕಿದ್ದಾರೆ.
ಲಿಸ್ಟ್ ಎ ಕ್ರಿಕೆಟ್‌ನಲ್ಲಿ ನೆಹಾಲ್ ವಾಧೇರಾ ಅವರ ಅತ್ಯುತ್ತಮ ಸ್ಕೋರ್ 57 ರನ್‌ಗಳು. ನೆಹಾಲ್ ವಾಧೇರಾ 43 ಟಿ20 ಪಂದ್ಯಗಳನ್ನು ಆಡಿದ್ದು, 5 ಅರ್ಧಶತಕಗಳೊಂದಿಗೆ 858 ರನ್ ಗಳಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ನೆಹಾಲ್ ವಾಧೇರಾ ಅವರ ಅತ್ಯುತ್ತಮ ಸ್ಕೋರ್ 64 ರನ್‌ಗಳು.