Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2025: ರಾಜಸ್ಥಾನ ರಾಯಲ್ಸ್ ತಂಡದ ಬಲಿಷ್ಠ ಪ್ಲೇಯಿಂಗ್‌-11 ಹೀಗಿದೆ..

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಮುಂಬರುವ ಸೀಸನ್‌ಗೆ ಕೇವಲ ಒಂದು ವಾರ ಮಾತ್ರ ಬಾಕಿ ಇದೆ.2008 ರಲ್ಲಿ ಚೊಚ್ಚಲ ಐಪಿಎಲ್ ಚಾಂಪಿಯನ್ ಆಗಿದ್ದ ರಾಜಸ್ಥಾನ್ ರಾಯಲ್ಸ್, ಹದಿನೇಳು ವರ್ಷಗಳ ನಂತರ ತನ್ನ ಟ್ರೋಫಿ ಬರಗಾಲವನ್ನು ಕೊನೆಗೊಳಿಸಿ ಮತ್ತೆ ಟ್ರೋಫಿ ಎತ್ತಿ ಹಿಡಿಯಲು ಸಜ್ಜಾಗಿದೆ. ಕಳೆದ ವರ್ಷ ನವೆಂಬರ್ 24 ಮತ್ತು 25 ರಂದು ನಡೆದ ಐಪಿಎಲ್ 2025ರ ಮೆಗಾ ಹರಾಜಿಗೂ ಮುನ್ನ 2022ರ ಫೈನಲ್ ಸೇರಿದಂತೆ ಮೂರು ಸೀಸನ್‌ಗಳಲ್ಲಿ ಎರಡು ಬಾರಿ ತಂಡವನ್ನು ಪ್ಲೇಆಫ್‌ಗೆ ಮುನ್ನಡೆಸಿದ ನಾಯಕ ಸಂಜು ಸ್ಯಾಮ್ಸನ್ ಮೇಲೆ ಫ್ರಾಂಚೈಸಿ ನಂಬಿಕೆ ಇಟ್ಟು ಉಳಿಸಿಕೊಂಡಿತ್ತು.

ಸಂಜು ಜೊತೆಗೆ ಸ್ಪೋಟಕ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್, ಸ್ಟೈಲಿಶ್ ಆಲ್‌ರೌಂಡರ್ ರಿಯಾನ್ ಪರಾಗ್, ವಿಕೆಟ್ ಕೀಪರ್-ಬ್ಯಾಟರ್ ಧ್ರುವ್ ಜುರೆಲ್, ಫಿನಿಷರ್ ಶಿಮ್ರಾನ್ ಹೆಟ್ಮೆಯರ್ ಮತ್ತು ಅನ್‌ಕ್ಯಾಪ್ಡ್ ಆಟಗಾರನಾಗಿ ಸಂದೀಪ್ ಶರ್ಮಾ ಅವರನ್ನು ಉಳಿಸಿಕೊಂಡಿದ್ದಾರೆ.

IPL 2025 Rajasthan Royals strongest playing 11

ಆರ್‌ಆರ್ ಫ್ರಾಂಚೈಸಿ ಜೋಫ್ರಾ ಆರ್ಚರ್, ನಿತೀಶ್ ರಾಣಾ, ಫಜಲ್‌ಹಕ್ ಫಾರೂಕಿ, ಮಹೇಶ್ ತೀಕ್ಷಣ ಮತ್ತು ವನಿಂದು ಹಸರಂಗ ಅವರಂತಹ ಆಟಗಾರರನ್ನು ಹೊಂದಿದೆ. ಈ ಬಾರಿ ರಾಜಸ್ಥಾನ ರಾಯಲ್ಸ್ ಪರ 13 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಎಲ್ಲರ ಗಮನ ಸೆಳೆದಿದ್ದಾರೆ. ರಾಜಸ್ಥಾನ ರಾಯಲ್ಸ್ ತಂಡದ ಅಗ್ರ ಕ್ರಮಾಂಕ ಬಲಿಷ್ಠವಾಗಿದೆ. ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ ಮತ್ತು ನಿತೀಶ್ ರಾಣಾ ಅವರಂತಹ ಸ್ಟಾರ್ ಬ್ಯಾಟರ್‌ಗಳಾಗಿವೆ.

ರಾಜಸ್ಥಾನ್ ರಾಯಲ್ಸ್ ತಂಡವು ಅತ್ಯುತ್ತಮ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಬಲವನ್ನು ಹೊಂದಿದ್ದು, ಭಾರತೀಯ ಮತ್ತು ವಿದೇಶಿ ಬ್ಯಾಟರ್‌ಗಳಾದ ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್ ಮತ್ತು ಶುಭಂ ದುಬೆ ಅವರಂತಹ ಆಟಗಾರರ ಸ್ಟಾರ್‌

ರಾಜಸ್ಥಾನ ರಾಯಲ್ಸ್ ತಂಡವು ಉತ್ತಮ ಬೌಲಿಂಗ್ ದಾಳಿಯನ್ನು ಹೊಂದಿದ್ದು, ಪ್ರತಿಯೊಬ್ಬರಿಗೂ ಬದಲಿ ಆಟಗಾರರನ್ನು ಹೊಂದಿದೆ. ಜೋಫ್ರಾ ಆರ್ಚರ್, ಸಂದೀಪ್ ಶರ್ಮಾ, ಫಜಲ್ಹಕ್ ಫಾರೂಕಿ, ವನಿಂದು ಹಸರಂಗ, ಮಹೇಶ್ ತೀಕ್ಷಣ ಮತ್ತು ತುಷಾರ್ ದೇಶಪಾಂಡೆ ಅವರಂತಹ ವಿಕೆಟ್ ಟೇಕರ್‌ಗಳಿದ್ದಾರೆ.

ರಾಜಸ್ಥಾನ ರಾಯಲ್ಸ್ ಪ್ಲೇಯಿಂಗ್‌-11: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್ ಮತ್ತು ನಾಯಕ), ನಿತೀಶ್ ರಾಣಾ, ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ಶುಭಂ ದುಬೆ, ಜೋಫ್ರಾ ಆರ್ಚರ್, ವನಿಂದು ಹಸರಂಗ, ಸಂದೀಪ್ ಶರ್ಮಾ, ತುಷಾರ್ ದೇಶಪಾಂಡೆ, ಮತ್ತು ಫಜಲ್ಹಕ್ ಫಾರೂಕಿ/ಮಹೇಶ್ ತೀಕ್ಷಣ.

ರಾಜಸ್ಥಾನ ರಾಯಲ್ಸ್ ತಂಡ: ಸಂಜು ಸ್ಯಾಮ್ಸನ್ (ಉಳಿಸಿಕೊಂಡವರು), ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ಸಂದೀಪ್ ಶರ್ಮಾ, ಜೋಫ್ರಾ ಆರ್ಚರ್, ಮಹೇಶ್ ತೀಕ್ಷಣ, ವನಿಂದು ಹಸರಂಗ, ಆಕಾಶ್ ಮಧ್ವಲ್, ಕುಮಾರ್ ಕಾರ್ತಿಕೇಯ, ತುಷಾರ್ ದೇಶಪಾಂಡೆ, ನಿತೀಶ್ ರಾಣಾ, ಶುಭಂ ದುಬೆ, ಯುಧ್ವೀರ್ ಸಿಂಗ್, ಫಜಲ್ಹಕ್ ಫಾರೂಕಿ, ವೈಭವ್ ಸೂರ್ಯವಂಶಿ.

Story first published: Saturday, March 15, 2025, 14:40 [IST]
Other articles published on Mar 15, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+