For Quick Alerts
ALLOW NOTIFICATIONS  
For Daily Alerts
 

IPL 2025: ಆರ್‍‌ಸಿಬಿ ಬೆಸ್ಟ್ & ಚೆನ್ನೈ ಲಾಸ್ಟ್, ಈ ಸಲ ಕಪ್ ನಮ್ದೆ?

ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಗುಜರಾತ್ ಟೈಟಾನ್ಸ್ ಸೋಲಿಸಿತು. ಈ ಗೆಲುವಿನೊಂದಿಗೆ ಗುಜರಾತ್ ಟೈಟಾನ್ಸ್ ತಂಡ ಪಾಯಿಂಟ್ ಟೇಬಲ್‌ನಲ್ಲಿ ಅಗ್ರಸ್ಥಾನ ಪಡೆದಿದೆ. ಗುಜರಾತ್ ಈಗ ಎಂಟು ಪಂದ್ಯಗಳಿಂದ 12 ಅಂಕಗಳನ್ನು ಗಳಿಸಿದ್ದು, ಪ್ಲೇಆಫ್ ತಲುಪುವುದು ಬಹುತೇಕ ಖಚಿತವಾಗಿದೆ. ಉಳಿದ ಆರು ಪಂದ್ಯಗಳಲ್ಲಿ ಎರಡರಲ್ಲಿ ಗೆದ್ದರೆ ಸಾಕು ನಾಲ್ಕು ಅಂಕಗಳನ್ನು ಗುಜರಾತ್ ಟೈಟಾನ್ಸ್ ಪಡೆಯಲಿದೆ. ಆಗ ಗುಜರಾತ್ ಟೈಟಾನ್ಸ್ ತಂಡ 16 ಅಂಕಗಳನ್ನು ಪಡೆದು ಪ್ಲೇ ಆಫ್ ತಲುಪಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಸ್ಥಿರ ಪ್ರದರ್ಶನ ನೀಡುತ್ತಿದ್ದು, ಪಾಯಿಂಟ್ ಟೇಬಲ್‌ನಲ್ಲಿ ಎರಡನೇ ಸ್ಥಾನದಲ್ಲಿದೆ. ಡೆಲ್ಲಿ ಆಡಿರುವ 7 ಪಂದ್ಯಗಳಲ್ಲಿ 5 ರಲ್ಲಿ ಗೆದ್ದು 10 ಅಂಕಗಳನ್ನು ಹೊಂದಿದೆ. ಡೆಲ್ಲಿ ತಂಡಕ್ಕೂ ಪ್ಲೇ ಆಫ್ ತಲುಪು ಎಲ್ಲಾ ಅವಕಾಶಗಳಿವೆ. ಉಳಿದ 7 ಪಂದ್ಯಗಳಲ್ಲಿ 4 ರಲ್ಲಿ ಗೆದ್ದರೆ ಡೆಲ್ಲಿ ತಂಡ ಕೂಡ 18 ಅಂಕಗಳೊಂದಿಗೆ ಪ್ಲೇ ಆಫ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲಿದೆ.

IPL 2025 RCB Best amp amp Chennai Last Cup Winning Predictions

ಆರ್‌ಸಿಬಿ ಪ್ಲೇ ಆಫ್

ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ. ಈ ಸೀಸನ್‌ನಲ್ಲಿ ನಡೆದ ತವರಿನ ಮೂರು ಪಂದ್ಯಗಳಲ್ಲೂ ಆರ್‌ಸಿಬಿ ಸೋಲು ಕಂಡಿದ್ದು, ಮೊದಲ ಗೆಲುವಿನ ಹುಡುಕಾಟದಲ್ಲಿದೆ. ಆದರೆ ತವರಿನ ಹೊರಗೆ ಆರ್‌ಸಿಬಿ ಇದುವರೆಗೆ ಸೋಲು ಕಂಡಿಲ್ಲ. ಆಡಿರುವ ಐದು ಪಂದ್ಯಗಳಲ್ಲೂ ಜಯ ಘೋಷ ಮುಳುಗಿಸಿದೆ.

ಪಂಜಾಬ್ ಕಿಂಗ್ಸ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ನಂತರ ಆರ್‌ಸಿಬಿ 10 ಅಂಕಗಳೊಂದಿಗೆ ಪಾಯಿಂಟ್ ಟೇಬಲ್‌ನಲ್ಲಿ ಮೂರನೇ ಸ್ಥಾನಕ್ಕೇರಿದೆ. ಐಪಿಎಲ್ 2025 ರ ಆರಂಭದಿಂದಲೂ ಅದ್ಭುತ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿ ಪ್ಲೇಆಫ್ ತಲುಪುವ ನೆಚ್ಚಿನ ತಂಡಗಳಲ್ಲಿ ಒಂದಾಗಿದೆ. ಆರ್‌ಸಿಬಿ ಲೀಗ್ ಹಂತದಲ್ಲಿ ಇನ್ನೂ 6 ಪಂದ್ಯಗಳನ್ನು ಆಡಲಿದ್ದು, ಕನಿಷ್ಠ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೂ ಪ್ಲೇಆಫ್‌ ಸ್ಥಾನ ಬಹುತೇಕ ಖಚಿತವಾಗಲಿದೆ. ಒಂದು ವೇಳೆ 4-5 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳಲ್ಲಿ ಒಂದರಲ್ಲಿ ಪಡೆದು ಪ್ಲೇಆಫ್ ತಲುಪುವ ಸಾಧ್ಯತೆ ಇದೆ.

ಪಂಜಾಬ್-ಲಕ್ನೋಗೂ ಇದೆ ಚಾನ್ಸ್

ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪ್ಲೇ ಆಫ್ ರೇಸ್‌ನಲ್ಲಿವೆ. ಉಭಯ ತಂಡಗಳು 10 ಅಂಕಗಳೊಂದಿಗೆ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿವೆ. ಉತ್ತಮ ರನ್ ರೇಟ್ ಹೊಂದಿರುವ ಕಾರಣ ಪಂಜಾಬ್ ನಾಲ್ಕನೇ ಸ್ಥಾನದಲ್ಲಿದೆ. ಉಭಯ ತಂಡಗಳು ತಲಾ 8 ಪಂದ್ಯಗಳನ್ನು ಆಡಿದ್ದು, 5 ರಲ್ಲಿ ಗೆದ್ದಿವೆ. ಉಳಿದ ಪಂದ್ಯಗಳಲ್ಲಿ ಗೆಲ್ಲುವ ಒಂದು ತಂಡ ಪ್ಲೇ ಆಫ್ ತಲುಪಲಿದೆ.

ಆರಂಭದಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ ಮುಂಬೈ ಇಂಡಿಯನ್ಸ್ ಪ್ಲೇ ಆಫ್‌ ರೇಸ್‌ನಲ್ಲಿ ತನ್ನ ಓಟ ಆರಂಭಿಸಿದೆ. ಮುಂಬೈ ಇಂಡಿಯನ್ಸ್ ಆಡಿರುವ 8 ಪಂದ್ಯಗಳಲ್ಲಿ 4 ರಲ್ಲಿ ಗೆದ್ದು ಎಂಟು ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದೆ. ಉಳಿದ ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾದರೆ ಮುಂಬೈ ತಂಡ ಕೂಡ ಪ್ಲೇ ಆಫ್‌ಗೆ ಲಗ್ಗೆ ಇಡಲಿದೆ.

ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಈ ಬಾರಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಕೆಕೆಆರ್ 8 ಪಂದ್ಯಗಳಲ್ಲಿ 3 ರಲ್ಲಿ ಗೆದ್ದು ಎಂಟು ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದೆ. ಉಳಿದ ಎಲ್ಲಾ ಪಂದ್ಯಗಳನ್ನು ಕೆಕೆಆರ್ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಒಂದು ಪಂದ್ಯ ಸೋತರೂ ಪ್ಲೇ ಆಫ್ ಬಾಗಿಲು ಮುಚ್ಚಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ಲಾಸ್ಟ್

ಐಪಿಎಲ್ 2025 ರಲ್ಲಿ ರಾಜಸ್ಥಾನ ರಾಯಲ್ಸ್, ಸನ್‌ ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ಅಂಕಗಳು ಪಾತಳ ಸೇರಿವೆ. ರಾಜಸ್ಥಾನ ರಾಯಲ್ಸ್ ಆಡಿರುವ 8 ಪಂದ್ಯಗಳಲ್ಲಿ ಕೇವಲ 2 ರಲ್ಲಿ ಗೆದ್ದಿದರೆ, ಹೈದರಾಬಾದ್ 7 ಪಂದ್ಯಗಳಲ್ಲಿ 2 ರಲ್ಲಿ ಮಾತ್ರ ಗೆಲುವು ಕಂಡಿದೆ. ತಲಾ 4 ಅಂಕಗಳೊಂದಿಗೆ ಪಾಯಿಂಟ್ ಟೇಬಲ್‌ನಲ್ಲಿ ಕ್ರಮವಾಗಿ 8 ಮತ್ತು 9ನೇ ಸ್ಥಾನದಲ್ಲಿವೆ. ಈ ತಂಡಗಳ ಒಂದೇ ಒಂದು ಪಂದ್ಯವನ್ನು ಸೋತರೂ ಪ್ಲೇ ಆಫ್ ಕನಸು ಬಹುತೇಕ ನುಚ್ಚು ನೂರಾಗಲಿದೆ.

ಇನ್ನೂ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ 2025 ರಲ್ಲಿ ಗೆಲುವು ಕಾಣಲು ಹೆಣಗಾಡುತ್ತಿದೆ. ಇಲ್ಲಿವರೆಗೂ ತಂಡದಿಂದ ಉತ್ತಮ ಪ್ರದರ್ಶನ ಕಂಡು ಬಂದಿಲ್ಲ. ಪರಿಣಾಮ ಪಾಯಿಂಟ್‌ ಟೇಬಲ್‌ನಲ್ಲಿ ಲಾಸ್ಟ್‌ನಲ್ಲಿದೆ. ಚೆನ್ನೈ ಆಡಿರುವ 8 ಪಂದ್ಯಗಳಲ್ಲಿ ಕೇವಲ 2 ರಲ್ಲಿ ಮಾತ್ರ ಗೆದ್ದಿದೆ. ಉಳಿದ ಎಲ್ಲಾ ಪಂದ್ಯಗಳನ್ನು ಗೆದ್ದರೂ ಪ್ಲೇ ಆಫ್ ತಲುಪುವುದು ಅಸಾಧ್ಯವಾಗಿದೆ.

Story first published: Tuesday, April 22, 2025, 14:09 [IST]
Other articles published on Apr 22, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+