RCB Retention: ಮೊಹಮ್ಮದ್ ಸಿರಾಜ್, ಫಾಫ್‌ಗೆ ಇಲ್ಲ ಸ್ಥಾನ: ವಿರಾಟ್ ಕೊಹ್ಲಿ ಮೊದಲ ಆಯ್ಕೆಯ ಆಟಗಾರ
ಬಹು ನಿರೀಕ್ಷಿತವಾಗಿ ಎಲ್ಲರ ಚಿತ್ತ ಕದ್ದಿದ್ದ ಐಪಿಎಲ್ ರಿಟೇನ್ ಲೀಸ್ಟ್ ಮೇಲೆ ಎಲ್ಲರ ಚಿತ್ತ ನೆಟ್ಟಿತ್ತು. ಆರ್‌ಸಿಬಿ ಅಳೆದು ತೂಗಿ ಮೂವರು ಆಟಗಾರರಿಗೆ ಮಣೆ ಹಾಕಿದೆ. ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರನ್ನು ಆರ್‌ಸಿಬಿ ಮೊದಲ ಆಯ್ಕೆಯ ಆಟಗಾರನಾಗಿ ಉಳಿದುಕೊಳ್ಳಲಿದ್ದಾರೆ. ಮಧ್ಯಮ ಕ್ರಮಾಂಕದ ಸ್ಟಾರ್ ಆಟಗಾರ ರುತುರಾಜ್ ಗಾಯಕ್ವಾಡ್ ಮೂರನೇ ಆಯ್ಕೆಯ ಆಟಗಾರರಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಕಳೆದ ಆವೃತ್ತಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಫಾಫ್ ಡುಪ್ಲೇಸಿಸ್ ಅವರನ್ನು ಉಳಿಸಿಕೊಳ್ಳುವಲ್ಲಿ ಆರ್‌ಸಿಬಿ ವಿಫಲವಾಗಿದೆ. ಅಲ್ಲದೆ ಮೊಹಮ್ಮದ್ ಸಿರಾಜ್ ಅವರಿಗೆ ಗೇಟ್ ಪಾಸ್ ನೀಡಿದೆ. ಅಲ್ಲದೆಉ ಅನ್ ಕ್ಯಾಪ್ಡ್ ಪ್ಲೇಯರ್ ಆಗಿ ಯಶ್ ದಯಾಳ್ ಅವರಿಗೆ ಸ್ಥಾನ ನೀಡಿದೆ.

ವಿರಾಟ್ ಕೊಹ್ಲಿಗೆ ಎಷ್ಟು ಹಣ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರನ್ನು ಭಾರೀ ಮೊತ್ತ ನೀಡಿ ಉಳಿಸಿಕೊಳ್ಳಲಾಗಿದೆ. ವಿರಾಟ್ ಕೊಹ್ಲಿಯನ್ನು ಉಳಿಸಿಕೊಳ್ಳಲು 21 ಕೋಟಿ ರೂ. ನೀಡಿದೆ. ವಿರಾಟ್ ಕೊಹ್ಲಿ ಹೊರತುಪಡಿಸಿ ರಜತ್ ಪಾಟಿದಾರ್ ಅವರನ್ನು 11 ಕೋಟಿ ರೂ. ನೀಡಿದೆ ತಂಡದ ಜೆರ್ಸಿ ತೊಡಲು ಮತ್ತೆ ಸೂಚಿಸಿದೆ. ಕಳೆದ ಋತುವಿನಲ್ಲಿ ರಜತ್ ಪಾಟಿದಾರ್ ಅದ್ಭುತ ಬ್ಯಾಟಿಂಗ್ ನಡೆಸಿ ತಂಡಕ್ಕೆ ನೆರವಾಗಿದ್ದರು. ಹೀಗಾಗಿ ಅವರನ್ನು ತಂಡ ಬಿಟ್ಟುಕೊಟ್ಟಿಲ್ಲ. ಅಲ್ಲದೆ ಇತ್ತೀಚಿಗೆ ಮಧ್ಯಪ್ರದೇಶ ಪರ ಬ್ಯಾಟ್ ಮಾಡಿದ್ದ ರಜತ್ ಪಟೀದಾರ್ ಅತಿ ವೇಗದ ಶತಕ ಬಾರಿಸಿ ಭರವಸೆ ಮೂಡಿಸಿದ್ದರು.
ದಯಾಳ್‌ಗೆ ಅವಕಾಶ?
ಇನ್ನು ಆರ್‌ಸಿಬಿ ತಂಡ ಯಶ್ ದಯಾಳ್ ಅವರನ್ನು ಅನ್ ಕ್ಯಾಪ್ಡ್ ಆಟಗಾರರಾಗಿ ಉಳಿಸಿಕೊಂಡಿದೆ. ಇವರಿಗೆ 5 ಕೋಟಿ ನೀಡಿ ತಂಡದಲ್ಲಿ ಉಳಿಸಿಕೊಳ್ಳಲು ಮುಂದಾಗಿದೆ. ಇವರು ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ಅಮೋಘ ಬೌಲಿಂಗ್ ಪ್ರದರ್ಶನ ನೀಡಿ ತಂಡಕ್ಕೆ ನೆರವಾಗಿದ್ದರು. ಇವರು ಪವರ್ ಪ್ಲೇ ಹಾಗೂ ಡೆತ್ ಓವರ್‌ಗಳಲ್ಲಿ ಮೊನಚಾದ ದಾಳಿ ಸಂಘಟಿಸಿ ತಂಡಕ್ಕೆ ಆಧಾರವಾಗಬಲ್ಲ ಆಟಗಾರ. ಹೀಗಾಗಿಯೇ ಇವರಿಗೆ ತಂಡ ರೆಡ್ ಕಾರ್ಪೆಟ್ ಹಾಕಿದೆ.
ನಾಯಕ ಕಿಕ್ ಔಟ್
ಆರ್‌ಸಿಬಿ ತಂಡ ತಾನು ಉಳಿಕೊಳ್ಳುವ ಆಟಗಾರರಲ್ಲಿ ಫಾಫ್ ಡುಪ್ಲೇಸಿಸ್ ಅವರಿಗೆ ಸ್ಥಾನ ನೀಡಿಲ್ಲ. ಇವರ ನಾಯಕತ್ವದಲ್ಲಿ ಕಳೆದ ಬಾರಿ ಆರ್‌ಸಿಬಿ ಪ್ಲೇ ಆಫ್ ಪ್ರವೇಶಿಸಿತ್ತು. ಇವರನ್ನ ಮ್ಯಾನೇಜ್ಮೆಂಟ್ ಉಳಿಸಿಕೊಳ್ಳದೇ ಇರುವುದಕ್ಕೆ ಹಲವು ಪ್ರಶ್ನೆಗಳು ಎದ್ದಿವೆ. ಇವರನ್ನು ಮತ್ತೆ ತಂಡಕ್ಕೆ ಸೇರಿಸಿಕೊಳ್ಳಲು ಆರ್‌ಸಿಬಿ ಆರ್‌ಟಿಎಂ ಬಳಸಬಹುದಾಗಿದೆ.
ವಿದೇಶಿಗರಿಗೆ ಗೇಟ್ ಪಾಸ್
ಕಳೆದ ಐಪಿಎಲ್ ಆವೃತ್ತಿಯಲ್ಲಿ ವೇಗದ ಶತಕ ಬಾರಿಸಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದ ವಿದೇಶಿ ಆಟಗಾರ ವಿಲ್ ಜಾಕ್ಸ್ ಅವರನ್ನು ಆರ್‌ಸಿಬಿ ಹರಾಜು ಅಂಗಳಕ್ಕೆ ಬಿಟ್ಟಿದೆ. ಇವರು ಬ್ಯಾಟಿಂಗ್ ಹಾಗೂ ಬೌಲಿಂಗ್ ಮಾಡಬಲ್ಲ ಕ್ಷಮತೆ ಹೊಂದಿದ್ದಾರೆ. ಇವರಿಗೆ ಹರಾಜಿನಲ್ಲಿ ಹಣದ ಹೊಳೆಯನ್ನು ಹರಿಸಲು ಮಾಲೀಕರು ಪ್ಲ್ಯಾನ್ ಮಾಡಿಕೊಂಡಿರುತ್ತಾರೆ.
ಕಳೆದ ಬಾರಿಯ ದುಬಾರಿ ಪ್ಲೇಯರ್ ಔಟ್
ಕಳೆದ ಆವೃತ್ತಿಯ ಐಪಿಎಲ್ ಹರಾಜಿಗೂ ಮುನ್ನ ಆರ್‌ಸಿಬಿ ಮುಂಬೈ ಇಂಡಿಯನ್ಸ್ ತಂಡದಿಂದ ಟ್ರೇಡ್ ಮಾಡಿಕೊಂಡಿದ್ದ ಕ್ಯಾಮರೂನ್ ಗ್ರೀನ್ ಅವರನ್ನು ಸಹ ಆರ್‌ಸಿಬಿ ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ. ಅಲ್ಲದೆ ಸ್ಟಾರ್ ಆಲ್‌ರೌಂಡರ್ ಗ್ಲೇನ್ ಮ್ಯಾಕ್ಸ್‌ವೆಲ್ ಕಳೆದ ಬಾರಿಯ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ಎಡವಿದ್ದರು. ಹೀಗಾಗಿ ಇವರ ಕಳಪೆ ಆಟದಿಂದ ಕಂಗೆಟ್ಟ ಮ್ಯಾನೇಜ್ಮೆಂಟ್ ಹರಾಜು ಅಂಗಳಕ್ಕೆ ಬಿಟ್ಟಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications