Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2025: ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಮಳೆ ಭೀತಿ?; ಹವಾಮಾನ ವರದಿ ಏನದೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ 2025 ರ ಹೈವೋಲ್ಟೇಜ್ ಪಂದ್ಯ ಇಂದು ಅಂದರೆ, ಶನಿವಾರ ಸಂಜೆ 7:30 ಗಂಟೆಗೆ ನಡೆಯಲಿದೆ. ಉಭಯ ತಂಡಗಳ ನಡುವಿನ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಈ ಬ್ಲಾಕ್‌ಬಸ್ಟರ್ ಪಂದ್ಯಕ್ಕೂ ಮುನ್ನ, ಹವಾಮಾನದ ಬಗ್ಗೆ ಒಂದು ಬಿಗ್ ಅಪ್ಡೇಟ್ ಸಿಕ್ಕಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ.

ಶನಿವಾರ ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ವರಿದ ತಿಳಿಸಿದೆ. ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದುವರೆಗೆ ಆಡಿರುವ 10 ಪಂದ್ಯಗಳಲ್ಲಿ 7 ರಲ್ಲಿ ಗೆದ್ದಿದ್ದು, 14 ಅಂಕಗಳನ್ನು ಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ಆಡಿದ 10 ಪಂದ್ಯಗಳಲ್ಲಿ 2 ರಲ್ಲಿ ಜಯ ಹಾಗು 8 ರಲ್ಲಿ ಹೀನಾಯ ಸೋಲನ್ನು ಎದುರಿಸಿದೆ. ಈ ಮೂಲಕ ಚೆನ್ನೈ 4 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಅಂದರೆ 10ನೇ ಸ್ಥಾನದಲ್ಲಿದೆ.

IPL 2025 RCB vs CSK match rain threat in Bengaluru

ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2025 ರ ಪ್ಲೇಆಫ್‌ನಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದೆ. ಆದಾಗ್ಯೂ, ಈ ಪಂದ್ಯದ ಮೇಲೆ ಮಳೆ ಪ್ರಭಾವ ಬೀರುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಶನಿವಾರ ಮಳೆಯಾಗುವ ಸಾಧ್ಯತೆ ಶೇ.70 ರಷ್ಟು ಇರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮೇ 3 ರಂದು ಮಧ್ಯಾಹ್ನ ಅಥವಾ ಸಂಜೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಹೈವೋಲ್ಟೇಜ್ ಪಂದ್ಯಕ್ಕೆ ಒಂದು ದಿನ ಮೊದಲು, ಶುಕ್ರವಾರ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭ್ಯಾಸ ಸೆಕ್ಷನ್ ಮಧ್ಯಾಹ್ನ 3 ಗಂಟೆಗೆ ಪ್ರಾರಂಭವಾದ 45 ನಿಮಿಷಗಳ ನಂತರ ಮಳೆ ಶುರುವಾಗಿತ್ತು. ಆದರೂ ಚೆನ್ನೈ ಆಟಗಾರರು ಸಂಜೆ 4:30 ರ ಹೊತ್ತಿಗೆ ಅಭ್ಯಾಸವನ್ನು ಪುನರಾರಂಭಿಸಿದರು.

ಶುಕ್ರವಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭ್ಯಾಸ ಅವಧಿಯು ಸಂಜೆ 5 ಗಂಟೆಗೆ ಪ್ರಾರಂಭವಾಯಿತು, ಇದರಲ್ಲಿ ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕ್ಕಲ್ ಸುಮಾರು ಒಂದು ಗಂಟೆ ಬ್ಯಾಟಿಂಗ್ ಮಾಡಿದರು. ಆದರೆ ಭಾರೀ ಮಳೆಯಿಂದಾಗಿ ಅಭ್ಯಾಸವನ್ನು ರದ್ದುಗೊಳಿಸಬೇಕಾಯಿತು. ಶುಕ್ರವಾರ ಸಂಜೆ ಸುರಿದ ಬಿರುಗಾಳಿ, ಮಿಂಚು ಮತ್ತು ಮಳೆಯಿಂದಾಗಿ ನಗರದಲ್ಲಿ ಭಾರೀ ನೀರು ನಿಂತಿತ್ತು. ಈ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಅತ್ಯಂತ ಮಹತ್ವದ್ದಾಗಿದೆ.

ಕಳೆದ ತಿಂಗಳು ಬೆಂಗಳೂರಿನಲ್ಲಿ ಸುರಿದ ಮಳೆಯಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವನ್ನು ತಲಾ 14 ಓವರ್‌ಗಳಿಗೆ ಇಳಿಸಲಾಯಿತು. ಒಂದು ವೇಳೆ ಮಳೆಯಿಂದಾಗಿ ಚೆನ್ನೈ ಮತ್ತು ಬೆಂಗಳೂರು ಪಂದ್ಯ ರದ್ದಾದರೆ, ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳು ಸಿಗಲಿದೆ.

Story first published: Saturday, May 3, 2025, 12:29 [IST]
Other articles published on May 3, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+