For Quick Alerts
ALLOW NOTIFICATIONS  
For Daily Alerts
 

Rohit Sharma: ವಾಖೆಂಡೆ ಸ್ಟೇಡಿಯಂನಲ್ಲಿ ವಿಶೇಷ ಸಾಧನೆಗೈದ ರೋಹಿತ್ ಶರ್ಮಾ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (ಎಂಐ) ತಂಡವು ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ತಂಡವನ್ನು ಎದುರಿಸಿತು. ಉಭಯ ತಂಡಗಳು ಏಪ್ರಿಲ್ 17 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮುಂಬೈ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದರು. ಹೈದರಾಬಾದ್ ತಂಡವು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲು ಇಳಿಯಿತು.

ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಬೌಲರ್‌ಗಳು ಅದ್ಭುತ ಬೌಲಿಂಗ್ ಪ್ರದರ್ಶಿಸಿದರು. ಪ್ರವಾಸಿ ಹೈದರಾಬಾದ್ ತಂಡವನ್ನು ಮೊದಲ ಇನ್ನಿಂಗ್ಸ್‌ನಲ್ಲಿ 162 ರನ್‌ಗಳಿಗೆ ಕಟ್ಟಿ ಹಾಕಿದರು. ಈ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ಪರ ಅನುಭವಿ ಬ್ಯಾಟರ್ ಮತ್ತು ಮಾಜಿ ನಾಯಕ ರೋಹಿತ್ ಶರ್ಮಾ ಬಿಗ್ ಇನ್ನಿಂಗ್ಸ್ ಆಡುವಲ್ಲಿ ವಿಫಲವಾದರು. ಇದರ ಹೊರತಾಗಿಯೂ ಎಲ್ಲರ ಗಮನ ಸೆಳೆದರು. ರೋಹಿತ್ ಶರ್ಮಾ ತಮ್ಮ ಇನ್ನಿಂಗ್ಸ್‌ನಲ್ಲಿ 3 ಸಿಕ್ಸರ್‌ಗಳನ್ನು ಬಾರಿಸಿ ಐಪಿಎಲ್ ಇತಿಹಾಸದಲ್ಲಿ ವಿಶೇಷ ಸಾಧನೆ ಮಾಡಿದರು.

IPL 2025 Rohit Sharma achieves special feat at the Walkende Stadium

ಮುಂಬೈ ಇಂಡಿಯನ್ಸ್ ಪರ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ ಮಾಡಿ 16 ಎಸೆತಗಳಲ್ಲಿ 3 ಭರ್ಜರಿ ಸಿಕ್ಸರ್ ನೆರವಿನಿಂದ 26 ರನ್ ಗಳಿಸಿದರು. ಈ ಮೂರು ಸಿಕ್ಸರ್ ನೆರವಿನಿಂದ ಅವರು ದಾಖಲೆ ಸೃಷ್ಟಿಸಿದರು. ಅವರು ವಾಂಖೆಡೆಯಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡರು. ಐಪಿಎಲ್‌ನಲ್ಲಿ ವಾಖೆಂಡೆ ಮೈದಾನದಲ್ಲಿ ರೋಹಿತ್ ಶರ್ಮಾ 102 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಒಂದೇ ಸ್ಟೇಡಿಯಂನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ನಾಲ್ಕನೇ ಬ್ಯಾಟರ್ ಎಂಬ ಹೆಗ್ಗಳಿಕೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗರಿಷ್ಠ 130 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಕ್ರಿಸ್ ಗೇಲ್ (127) ಮತ್ತು ಎಬಿ ಡಿವಿಲಿಯರ್ಸ್ (118) ಕ್ರಮವಾಗಿ ಪಟ್ಟಿಯಲ್ಲಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿದ್ದಾರೆ. ಇವರಿಬ್ಬರೂ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ಸಾಧನೆ ಮಾಡಿದ್ದಾರೆ.

ಒಂದೇ ಮೈದಾನದಲ್ಲಿ ಹೆಚ್ಚು ಸಿಕ್ಸರ್ ಬಾರಿಸಿದವರು

ವಿರಾಟ್ ಕೊಹ್ಲಿ - 130* ಸಿಕ್ಸರ್- ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ
ಕ್ರಿಸ್ ಗೇಲ್ - 127 ಸಿಕ್ಸರ್- ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ
ಎಬಿ ಡಿವಿಲಿಯರ್ಸ್ - 118 ಸಿಕ್ಸರ್- ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ
ರೋಹಿತ್ ಶರ್ಮಾ - 102* ಸಿಕ್ಸರ್- ಮುಂಬೈನ ವಾಂಖೆಡೆ ಕ್ರೀಡಾಂಗಣ

Story first published: Friday, April 18, 2025, 15:14 [IST]
Other articles published on Apr 18, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+