IPL 2025: ಮುಂಬೈ ಇಂಡಿಯನ್ಸ್ ತಂಡದ ಮೊದಲ ಪಂದ್ಯಕ್ಕೆ ರೋಹಿತ್ ಶರ್ಮಾ ನಾಯಕ?
ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಮೂರು ಬಾರಿ ನಿಧಾನಗತಿಯ ಓವರ್ ದರ ನಿಯಮವನ್ನು ಉಲ್ಲಂಘಿಸಿತ್ತು. ಕೊನೆ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಿಧಾನಗತಿಯ ಓವರ್ ಮಾಡಿತ್ತು. ಹೀಗಾಗಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ಐಪಿಎಲ್ 2025ರ ಮೊದಲ ಪಂದ್ಯದಿಂದ ಅಮಾನತುಗೊಳಿಸಲಾಗಿದೆ. ಈಗ ಮಾರ್ಚ್ 23 ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಯಾರು ಮುನ್ನಡೆಸುತ್ತಾರೆ ಎಂಬ ಚರ್ಚೆ ಹೆಚ್ಚಾಗಿದೆ?
ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸುವುದು ಯಾರು ಎಂಬ ಪ್ರಶ್ನೆಗೆ ಭಾರತ ತಂಡದ ಮಾಜಿ ಬ್ಯಾಟರ್ ಆಕಾಶ್ ಚೋಪ್ರಾ ಉತ್ತರ ನೀಡಿದ್ದಾರೆ. ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಲು ಮೂವರು ರೆಡಿಯಾಗಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಆಕಾಶ್ ಚೋಪ್ರಾ, ರೋಹಿತ್ ಅವರಿಗೆ ಮತ್ತೆ ನಾಯಕತ್ವ ನೀಡುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. 'ರೋಹಿತ್ ಶರ್ಮಾ ಕೆಲಸ ಬಿಟ್ಟಿದ್ದಾರೆ, ಅವರು ಮತ್ತೆ ಅದನ್ನು ಮತ್ತೆ ತೆಗೆದುಕೊಳ್ಳುವುದಿಲ್ಲ. ಅವರು ಒಂದು ಪಂದ್ಯಕ್ಕೆ ನಾಯಕತ್ವ ವಹಿಸುವುದಿಲ್ಲ. ಇಂತಹ ಸಂದರ್ಭದಲ್ಲಿ ಸೂರ್ಯಕುಮಾರ್ ಯಾದವ್ ಪೂರ್ವನಿಯೋಜಿತ ಆಯ್ಕೆಯಾಗಿರುತ್ತಾರೆ. ಅವರು ನಿಮ್ಮ ಭಾರತ ಟಿ20 ಕ್ರಿಕೆಟ್ ತಂಡದ ನಾಯಕರಾಗಿದ್ದರಿಂದ ಫ್ರಾಂಚೈಸಿ ಅವರ ಮೇಲೆ ನಂಬಿಕೆ ಇಡಬಹುದು ಎಂದಿದ್ದಾರೆ.
ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಭಾರತದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಐದು ಬಾರಿಯ ಚಾಂಪಿಯನ್ ತಂಡವನ್ನು ಮುನ್ನಡೆಸಬಹುದು ಎಂದು ಆಕಾಶ್ ಚೋಪ್ರಾ ಭವಿಷ್ಯ ನುಡಿದ್ದಾರೆ. ಐಪಿಎಲ್ 2024ರ ಟೂರ್ನಿಗೂ ಮುನ್ನ ರೋಹಿತ್ ಶರ್ಮಾ ಅವರನ್ನು ಮುಂಬೈ ಫ್ರಾಂಚೈಸಿಯ ನಾಯಕತ್ವದಿಂದ ಕೆಳಗಿಳಿಸಿತು. ನಂತರ ರೋಹಿತ್ ಶರ್ಮಾ ಸ್ಥಾನಕ್ಕೆ ಹಾರ್ದಿಕ್ ಪಾಂಡ್ಯ ಅವರನ್ನು ನೇಮಿಸಲಾಯಿತು. ಇದಾದ ನಂತರ ರೋಹಿತ್ ಅವರು ಮುಂಬೈ ಇಂಡಿಯನ್ಸ್ ತೊರೆದು ಐಪಿಎಲ್ 2025 ಮೆಗಾ ಹರಾಜಿನಲ್ಲಿ ಭಾಗವಹಿಸುತ್ತಾರೆ ಎಂಬ ಊಹಾಪೋಹವಿತ್ತು. ಆದಾಗ್ಯೂ, ರೋಹಿತ್ ಅವರನ್ನು ಮುಂಬೈ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್, ರೋಹಿತ್ ಶರ್ಮಾ, ತಿಲಕ್ ವರ್ಮಾ, ಟ್ರೆಂಟ್ ಬೌಲ್ಟ್, ನಮನ್ ಧೀರ್, ರಾಬಿನ್ ಮೆಂಗೆ, ಕರ್ಣ್ ಶರ್ಮಾ, ರಿಯಾನ್ ರಿಕಲ್ಟನ್, ದೀಪಕ್ ಚಾಹರ್, ಅಲ್ಲಾ ಘಜನ್ಫರ್, ವಿಲ್ ಜ್ಯಾಕ್ಸ್, ಅಶ್ವಿನಿ ಕುಮಾರ್, ಮಿಚೆಲ್ ಸ್ಯಾಂಟ್ನರ್, ರಾಜ್‌ಗಾನ್ ಸ್ರೀಸ್, ಸತ್ಯಯನ್ ಬಜಿತ್, ರೀಸೆ ತೋ ರಾಜು, ಬೆವೊನ್ ಜೇಕಬ್ಸ್, ಅರ್ಜುನ್ ತೆಂಡೂಲ್ಕರ್, ಲಿಜಾದ್ ವಿಲಿಯಮ್ಸ್, ವಿಘ್ನೇಶ್ ಪುತ್ತೂರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications