Rohit Sharma: ಆರ್‌ಸಿಬಿ ವಿರುದ್ಧವೂ ರೋಹಿತ್ ಶರ್ಮಾ ಫೇಲ್; ಮುಂದಿನ ಪಂದ್ಯದಲ್ಲಿ ಚಾನ್ಸ್ ಸಿಗುತ್ತಾ?
ಐಪಿಎಲ್ 2025 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಅವರು ಫಾರ್ಮ್ ಎದುರಿಸುತ್ತಿದ್ದಾರೆ. ಮೊದಲ ಮೂರು ಪಂದ್ಯದಲ್ಲಿ ಮಂಕಾದ ರೋಹಿತ್ ಶರ್ಮಾ ಬಿಗ್ ಇನ್ನಿಂಗ್ಸ್ ಆಡುವಲ್ಲಿ ವಿಫಲವಾಗದ್ದರು. ಬಳಿಕ ರೋಹಿತ್ ಶರ್ಮಾ ಗಾಯಗೊಂಡು ನಾಲ್ಕನೇ ಪಂದ್ಯದಿಂದ ಹೊರಗುಳಿದಿದ್ದರು. ಇದಾದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯಕ್ಕೆ ರೋಹಿತ್ ಶರ್ಮಾ ಮರಳಿದರು. ಆದರೆ ಈ ಪಂದ್ಯದಲ್ಲಿಯೂ ಅವರಿಂದ ವಿಶೇಷವಾದುದ್ದನ್ನು ಮಾಡಲು ಸಾಧ್ಯವಾಗಲಿಲ್ಲ. ರೋಹಿತ್ ಶರ್ಮಾ ಬ್ಯಾಟಿಂಗ್ ನೋಡಲು ವಾಂಖೆಡೆ ಸ್ಟೇಡಿಯಂಗೆ ಆಗಮಿಸಿದ ಮುಂಬೈ ಅಭಿಮಾನಿಗಳಿಗೆ ನಿರಾಸೆಯಾಯಿತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ, ರೋಹಿತ್ ಶರ್ಮಾ 2 ಬೌಂಡರಿ ಮತ್ತು 1 ಸಿಕ್ಸರ್ ಬಾರಿಸಿ ತಮ್ಮ ಇನ್ನಿಂಗ್ಸ್ ಅನ್ನು ಉತ್ತಮವಾಗಿ ಪ್ರಾರಂಭಿಸಿದರು. ಆದರೆ, ರೋಹಿತ್ ಶರ್ಮಾ ಅದನ್ನು ಬಿಗ್ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ವಿಫಲರಾದರು.

ರೋಹಿತ್ ಶರ್ಮಾ ತಮ್ಮ ಲಯ ಕಂಡುಕೊಳ್ಳುತ್ತಿದ್ದಂತೆ, ಆರ್‌ಸಿಬಿ ವೇಗಿ ಯಶ್ ದಯಾಳ್ ಔಟ್ ಮಾಡಿದರು. ಯಶ್ ದಯಾಳ್ ಎಸೆದ ಇನ್‌ಸ್ವಿಂಗ್ ಚೆಂಡನ್ನು ಸಂಪೂರ್ಣ ತಪ್ಪಿಸಿಕೊಂಡ ರೋಹಿತ್ ಶರ್ಮಾ ಕ್ಲೀನ್ ಬೌಲ್ಡ್ ಆದರು. ಅವರು 9 ಎಸೆತಗಳಲ್ಲಿ 17 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ರೋಹಿತ್ ಶರ್ಮಾ ಇಲ್ಲಿವರೆಗೆ ಆಡಿರುವ ನಾಲ್ಕು ಪಂದ್ಯದಲ್ಲಿ ಕ್ರಮವಾಗಿ 0, 8, 13, 17 ರನ್ ಗಳಿಸಿದ್ದಾರೆ. ಅವರ ಒಟ್ಟು 38 ರನ್ ಕಲೆ ಹಾಕಿದ್ದಾರೆ.
ರೋಹಿತ್ ಶರ್ಮಾ ಐಪಿಎಲ್ 2025 ರಲ್ಲಿ ಬ್ಯಾಟಿಂಗ್ ವೈಫಲ್ಯ ಕಾಣುತ್ತಿದ್ದಂತೆ ಟ್ರೋಲ್‌ಗಳು ಶುರುವಾಗಿವೆ. ಸಾಮಾಜಿಕ ಜಾಲತಾಣದಲ್ಲಿ ರೋಹಿತ್ ಶರ್ಮಾ ಅವರನ್ನು ಟ್ರೋಲ್ ಮಾಡಲಾಗುತ್ತಿದೆ. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ ಮೇಲೂ ಐಪಿಎಲ್ ಆಡುವುದರಲ್ಲಿ ಯಾವುದೇ ಅರ್ಥವಿಲ್ಲ. ರೋಹಿತ್ ಶರ್ಮಾ ಇಲ್ಲಿಗೆ ತಮ್ಮ ಐಪಿಎಲ್ ವೃತ್ತಿಜೀವನವನ್ನು ನಿಲ್ಲಿಸಬೇಕು ಎಂಬ ಒತ್ತಾಯಗಳು ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬರುತ್ತಿವೆ.
ಮತ್ತೊಂದೆಡೆ ರೋಹಿತ್ ಶರ್ಮಾ ಅವರನ್ನು ಔಟ್ ಮಾಡಲು ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ಜೋಶ್ ಹೇಜಲ್‌ವುಡ್ ಅವರನ್ನು ಬಳಸಲಿಲ್ಲ. ಅವರಿಗೆ ಯಶ್ ದಯಾಳ್ ಸಾಕು ಎಂದು ಟ್ರೋಲ್ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ರೋಹಿತ್ ಶರ್ಮಾ ಅವರಿಗೆ ಮುಂಬೈ ಇಂಡಿಯನ್ಸ್ ತಂಡದ ಮುಂದಿನ ಪಂದ್ಯಗಳಲ್ಲಿ ಆಡುವ ಅವಕಾಶ ಸಿಗುತ್ತದೆಯೇ? ಎಂಬುದು ಕುತೂಹಲ ಮೂಡಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications