For Quick Alerts
ALLOW NOTIFICATIONS  
For Daily Alerts
 

Rohit Sharma: ಚೆನ್ನೈ ವಿರುದ್ಧ ಬೌಂಡರಿ ಬಾರಿಸುತ್ತಲೇ ರೋಹಿತ್ ಶರ್ಮಾ ದಾಖಲೆ

18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ ಶನಿವಾರದಿಂದ ಆರಂಭವಾಗಲಿದೆ. ಭಾನುವಾರ ಡಬಲ್‌ ಹೆಡರ್‌ ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲಿ ಮಧ್ಯಾಹ್ನ ರಾಜಸ್ಥಾನ ರಾಯಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಕಾದಾಟ ನಡೆಸಲಿವೆ. ಸಂಜೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಸಂಜೆಯ ನಡೆಯುವ ಎರಡನೇ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯದಲ್ಲಿ ದಿಗ್ಗಜ ಆಟಗಾರರಾದ ಮಹೇಂದ್ರ ಸಿಂಗ್ ಧೋನಿ ಹಾಗೂ ರೋಹಿತ್ ಶರ್ಮಾ ಅಂಗಳ ಪ್ರವೇಶಿಸಲಿದ್ದಾರೆ.

ಈ ಪಂದ್ಯಕ್ಕೆ ಚೆನ್ನೈ ಅಂಗಳ ಸಾಕ್ಷಿಯಾಗಿದೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸಿ ಶುಭಾರಂಭ ಮಾಡುವ ಕನಸನ್ನು ಎರಡೂ ತಂಡಗಳು ಹೊಂದಿವೆ. ರೋಹಿತ್ ಶರ್ಮಾ ಚೆನ್ನೈ ವಿರುದ್ಧದ ಪಂದ್ಯದಲ್ಲಿ ಅಂಗಳಕ್ಕೆ ಇಳಿಯುತ್ತಲೇ ದೊಡ್ಡ ದಾಖಲೆಯನ್ನು ಬರೆಲಿದ್ದಾರೆ. ಅಲ್ಲದೆ ಈ ಪಂದ್ಯದಲ್ಲಿ ರೋಹಿತ್‌ ಒಟ್ಟು ಎರಡು ದಾಖಲೆಗಳನ್ನು ಬರೆಯಲಿದ್ದಾರೆ. ಹಾಗಿದ್ದರೆ ಆ ದಾಖಲೆಗಳು ಯಾವವು ಎಂಬ ಬಗ್ಗೆ ವರದಿ ಇಲ್ಲಿದೆ.

IPL 2025 Rohit Sharma Set to Break Two Records in Match Against CSK

ಚೆನ್ನೈ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಅಂಗಳಕ್ಕೆ ಇಳಿಯುತ್ತಲೇ ದೊಡ್ಡ ದಾಖಲೆಗೆ ತಮ್ಮ ಹೆಸರನ್ನು ನಮೂದಿಸಿಕೊಳ್ಳಲಿದ್ದಾರೆ. ಈ ಪಂದ್ಯ ಇವರಿಗೆ 258ನೇ ಐಪಿಎಲ್‌ ಪಂದ್ಯವಾಗಿರಲಿದೆ. ಈ ಮೂಲಕ ಐಪಿಎಲ್‌ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಕೂಲ್ ಕ್ಯಾಪ್ಟನ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ಇದ್ದಾರೆ. ಮಾಹಿ ಐಪಿಎಲ್‌ನಲ್ಲಿ ಒಟ್ಟು 264 ಪಂದ್ಯಗಳನ್ನು ಆಡಿದ ಹಿರಿಮೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದು ಇವರು 252 ಪಂದ್ಯಗಳನ್ನು ಆಡಿದ್ದಾರೆ.

ಐಪಿಎಲ್‌ನಲ್ಲಿ ರೋಹಿತ್‌ ಶರ್ಮಾ ಅಮೋಘ ಅಂಕಿ ಅಂಶಗಳನ್ನು ಹೊಂದಿದ್ದಾರೆ. ಇದೇ ವೇಳೆ ಚೆನ್ನೈ ವಿರುದ್ಧ ಪಂದ್ಯದಲ್ಲಿ 1 ಬೌಂಡರಿಯನ್ನು ಬಾರಿಸುತ್ತಲೇ ವಿಶೇಷ ಕ್ಲಬ್‌ ಸೇರಲಿದ್ದಾರೆ. ಟೀಮ್ ಇಂಡಿಯಾ ನಾಯಕ ರೋಹಿತ್‌, ಐಪಿಎಲ್‌ ಇತಿಹಾಸದಲ್ಲಿ 600 ಬೌಂಡರಿಗಳನ್ನು ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ. ಈ ಮೊದಲು ಈ ಸಾಧನೆಯನ್ನು ಕೇವಲ ಮೂರು ಜನ ಆಟಗಾರರು ಮಾತ್ರ ಮಾಡಿದ್ದಾರೆ.

IPL 2025 Rohit Sharma Set to Break Two Records in Match Against CSK

ಐಪಿಎಲ್‌ನಲ್ಲಿ ಅತಿ ಹೆಚ್ಚು ಬೌಂಡರಿಗಳನ್ನು ಬಾರಿಸಿದ ಕೀರ್ತಿ ಗಬ್ಬರ ಖ್ಯಾತಿಯ ಶಿಖರ್ ಧವನ್‌ ಅವರಿಗೆ ಸಲ್ಲುತ್ತದೆ. ಇವರು ಐಪಿಎಲ್‌ನಲ್ಲಿ 768 ಬೌಂಡರಿ ಸಿಡಿಸಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ವಿರಾಟ್‌ ಕೊಹ್ಲಿ ಇದ್ದು ವಿರಾಟ್‌ 705 ಬೌಂಡರಿ ಬಾರಿಸಿದ್ದಾರೆ. ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಡೇವಿಡ್‌ ವಾರ್ನರ್‌ ಸಹ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಕಾಣಿಸಿಕೊಳ್ಳಲಿದ್ದು, ಇವರ ಖಾತೆಯಲ್ಲಿ 663 ಬೌಂಡರಿಗಳಿವೆ.

Take a Poll

ಐಪಿಎಲ್‌ನಲ್ಲಿ ಅತಿ ಹೆಚ್ಚು ಬೌಂಡರಿ ಗಳಿಸಿದ ಬ್ಯಾಟ್ಸ್‌ಮನ್‌ಗಳು

  • ಶಿಖರ್ ಧವನ್ - 768
  • ವಿರಾಟ್ ಕೊಹ್ಲಿ - 705
  • ಡೇವಿಡ್ ವರ್ವರ್ - 663
  • ರೋಹಿತ್ ಶರ್ಮಾ - 599
  • ಸುರೇಶ್ ರೈನಾ - 506

Story first published: Saturday, March 22, 2025, 18:06 [IST]
Other articles published on Mar 22, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+