IPL 2025 RR VS KKR: ಮೊದಲ ಜಯದ ಹುಡುಕಾಟದಲ್ಲಿ ಕೆಕೆಆರ್ ಹಾಗೂ ರಾಜಸ್ಥಾನ
ಇಂಡೀಯನ್ ಪ್ರೀಮಿಯರ್ ಲೀಗ್‌ನಲ್ಲಿ ಎಲ್ಲ ತಂಡಗಳು ಈಗ ತಲಾ ಒಂದೊಂದು ಪಂದ್ಯವನ್ನು ಆಡಿವೆ. ಮಂಗಳವಾರ 18ನೇ ಆವೃತ್ತಿಯ ಐಪಿಎಲ್‌ನ 6ನೇ ಪಂದ್ಯಕ್ಕೆ ಗುವಾಹಟಿ ಅಂಗಳ ಸಜ್ಜಾಗಿದೆ. ಈ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಕಾದಾಟ ನಡೆಸಲಿವೆ. ಉಭಯ ತಂಡಗಳು ಮೊದಲ ಪಂದ್ಯದಲ್ಲಿ ಸೋಲು ಕಂಡಿದ್ದು, ಗೆಲುವಿನ ಹುಡುಕಾಟದಲ್ಲಿವೆ.
ಕೋಲ್ಕತ್ತಾ ನೈಟ್ ರೈಡರ್ಸ್ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಸೋಲು ಕಂಡಿತ್ತು. ಇನ್ನು ರಾಯಲ್ಸ್ 44 ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಿರಾಸೆ ಅನುಭವಿಸಿತ್ತು. ಹೀಗಾಗಿ ಸೋತ ಇಬ್ಬರಲ್ಲಿ ಗೆಲುವು ಯಾರಿಗೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಉಭಯ ತಂಡಗಳು ಬಲಾಢ್ಯವಾಗಿವೆ. ಈ ವೇಳೆ ಉಭಯ ತಂಡಗಳು 30 ಬಾರಿ ಮುಖಾಮುಖಿಯಾಗಿದ್ದು, ತಲಾ 14 ಪಂದ್ಯಗಳನ್ನು ಗೆದ್ದಿವೆ. ಎರಡೂ ತಂಡಗಳ ಕಾದಾಟದಲ್ಲಿ 224 ರನ್ ಗರಿಷ್ಠ ರನ್ ಆಗಿದೆ.

ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಲ್ಲಿಯವರೆಗೆ ಒಟ್ಟು 4 ಐಪಿಎಲ್ ಪಂದ್ಯ ನಡೆದಿವೆ. ಇವುಗಳಲ್ಲಿ, ಮೊದಲು ಬ್ಯಾಟಿಂಗ್ ಮಾಡಿದ ತಂಡ 1, ಚೇಸ್ ಮಾಡಿದ ತಂಡ ಎರಡು ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯವು ಫಲಿತಾಂಶವನ್ನು ಕಂಡಿಲ್ಲ. ಟಾಸ್ ಗೆದ್ದ ತಂಡ ಇಲ್ಲಿ ಇದುವರೆಗೆ ಒಂದೇ ಒಂದು ಪಂದ್ಯವನ್ನೂ ಗೆದ್ದಿಲ್ಲ. ಈ ಮೈದಾನ ಬ್ಯಾಟ್ಸ್‌ಮನ್‌ಗಳಿಗೆ ಸ್ವರ್ಗವೆಂದು ಪರಿಗಣಿಸಲಾಗಿದೆ. ಇಲ್ಲಿ ಚೆಂಡು ಬ್ಯಾಟ್‌ಗೆ ಚೆನ್ನಾಗಿ ಕನೆಕ್ಟ್ ಆಗುತ್ತದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬನಿ ದೊಡ್ಡ ಪಾತ್ರ ವಹಿಸಬಹುದು.
ಸೋಲಿನಿಂದ ಪಾಠ ಕಲಿಯಬೇಕಿದೆ ಆರ್‌ಆರ್
ರಾಜಸ್ಥಾನ ರಾಯಲ್ಸ್ ಮೊದಲ ಪಂದ್ಯದಲ್ಲಿ ಮಾಡಿದ ತಪ್ಪಿನಿಂದ ಪಾಠ ಕಲಿಯಬೇಕಿದೆ. ವೇಗಿ ಜೋಫ್ರಾ ಆರ್ಚರ್ ತಮ್ಮ ಶಿಸ್ತು ಬದ್ಧ ದಾಳಿಯನ್ನು ಸಂಘಟಿಸಬೇಕಿದೆ. ಫಜಲ್ಹಕ್ ಫಾರೂಕಿ ರನ್ ವೇಗಕ್ಕೆ ಕಡಿವಾಣ ಹಾಕಬೇಕಿದೆ. ಇನ್ನು ಸಂದೀಪ್ ಶರ್ಮಾ, ಮಹೇಶ್ ತೀಕ್ಷಣ, ತುಷಾರ್ ದೇಶಪಾಂಡೆ ಆರ್ಭಟಿಸಬೇಕಿದೆ. ಅಂದಗಾ ಮೊದಲ ಗೆಲುವಿನ ಕನಸು ನನಸಾಗುತ್ತದೆ.
ಬ್ಯಾಟಿಂಗ್ ವಿಭಾಗದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ತಂಡವನ್ನು ಸೇರಿದ ಸಂಜು ಸ್ಯಾಮ್ಸನ್ ಮನೋಹಕ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇನ್ನು ಧ್ರುವ್ ಜುರೇಲ್ ಸಹ ತಮ್ಮಲ್ಲಿನ ಬ್ಯಾಟಿಂಗ್ ಕ್ಷಮತೆ ಸಾರಿ ಹೇಳಿದ್ದಾರೆ. ಆದರೆ ಉಳಿದ ಬ್ಯಾಟರ್‌ಗಳು ಮೊದಲ ಪಂದ್ಯದಲ್ಲಿ ಮಾಡಿದ ತಪ್ಪನ್ನು ಮೆಟ್ಟಿನಿಂತು ಬ್ಯಾಟ್ ಮಾಡಬೇಕಿದೆ. ನಾಯಕ ರಿಯಾನ್ ಪರಾಗ್ ತಮ್ಮ ಜವಾಬ್ದಾರಿಗೆ ಅನುಸಾರವಾಗಿ ಬ್ಯಾಟಿಂಗ್ ಮಾಡಬೇಕಿದೆ. ಅಂದಾಗ ಗೆಲುವಿನ ಆಸೆ ಫಲಿಸುತ್ತದೆ.

ರಾಜಸ್ಥಾನ ಸಂಭಾವ್ಯ ತಂಡ: ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್ (ನಾಯಕ), ನಿತೀಶ್ ರಾಣಾ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ಫಜಲ್ಹಕ್ ಫಾರೂಕಿ, ಶಿವಂ ದುಬೆ, ಜೋಫ್ರಾ ಆರ್ಚರ್, ಮಹಿಷ್ ತೀಕ್ಷಣ, ತುಷಾರ್ ದೇಶಪಾಂಡೆ, ಸಂದೀಪ್ ಶರ್ಮಾ
ಅನುಭವಿಗಳ ಮೇಲೆ ಕಣ್ಣು
ಆರ್‌ಸಿಬಿ ವಿರುದ್ಧದ ಮೊದಲ ಪಂದ್ಯದಲ್ಲಿ ಉತ್ತಮ ಆರಂಭವನ್ನು ಕಂಡರೂ ಸಹ ಕೆಕೆಆರ್ ದೊಡ್ಡ ಮೊತ್ತವನ್ನು ಕಲೆ ಹಾಕುವಲ್ಲಿ ವಿಫಲವಾಗಿದೆ. ಅಜಿಂಕ್ಯ ರಹಾನೆ ಹಾಗೂ ಸುನಿಲ್ ನರೈನ್ ಜವಾಬ್ದಾರಿಯುತ ಆಟವನ್ನು ಆಡಬೇಕಿದೆ. ಮೊದಲ ಪಂದ್ಯದಲ್ಲಿ ಅಜಿಂಕ್ಯ ಕ್ಲಾಸಿಕ್ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಇದನ್ನು ಮುಂದುವರೆಸಬೇಕಿದೆ. ಆಂಡ್ರೆ ರಸೆಲ್, ಕ್ವಿಂಟನ್ ಡಿಕಾಕ್ ತಮ್ಮ ಸಾಮಥ್ಯಕ್ಕೆ ತಕ್ಕನಾಗಿ ಆಡಬೇಕಿದೆ. ಕೆಕೆಆರ್ ತಂಡದಲ್ಲಿ ಅನುಭವಿ ವೇಗದ ಬೌಲರ್‌ಗಳು ಇದ್ದಾರೆ. ಅಲ್ಲದೆ ಖ್ಯಾತ ನಾಮ ಸ್ಪಿನ್ ಬೌಲರ್‌ಗಳು ಸಹ ಇದ್ದಾರೆ. ಇವರೆಲ್ಲಾ ಎದುರಾಳಿ ಬ್ಯಾಟರ್‌ಗಳನ್ನು ಕಾಡಬೇಕಿದೆ. ಅಂದಾಗ ಗೆಲುವಿನ ಆಸೆ ಚಿಗುರುತ್ತದೆ.
ಕೆಕೆಆರ್ ಸಂಭಾವ್ಯ ತಂಡ: ಸುನಿಲ್ ನರೈನ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಅಜಿಂಕ್ಯ ರಹಾನೆ (ನಾಯಕ), ಅಂಗ್ಕ್ರಿಶ್ ರಘುವಂಶಿ, ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಹರ್ಷಿತ್ ರಾಣಾ, ಅನ್ರಿಚ್ ನಾರ್ಕಿಯಾ, ವರುಣ್ ಚಕ್ರವರ್ತಿ,
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications