IPL 2025 RR vs SRH: ಶುಭಾರಂಭದ ನಿರೀಕ್ಷೆಯಲ್ಲಿ ಹೈದರಾಬಾದ್, ರಾಜಸ್ಥಾನ
18ನೇ ಆವೃತ್ತಿಯ ಐಪಿಎಲ್‌ಗೆ ಶನಿವಾರ ಚಾಲನೆ ಸಿಕ್ಕಿದೆ. ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ 7 ವಿಕೆಟ್‌ಗಳಿಂದ ಕೆಕೆಆರ್ ತಂಡವನ್ನು ಮಣಿಸಿ ಶುಭಾರಂಭ ಮಾಡಿದೆ. ಭಾನುವಾರದ ಮಜೆಯನ್ನು ಐಪಿಎಲ್‌ನ ಎರಡು ಪಂದ್ಯಗಳು ಹೆಚ್ಚಿಸಲಿವೆ. ಮೊದಲ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಸನ್ ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಕಾದಾಟ ನಡೆಸಲಿವೆ. ಉಭಯ ತಂಡಗಳಲ್ಲಿ ಸ್ಟಾರ್ ಆಟಗಾರರು ಇದ್ದು ರೋಚಕತೆ ಹುಟ್ಟಿಸಿದೆ.
ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಹೈದರಾಬಾದ್ ಕೈ ಕೊಂಚ ಮೇಲಿದೆ. ಈ ಮೊದಲು ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಒಟ್ಟು 20 ಪಂದ್ಯಗಳಲ್ಲಿ ಮುಖಾಮುಖಿ ಆಗಿದ್ದವು. ಈ ವೇಳೆ ಸನ್ ತಂಡ 11 ಪಂದ್ಯಗಳಲ್ಲಿ ಜಯ ಸಾಧಿಸಿದ್ರೆ, ಆರ್‌ಆರ್ 9 ಪಂದ್ಯಗಳನ್ನು ಗೆದ್ದಿದೆ. ಉಭಯ ತಂಡಗಳ ಕಾಳಗದಲ್ಲಿ 220 ರನ್ ಗರಿಷ್ಠ ಸ್ಕೋರ್ ಆಗಿದೆ.

ಬಲಿಷ್ಠ ಬ್ಯಾಟಿಂಗ್
ಸನ್ ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟಿಂಗ್ ಬಲಾಢ್ಯವಾಗಿದೆ. ಆರಂಭಿಕರಾಗಿ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಈ ಇಬ್ಬರೂ ಬ್ಯಾಟರ್‌ಗಳು ಕಳೆದ ಆವೃತ್ತಿಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾಗಿದ್ದರು. ಈ ಆವೃತ್ತಿಯಲ್ಲೂ ಇಂತಹದ್ದೇ ಪ್ರದರ್ಶನ ನೀಡಿ ತಂಡಕ್ಕೆ ನೆರವಾಗು ಪ್ಲ್ಯಾನ್ ಮಾಡಿಕೊಂಡಿದೆ. ಸೌದಿಯಲ್ಲಿ ನಡೆದ ಐಪಿಎಲ್ ಹರಾಜಿನಲ್ಲಿ ಇಶಾನ್ ಕಿಶನ್ ಅವರನ್ನು ತಂಡ ಖರೀದಿಸಿದ್ದು, ಬ್ಯಾಟಿಂಗ್ ವಿಭಾಗ ಮತ್ತಷ್ಟು ಬಲಿಷ್ಠವಾದಂತೆ ಆಗಿದೆ. ಇನ್ನು ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ, ಹೆನ್ರಿಕ್ ಕ್ಲಾಸೇನ್, ಅಭಿನವ್ ಮನೋಹರ್ ತಂಡದ ಅಗತ್ಯಕ್ಕೆ ತಕ್ಕಂತೆ ಬ್ಯಾಟ್ ಮಾಡುವ ಕ್ಷಮತೆಯನ್ನು ಹೊಂದಿದ್ದಾರೆ.
ಬೌಲಿಂಗ್ ವಿಭಾಗವನ್ನು ಸ್ವತಃ ನಾಯಕ ಪ್ಯಾಟ್ ಕಮಿನ್ಸ್ ಮುನ್ನಡೆಸುತ್ತಿದ್ದು, ಇವರಿಗೆ ಹೊಸ ಚೆಂಡಿನಲ್ಲಿ ಮೊಹಮ್ಮದ್ ಶಮಿ ಉತ್ತಮ ಸಾಥ್ ನೀಡಲಿದ್ದಾರೆ. ಹರ್ಷಲ್ ಪಟೇಲ್ ತಂಡ ಸೇರಿದ್ದರಿಂದ ಡೆತ್ ಓವರ್‌ಗಳಲ್ಲಿ ಬಿಗುವಿನ ದಾಳಿ ನಡೆಸಬಲ್ಲರು. ಸ್ಪಿನ್ ಬೌಲರ್‌ಗಳಾಗಿ ಆಡಂ ಜಂಪಾ, ರಾಹುಲ್ ಚಹಾರ್ ಕಾಣಿಸಿಕೊಳ್ಳುವುದು ಖಚಿತ ಎನ್ನಲಾಗಿದೆ.
ಪರಾಗ್ ನಾಯಕ
ರಿಯಾನ್ ಪರಾಗ್ ಈ ಬಾರಿಯ ಐಪಿಎಲ್‌ನ ಆರಂಭಿಕ ಮೂರು ಪಂದ್ಯಗಳಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ನಾಯಕ ಸಂಜು ಸ್ಯಾಮ್ಸನ್ ಅವರ ಗಾಯದಿಂದ ಬಳಲುತ್ತಿದ್ದರಿಂದ ಇವರ ಸ್ಥಾನವನ್ನು ಪರಾಗ್ ತುಂಬಲಿದ್ದಾರೆ. ಈ ತಂಡದಲ್ಲೂ ಸ್ಟಾರ್ ಆಟಗಾರರ ದಂಡೇ ಇದೆ. ಯಶಸ್ವಿ ಜೈಸ್ವಾಲ್, ನಿತೀಶ್ ರಾಣಾ, ಧ್ರುವ್ ಜುರೇಲ್, ಶಿಮ್ರೋನ್ ಹೆಟ್ಮೆಯರ್, ರನ್ ವೇಗಕ್ಕೆ ಚುರುಕು ಮುಟ್ಟಿಸಬಲ್ಲ ಆಟಗಾರರು.

ಆರ್ ಆರ್ ಬೌಲಿಂಗ್ ಸಹ ಬಲಿಷ್ಠವಾಗಿದೆ. ಜೋಫ್ರಾ ಆರ್ಚರ್, ಸಂದೀಪ್ ಶರ್ಮಾ ತುಷಾರ್ ದೇಶಪಾಂಡೆ ವೇಗದ ಬೌಲಿಂಗ್ ನೊಗವನ್ನು ಹೊರಲಿದ್ದಾರೆ. ಇನ್ನು ವನಿಂದು ಹಸರಂಗ ಸಹ ಸ್ಪಿನ್ ಮ್ಯಾಜಿಕ್ ನಡೆಸಬಲ್ಲರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications