Riyan Parag: ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ರಿಯಾನ್ ಪರಾಗ್; ವಿಡಿಯೋ ವೈರಲ್!
ರಾಜಸ್ಥಾನ ರಾಯಲ್ಸ್ ತಂಡದ ಹಂಗಾಮಿ ನಾಯಕ ರಿಯಾನ್ ಪರಾಗ್ ಅವರು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗುತ್ತಿದ್ದಾರೆ. ನೆಟ್ಟಿಗರ ಕೆಂಗಣ್ಣಿಗೆ ರಿಯಾನ್ ಪರಾಗ್ ಗುರಿಯಾಗಿದ್ದಾರೆ. ಹೀಗಾಗಿ ರಿಯಾನ್ ಪರಾಗ್ ಮೇಲೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಭಾನುವಾರ ಗುವಾಹಟಿಯಲ್ಲಿ ನಡೆದ ಐಪಿಎಲ್ 2025ರ 11ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ಸೋಲಿಸಿತು. ಈ ಪಂದ್ಯದ ನಂತರ ರಿಯಾನ್ ಪರಾಗ್ ನಡೆದುಕೊಂಡ ರೀತಿಗೆ ಟ್ರೋಲ್ ಮಾಡಲಾಗುತ್ತಿದೆ. ಭದ್ರತಾ ಸಿಬ್ಬಂದಿಯೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡ ನಂತರ ಅವರ ಕಡೆಗೆ ರಿಯಾನ್ ಪರಾಗ್ ಫೋನ್ ಎಸೆದಿದಿದ್ದಾರೆ. ಇದಕ್ಕಾಗಿ ನೆಟ್ಟಿಗರು ಅವರನ್ನು ಟೀಕಿಸುತ್ತಿದ್ದಾರೆ.
ಭಾನುವಾರ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ರಿಯಾನ್ ಪರಾಗ್ ನೇತೃತ್ವದ ರಾಜಸ್ಥಾನ ರಾಯಲ್ಸ್ 6 ರನ್‌ಗಳಿಂದ ಸೋಲಿಸಿತು. ಈ ಗೆಲುವಿನ ನಂತರ, ರಿಯಾನ್ ಪರಾಗ್ ಮೈದಾನ ಮತ್ತು ಭದ್ರತಾ ಸಿಬ್ಬಂದಿಗಳಿಗೆ ಆಟೋಗ್ರಾಫ್ ಹಾಕುತ್ತಾ ಫೋಟೋಗಳಿಗೆ ಪೋಸ್ ನೀಡುತ್ತಿರುವುದು ಕಂಡುಬಂದಿತು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ವಿಡಿಯೋದಲ್ಲಿ ರಿಯಾನ್ ಪರಾಗ್ ಫೋಟೋಗೆ ಪೋಸ್ ನೀಡಿ, ನಂತರ ಫೋನ್ ಅನ್ನು ಗುಂಪಿನಲ್ಲಿದ್ದವರ ಕೈಗೆ ಕೊಡುವ ಬದಲು ಎಸೆದಿದ್ದಾರೆ. ಇದನ್ನು ಕಂಡ ನೆಟ್ಟಿಗರು ರಿಯಾನ್ ಪರಾಗ್ ಅವರ ಅನಗತ್ಯ ವರ್ತನೆಯನ್ನು ಟೀಕಿಸಿದ್ದು, ಅಭಿಮಾನಿಗಳೊಂದಿಗೆ ಸ್ವಲ್ಪ ವಿನಮ್ರರಾಗಿರಲು ಮನವಿ ಮಾಡಿಕೊಂಡಿದ್ದಾರೆ.
ಇದಕ್ಕೂ ಮೊದಲು, ಗುವಾಹಟಿಯಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಪಂದ್ಯದ ಸಮಯದಲ್ಲಿ ಅಭಿಮಾನಿಯೊಬ್ಬ ಭದ್ರತೆಯನ್ನು ಉಲ್ಲಂಘಿಸಿ ಮೈದಾನಕ್ಕೆ ನುಗ್ಗಿ ರಿಯಾನ್ ಪರಾಗ್ ಅವರ ಕಾಲಿಗೆಡ ಬಿದ್ದಿದ್ದನು. ಇದಾದ ನಂತರ ಪರಾಗ್ ಸುದ್ದಿಯಾಗಿದ್ದರು. ಈಗ ಮತ್ತೊಮ್ಮೆ ಪರಾಗ್ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರಿಗೆ ಆಹಾರವಾಗಿದ್ದಾರೆ.
ಐಪಿಎಲ್ 2025 ರಲ್ಲಿ ರಿಯಾನ್ ಪರಾಗ್ ಇಲ್ಲಿಯವರೆಗೆ ಬಿಗ್ ಇನ್ನಿಂಗ್ಸ್ ಆಡಲು ಸಾಧ್ಯವಾಗಿಲ್ಲ. ಆದಾಗ್ಯೂ, ಅವರು ಸಿಎಸ್‌ಕೆ ವಿರುದ್ಧ ಗೆಲುವಿನಲ್ಲಿ ನಿರ್ಣಾಯಕ ಕೊಡುಗೆ ನೀಡಿದರು. ತಲಾ ಎರಡು ಬೌಂಡರಿ ಮತ್ತು ಸಿಕ್ಸರ್‌ಗಳ ನೆರವಿನಿಂದ 37 ರನ್‌ಗಳನ್ನು ಗಳಿಸಿದರು. ನಿತೀಶ್ ರಾಣಾ 81 ರನ್ ಗಳಿಸುವ ಮೂಲಕ ರಾಜಸ್ಥಾನ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಪರಿಣಾಮ ರಾಜಸ್ಥಾನ ತಂಡವು ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಚೆನ್ನೈ ತಂಡವು 6 ವಿಕೆಟ್ ಕಳೆದುಕೊಂಡು 176 ರನ್‌ಗಳಿಗೆ ಸೀಮಿತವಾಯಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications