For Quick Alerts
ALLOW NOTIFICATIONS  
For Daily Alerts
 

Shubman Gill: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶುಭಮನ್ ಗಿಲ್ ವಿಶೇ‍ಷ ಸಾಧನೆ

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್ ಗಿಲ್ ಇತಿಹಾಸ ನಿರ್ಮಿಸಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗಿಲ್ ವಿಶೇಷ ಸಾಧನೆ ಮಾಡಿದ್ದಾರೆ. ಇದುವರೆಗೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಯಾರು ಮಾಡದ ದಾಖಲೆಯನ್ನು ಗಿಲ್ ಸೃಷ್ಟಿಸಿದ್ದಾರೆ.

ಶುಭಮನ್ ಗಿಲ್ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 1000 ಐಪಿಎಲ್ ರನ್ ಗಳಿಸಿದ ಮೊದಲ ಬ್ಯಾಟರ್‍‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ, ಗಿಲ್ ಈ ಸಾಧನೆ ಮಾಡಲು ಕೇವಲ 14 ರನ್‌ಗಳ ದೂರದಲ್ಲಿದ್ದರು. ಅವರು ಐಪಿಎಲ್‌ನಲ್ಲಿ 986 ರನ್ ಗಳಿಸಿದ್ದರು.

IPL 2025 Shubman Gill creates special record at Narendra Modi Stadium

ಮುಂಬೈ ಇಂಡಿಯನ್ಸ್ ವಿರುದ್ಧ ಶುಭಮನ್ ಗಿಲ್ 14 ರನ್ ಗಳಿಸಿದ ತಕ್ಷಣ ಈ ವಿಶೇಷ ಸಾಧನೆಯನ್ನು ಸಾಧಿಸಿದರು. ಜಿಟಿ ಇನ್ನಿಂಗ್ಸ್‌ ನಾಲ್ಕನೇ ಓವರ್‍‌ನ ದೀಪಕ್ ಚಹಾರ್ ಎಸೆತದಲ್ಲಿ ಈ ಸಾಧನೆ ಮಾಡುವ ಮೂಲಕ ಸಂಭ್ರಮಿಸಿದರು. ಆ ಓವರ್‌ನ ಮೊದಲ ಎಸೆತದಲ್ಲಿ ಚೆಂಡನ್ನು ಡೀಪ್ ಬ್ಯಾಕ್‌ವರ್ಡ್ ಪಾಯಿಂಟ್ ಕಡೆಗೆ ಆಡಿದ ಗಿಲ್, ಒಂದು ಸಿಂಗಲ್ ತೆಗೆದುಕೊಂಡು 1000 ರನ್ ಗಳಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ, ಅವರು ಒಂದು ನಿರ್ದಿಷ್ಟ ಸ್ಥಳದಲ್ಲಿ 1000 ಐಪಿಎಲ್ ರನ್ ಗಳಿಸಿದ ಎರಡನೇ ಅತಿ ಕಡಿಮೆ ಇನ್ನಿಂಗ್ಸ್‌ಗಳನ್ನು ಆಡಿದರು.

ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೇವಲ 19 ಇನ್ನಿಂಗ್ಸ್‌ಗಳಲ್ಲಿ 1000 ರನ್ ಗಳಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳಳೂರು (ಆರ್‍‌ಸಿಬಿ) ತಂಡದ ಮಾಜಿ ಸ್ಪೋಟಕ ಬ್ಯಾಟರ್ ಕ್ರಿಸ್ ಗೇಲ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಶುಭಮನ್ ಗಿಲ್ ಇದ್ದಾರೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಗುಜರಾತ್ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದರು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡ ಸಾಯಿ ಸುದರ್ಶನ್ (63), ಜೋಸ್ ಬಟ್ಲರ್ (39) ಮತ್ತು ಶುಭ್ಮನ್ ಗಿಲ್ (38) ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ 8 ವಿಕೆಟ್‌ ನಷ್ಟಕ್ಕೆ 196 ರನ್ ಗಳಿಸಿತು. ಈಗ ಮುಂಬೈ ಗೆಲ್ಲಲು 120 ಎಸೆತಗಳಲ್ಲಿ 197 ರನ್ ಗಳಿಸಬೇಕಾಗಿದೆ.

ಐಪಿಎಲ್ 2025 ರಲ್ಲಿ ತನ್ನ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 11 ರನ್‌ಗಳ ಸೋಲು ಅನುಭವಿಸುವ ಮೂಲಕ ಗುಜರಾತ್ ಟೈಟಾನ್ಸ್‌ ತಂಡವು ತನ್ನ ಅಭಿಯಾನವನ್ನು ಆರಂಭಿಸಿತು. ಐಪಿಎಲ್ 2024 ರಲ್ಲಿ ಗುಜರಾತ್ ಟೈಟಾನ್ಸ್ ತಂಡ 14 ಪಂದ್ಯಗಳಿಂದ 12 ಅಂಕಗಳೊಂದಿಗೆ ಎಂಟನೇ ಸ್ಥಾನ ಗಳಿಸಿತು. ಪ್ಲೇಆಫ್‌ಗೆ ಅರ್ಹತೆ ಪಡೆಯಲು ಸಾಧ್ಯವಾಗಲಿಲ್ಲ.

Story first published: Saturday, March 29, 2025, 21:50 [IST]
Other articles published on Mar 29, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+