IPL Unsung Hero: ಹೈದರಾಬಾದ್ ಎದುರು ಶ್ರೇಯಸ್ ಅಯ್ಯರ್ "ಫೈಯರ್'
ಐಪಿಎಲ್ 2025 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಮತ್ತೊಮ್ಮೆ ಕಹಳೆ ಮೊಳಗಿಸಿದೆ. ಪಂಜಾಬ್ ಕಿಂಗ್ಸ್ ತಂಡವನ್ನು ಹೈದರಾಬಾದ್ 8 ವಿಕೆಟ್‌ಗಳಿಂದ ಸೋಲಿಸಿದೆ. ಸತತ ಸೋಲಿನಿಂದ ಕಂಗೆಟ್ಟಿದ ಹೈದರಾಬಾದ್ ತಂಡಕ್ಕೆ ಅಭಿಷೇಕ್ ಶರ್ಮಾ ಶತಕ ಸಂತಸ ತರಿಸಿದೆ. ಜೊತೆಗೆ ಗೆಲುವಿನ ಹಾದಿಗೆ ಮರಳಿರುವ ಹೈದರಾಬಾದ್ ತಂಡ ದಾಖಲೆಯ ಮೊತ್ತವನ್ನು ಚೇಸಿಂಗ್ ಮಾಡಿದೆ. ಇದಕ್ಕೆ ಮುಖ್ಯ ಕಾರಣ ಎಂದರೆ ಯುವ ಸ್ಪೋಟಕ ಬ್ಯಾಟರ್ ಅಭಿಷೇಕ್ ಶರ್ಮಾ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ನಿಗದಿತ 20 ಓವರ್‍ಗಳಲ್ಲಿ 6 ವಿಕೆಟ್ ಕಳೆದುಕೊಂಡು 245 ರನ್ ಕಲೆ ಹಾಕಿತು. ಈ ಬೃಹತ್ ಗುರಿ ಬೆನ್ನಟ್ಟಿದ ಹೈದರಾಬಾದ್ ಕೇವಲ 18.3 ಓವರ್‍ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 247 ರನ್ ಗಳಿಸಿ ಅದ್ಭುತ ಗೆಲುವು ಸಾಧಿಸಿತು. ಪಂಜಾಬ್ ಕಿಂಗ್ಸ್ ಪಂದ್ಯವನ್ನು ಸೋತರೂ, ನಾಯಕ ಶ್ರೇಯಸ್ ಅಯ್ಯರ್ ಮಾತ್ರ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ಎಲ್ಲರ ಗಮನ ಸೆಳೆದರು.

ಪಂಜಾಬ್ ಪರ ಇನ್ನಿಂಗ್ಸ್ ತೆರೆಯಲು ಬಂದ ಪ್ರಿಯಾಂಶ್ ಆರ್ಯ ಮತ್ತು ಪ್ರಭಾಸಿಮ್ರಾನ್ ಸಿಂಗ್ ಜೋಡಿ ಉತ್ತಮ ಆರಂಭ ನೀಡಿದರು. ಮೊದಲ ವಿಕೆಟ್‌ಗೆ ಈ ಜೋಡಿ 66 ರನ್‌ಗಳ ಜೊತೆಯಾಟ ಆಡಿದರು. ಈ ಮೂಲಕ ಪಂಜಾಬ್ ತಂಡದ ಇನ್ನಿಂಗ್ಸ್‌ಗೆ ಭದ್ರ ಬುನಾದಿ ಹಾಕಿದರು. ಪ್ರಿಯಾಂಶ್ ಆರ್ಯ 13 ಎಸೆತಗಳಲ್ಲಿ 36 ರನ್ ಗಳಿಸಿ ಔಟಾದರೆ, ಪ್ರಭಾಸಿಮ್ರಾನ್ ಸಿಂಗ್ 23 ಎಸೆತಗಳಲ್ಲಿ 42 ರನ್ ಗಳಿಸಿ ವಿಕೆಟ್ ಕಳೆದುಕೊಂಡರು. ಇಲ್ಲಿಂದ ನಾಯಕ ಶ್ರೇಯಸ್ ಅಯ್ಯರ್ ಅವರ ಬ್ಯಾಟಿಂಗ್ ಫೈಯರ್ ಶುರುವಾಯಿತು.
ತವರಿನಲ್ಲಿ ಹೈದರಾಬಾದ್ ಬೌಲರ್ಸ್ ಶ್ರೇಯಸ್ ಅಯ್ಯರ್ ವಿಕೆಟ್ ಪಡೆಯಲು ಪ್ರಯತ್ನ ಪಟ್ಟರು ಫಲ ಸಿಗಲಿಲ್ಲ. ಕ್ಲಾಸಿಕ್ ಬ್ಯಾಟಿಂಗ್ ಮಾಡಿದ ಅಯ್ಯರ್ ಬೌಂಡರಿ ಮತ್ತು ಸಿಕ್ಸರ್ ಸಿಡಿಸಿ ಮಿಂಚಿದರು. ಅವರು ಕೇವಲ 36 ಎಸೆತಗಳಲ್ಲಿ ತಲಾ 6 ಬೌಂಡರಿ ಮತ್ತು ಸಿಕ್ಸರ್ ನೆರವಿನಿಂದ 82 ರನ್ ಬಾರಿಸಿ ವಿಕೆಟ್ ಕಳೆದುಕೊಂಡರು. ಅಯ್ಯರ್ ಇನ್ಸಿಂಗ್ಸ್ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡ ಬೃಹತ್ ಮೊತ್ತ ಕಲೆ ಹಾಕಲು ಸಾಧ್ಯವಾಯಿತು. ಆದರೆ ತಂಡಕ್ಕೆ ಬೌಲರ್ಸ್ ಯಶಸ್ಸು ತಂದು ಕೊಡಲಿಲ್ಲ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications