Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2025: ಮುಂಬೈ ವಿರುದ್ಧದ ಪಂದ್ಯಕ್ಕಾಗಿ ಕೆಕೆಆರ್‌ ಸೇರಿದ ಅನುಭವಿ ಆಲ್‌ರೌಂಡರ್

ಐಪಿಎಲ್ 2025 ರ 12ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಲಿದೆ. ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ 2025 ರ ಸೀಸನ್‌ನಲ್ಲಿ ಮೊದಲ ಬಾರಿಗೆ ತವರಿನಲ್ಲಿ ಆಡುವ ಉತ್ಸಾಹದಲ್ಲಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಮುಂಬೈ ಇಂಡಿಯನ್ಸ್ ಇನ್ನೂ ಗೆಲುವಿನ ಖಾತೆ ತೆರೆದಿಲ್ಲ. ಇಂತಹ ಸಂದರ್ಭದಲ್ಲಿ ತನ್ನ ತವರಿನ ಅಭಿಮಾನಿಗಳ ಮುಂದೆ ಮುಂಬೈ ಇಂಡಿಯನ್ಸ್ ಗೆಲ್ಲುವ ನಿರೀಕ್ಷೆಯಲ್ಲಿದೆ. ಮತ್ತೊಂದೆಡೆ ಅಜಿಂಕ್ಯಾ ರಹಾನೆ ಮುನ್ನಡೆಸುತ್ತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಕೂಡ ತನ್ನ ಗೆಲುವಿನ ಓಟವನ್ನು ಮುಂದುವರೆಸಲು ಸಜ್ಜಾಗಿದೆ.

ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಆಡುವ ಹನ್ನೊಂದರ ಬಳಗದಲ್ಲಿ ಕೆಲವು ಬದಲಾವಣೆಗಳನ್ನು ಮಾಡಬಹುದು. ಉಭಯ ತಂಡಗಳಿಗೆ ಈ ಪಂದ್ಯದ ಗೆಲುವು ಅನಿವಾರ್ಯವಾಗಿದೆ.

IPL 2025 Star all-rounder Sunil Narine returned to the KKR team for the match against Mumbai Indians

ಐಪಿಎಲ್ 2025 ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಇದುವರೆಗೆ ಎರಡು ಪಂದ್ಯಗಳನ್ನು ಆಡಿದ್ದು, ಎರಡಲ್ಲೂ ಸೋಲು ಅನುಭವಿಸಿದೆ. ಮುಂಬೈ ಇಂಡಿಯನ್ಸ್ ಸ್ಟಾರ್ ಆಟಗಾರರನ್ನು ಹೊಂದಿದ್ದರೂ, ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಹೀಗಾಗಿ ಕೆಕೆಆರ್ ವಿರುದ್ಧದ ಪಂದ್ಯಕ್ಕಾಗಿ ಮುಂಬೈ ಇಂಡಿಯನ್ಸ್ ತಂಡದ ಆಡುವ ಹನ್ನೊಂದರ ಬಳಗದಲ್ಲಿ ದೊಡ್ಡ ಬದಲಾವಣೆಗಳನ್ನು ಕಾಣಬಹುದಾಗಿದೆ.

ಮುಜೀಬ್ ಉರ್ ರೆಹಮಾನ್ ಮತ್ತು ಸತ್ಯರಾಯಣ ರಾಜು ಅವರಂತಹ ಆಟಗಾರರನ್ನು ಮುಂಬೈ ಇಂಡಿಯನ್ಸ್ ಆಡುವ ಹನ್ನೊಂದರಿಂದ ಕೈ ಬಿಡುವ ಸಾಧ್ಯತೆ ಇದೆ. ಈ ಆಟಗಾರರ ಬದಲಿಗೆ ವಿಘ್ನೇಶ್ ಪುತ್ತೂರು ಮತ್ತು ರೀಸ್ ಟಾಪ್ಲಿಗೆ ಆಡುವ ಹನ್ನೊಂದರಲ್ಲಿ ಸ್ಥಾನ ಸಿಗಬಹುದು.

ಇನ್ನೊಂದೆಡೆ ಗೆಲುವಿನ ಓಟ ಮುಂದುವರೆಸುವ ನಿರೀಕ್ಷೆಯಲ್ಲಿರುವ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಸ್ಟಾರ್ ಅನುಭವಿ ಆಲ್‌ರೌಂಡರ್ ಮರಳಿದ್ದಾರೆ. ಈ ಆಲ್‌ರೌಂಡರ್ ಮರಳಿರುವುದು ತಂಡಕ್ಕೆ ಆನೆ ಬಲ ತಂದಿದೆ. ಹೀಗಾಹಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆಡುವ ಹನ್ನೊಂದರ ಬಳಗದಲ್ಲಿಯೂ ಬದಲಾವಣೆ ಆಗಬಹುದು. ಗಾಯಗೊಂಡು ಹೊರಗುಳಿದಿದ್ದ ಸುನಿಲ್ ನರೈನ್ ಅವರು ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ರೆಡಿಯಾಗಿದ್ದಾರೆ. ರಾಜಸ್ಥಾನ ರಾಯಲ್ಸ್ ವಿರುದ್ಧದ ಕಳೆದ ಪಂದ್ಯದಲ್ಲಿ ಸುನಿಲ್ ನರೈನ್ ಆಡಿರಲಿಲ್ಲ.

ಈಗ ಸುನಿಲ್ ನರೈನ್ ಸಂಪೂರ್ಣ ಫಿಟ್ ಆಗಿದ್ದು, ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ. ಅವರ ಆಗಮನದಿಂದಾಗು ಸ್ಪೆನ್ಸರ್ ಜಾನ್ಸನ್ ಅವರನ್ನು ಕೈ ಬಿಡಬಹುದು. ಕಳೆದ ಪಂದ್ಯದಲ್ಲಿ ಸ್ಪೆನ್ಸರ್ ಜಾನ್ಸನ್ ಅವರ ಪ್ರದರ್ಶನ ಹೇಳಿಕೊಳ್ಳುವಂತಿರಲಿಲ್ಲ. ಹೀಗಾಗಿ ಅವರ ಬದಲಿಗೆ ಅನುಭವಿ ಸುನಿಲ್ ನರೈನ್ ಸ್ಥಾನ ಪಡೆಯಲಿದ್ದಾರೆ.

ಉಭಯ ತಂಡಗಳ ಸಂಭಾವ್ಯ ಆಡುವ ಹನ್ನೊಂದರ ಬಳಗ

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ವಿಲ್ ಜಾಕ್ಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ಟ್ರೆಂಟ್ ಬೌಲ್ಟ್, ವಿಘ್ನೇಶ್ ಪುತೂರ್ ಮತ್ತು ರೀಸ್ ಟೋಪ್ಲಿ.

ಕೋಲ್ಕತ್ತಾ ನೈಟ್ ರೈಡರ್ಸ್: ಕ್ವಿಂಟನ್ ಡಿ ಕಾಕ್, ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ, ರಿಂಕು ಸಿಂಗ್, ಆಂಡ್ರೆ ರಸೆಲ್, ಅಂಗ್‌ಕ್ರಿಶ್ ರಘುವಂಶಿ, ಮೊಯಿನ್ ಅಲಿ, ವೈಭವ್ ಅರೋರಾ, ಹರ್ಷಿತ್ ರಾಣಾ ಮತ್ತು ವರುಣ್ ಚಕ್ರವರ್ತಿ.

Story first published: Monday, March 31, 2025, 16:05 [IST]
Other articles published on Mar 31, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+