Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Turning Point: ಡೆಲ್ಲಿ ಎದುರು ಸನ್‌ರೈಸರ್ಸ್ ಹೈದರಾಬಾದ್ ಸೋಲಿಗೆ ಇದೇ ಟರ್ನಿಂಗ್ ಪಾಯಿಂಟ್

ಭಾನುವಾರ ನಡೆದ ಐಪಿಎಲ್ 2025 ರ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸುಲಭ ಜಯ ಸಾಧಿಸಿತು. ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ನೀಡಿದ 164 ರನ್‌ಗಳ ಗೆಲುವಿನ ಮೊತ್ತವನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಇನ್ನೂ 4 ಓವರ್‍‌ಗಳು ಬಾಕಿ ಇರುವಂತೆಯೇ 7 ವಿಕೆಟ್‌ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ 18.4 ಓವರ್‌ಗಳಲ್ಲಿ 163 ರನ್‌ಗಳಿಗೆ ಆಲೌಟ್ ಆಯಿತು.

ಸನ್‌ರೈಸರ್ಸ್ ಹೈದರಾಬಾದ್ ತಂಡದ ಟಾಪ್ ಆರ್ಡರ್ ಕುಸಿತದ ನಂತರ, ಅನಿಕೇತ್ ವರ್ಮಾ ಬಿರುಸಿನ ಬ್ಯಾಟಿಂಗ್ ಮಾಡುವ ಮೂಲಕ ಆಸರೆಯಾದರು. ಅವರು 41 ಎಸೆತಗಳಲ್ಲಿ 74 ರನ್ ಗಳಿಸಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಹೆನ್ರಿಕ್ ಕ್ಲಾಸೆನ್ 19 ಎಸೆತಗಳಲ್ಲಿ 32 ರನ್ ಬಾರಿಸಿದರು. ಆದರೆ ಇಬ್ಬರೂ ನಿರ್ಣಾಯಕ ಹಂತಗಳಲ್ಲಿ ವಿಕೆಟ್‌ ಕಳೆದುಕೊಂಡರು. ಇದು ಹೈದರಾಬಾದ್ ತಂಡದ ಬಿಗ್ ಇನ್ನಿಂಗ್ಸ್‌ ಕುಸಿತಕ್ಕೆ ಕಾರಣವಾಯಿತು.

IPL 2025 Sunrisers Hyderabad vs Delhi Capitals Match Turning Point

ಡೆಲ್ಲಿ ಕ್ಯಾಪಿಟಲ್ಸ್ ಪರ ಸ್ಟಾರ್ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಮಿಂಚಿದರು. ಸ್ಟಾರ್ಕ್ ತಮ್ಮ ಮಿಂಚಿನ ಬೌಲಿಂಗ್ ದಾಳಿ ಮೂಲಕ ಹೈದರಾಬಾದ್ ತಂಡವನ್ನು ಕಾಡಿದರು. ಇದಲ್ಲದೆ, ಸ್ಪಿನ್ ವಿಭಾಗದಲ್ಲಿ ಚೈನಾಮ್ಯಾನ್ ಬೌಲರ್ ಎನಿಸಿಕೊಂಡಿರುವ ಕುಲದೀಪ್ ಯಾದವ್ ಕೂಡ ಹೈದರಬಾದ್ ತಂಡವನ್ನು ಕಟ್ಟಿ ಹಾಕಿದರು. ಮಿಚೆಲ್ ಸ್ಟಾರ್ಕ್ ಐದು ವಿಕೆಟ್ ಪಡೆಯುವ ಮೂಲಕ ಸಂಭ್ರಮಿಸಿದರೆ, ಕುಲದೀಪ್ ಯಾದವ್ ಮೂರು ವಿಕೆಟ್ ಕಬಳಿಸಿದರು.

ಟರ್ನಿಂಗ್ ಪಾಯಿಂಟ್

ಸನ್‌ರೈಸರ್ಸ್ ಹೈದರಾಬಾದ್ ತಂಡ ಆರಂಭದಲ್ಲಿ ಬಿಗ್ ಇನ್ನಿಂಗ್ಸ್ ಕಟ್ಟು ತಂತ್ರ ರೂಪಿಸಿಕೊಂಡು ಬಂದಿತ್ತು. ಆದರೆ ಈ ಬಾರಿಯೂ ಅದೃಷ್ಟ ಹೈದರಾಬಾದ್ ತಂಡದ ಕೈ ಹಿಡಿಯಲ್ಲಿಲ್ಲ. ದುರದೃಷ್ಟಕರ ಅಭಿಷೇಕ್ ಶರ್ಮಾ (1) ರನೌಟ್ ಆಗುತ್ತಿದ್ದಂತೆ ಹೈದರಾಬಾದ್ ಟಾಪ್ ಆರ್ಡರ್ ಸರ್ವಪತನವಾಯಿತು. ಹೈದರಾಬಾದ್ ಟಾಪ್ ಆರ್ಡರ್ ಸರ್ವಪತನವಾಗಲು ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೇಗಿ ಮಿಚೆಲ್ ಸ್ಟಾರ್ಕ್ ಪ್ರಮುಖ ಪಾತ್ರವಹಿಸಿದರು.

ಸನ್‌ರೈಸರ್ಸ್ ಹೈದರಾಬಾದ್ ತಂಡ ಮೊದಲ 25 ಎಸೆತಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿದ್ದು ಪಂದ್ಯದ ಆರಂಭದಲ್ಲೇ ಮಹತ್ವದ ತಿರುವು ನೀಡಿತು. ಅಭಿಷೇಕ್ ಶರ್ಮಾ (1), ಟ್ರಾವಿಸ್ ಹೆಡ್ (22), ಇಶಾನ್ ಕಿಶನ್ (2) ಮತ್ತು ನಿತೀಶ್ ಕುಮಾರ್ ರೆಡ್ಡಿ (0) ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲ್ಲು ಸಾಧ್ಯವಾಗಲಿಲ್ಲ. ಇದರಿಂದ ಹೈದರಾಬಾದ್ ತಂಡವು ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಪ್ಲೇಯಿಂಗ್-11

ಸನ್‌ರೈಸರ್ಸ್ ಹೈದರಾಬಾದ್: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ನಿತೀಶ್ ಕುಮಾರ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅನಿಕೇತ್ ವರ್ಮಾ, ಅಭಿನವ್ ಮನೋಹರ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಜೀಶನ್ ಅನ್ಸಾರಿ, ಹರ್ಷಲ್ ಪಟೇಲ್, ಮೊಹಮ್ಮದ್ ಶಮಿ.

ಡೆಲ್ಲಿ ಕ್ಯಾಪಿಟಲ್ಸ್: ಜೇಕ್ ಫ್ರೇಸರ್-ಮೆಕ್‌ಗುರ್ಕ್, ಫಾಫ್ ಡು ಪ್ಲೆಸಿಸ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ಅಕ್ಷರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ವಿಪರಾಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲ್ದೀಪ್ ಯಾದವ್, ಮೋಹಿತ್ ಶರ್ಮಾ, ಮುಖೇಶ್ ಕುಮಾರ್.

Story first published: Sunday, March 30, 2025, 19:35 [IST]
Other articles published on Mar 30, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+