Suryakumar Yadav: ಮುಂಬೈ ಪರ ಈ ಸಾಧನೆ ಮಾಡಿದ ಮೂರನೇ ಬ್ಯಾಟರ್ ಸೂರ್ಯ
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ 2025 ರ ಮೂರನೇ ಪಂದ್ಯ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಹಂಗಾಮಿ ನಾಯಕ ಸೂರ್ಯಕುಮಾರ್ ಯಾದವ್ ವಿಶೇಷ ಸಾಧನೆ ಮಾಡಿದ್ದಾರೆ. ಟಾಸ್ ಗೆದ್ದ ಸಿಎಸ್‌ಕೆ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು.
ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ ಮತ್ತು ರಯಾನ್ ರಿಕಲ್ಟನ್ ಇನ್ನಿಂಗ್ಸ್ ಆರಂಭಿಸಿದರು. ರೋಹಿತ್ ಅವರನ್ನು ಖಲೀಲ್ ಅಹ್ಮದ್ ಶೂನ್ಯಕ್ಕೆ ಔಟ್ ಮಾಡಿದರು. ಇದಾದ ನಂತರ, 13 ರನ್‌ಗಳಿಸಿದ ರಿಕಲ್ಟನ್ ಅವರನ್ನು ಖಲೀಲ್ ಪೆವಿಲಿಯನ್‌ಗೆ ಕಳುಹಿಸಿದರು. ಬಳಿಕ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ನಾಯಕ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ಪರ ದಾಖಲೆ ಸೃಷ್ಟಿಸಿದರು.

ಸಿಎಸ್‌ಕೆ ಎದುರು ಸೂರ್ಯಕುಮಾರ್ ಯಾದವ್ 14 ರನ್ ಗಳಿಸಿದ ತಕ್ಷಣ ಈ ಸಾಧನೆ ಮಾಡಿದರು. ಅವರು ಮುಂಬೈ ಇಂಡಿಯನ್ಸ್ ಪರ 3000 ರನ್‌ಗಳನ್ನು ಪೂರ್ಣಗೊಳಿಸಿದರು. ಈ ಪಂದ್ಯಕ್ಕೂ ಮುನ್ನ ಸೂರ್ಯ ಮುಂಬೈ ಪರ 2986 ರನ್ ಗಳಿಸಿದ್ದರು. ಮುಂಬೈ ಇಂಡಿಯನ್ಸ್ ಪರ ಸೂರ್ಯ 99 ಪಂದ್ಯಗಳಲ್ಲಿ 3015 ರನ್ ಗಳಿಸಿದ್ದಾರೆ. ಸೂರ್ಯ ಮುಂಬೈ ಪರ ಅತಿ ಹೆಚ್ಚು ರನ್ ಗಳಿಸಿದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ಅವರು ರೋಹಿತ್ ಶರ್ಮಾ (5731) ಮತ್ತು ಕೀರನ್ ಪೊಲಾರ್ಡ್ (3915) ನಂತರ ಮೂರನೇ ಸ್ಥಾನದಲ್ಲಿದ್ದಾರೆ.
ಸೂರ್ಯಕುಮಾರ್ ಐಪಿಎಲ್ ವೃತ್ತಿಜೀವನ
ಸೂರ್ಯಕುಮಾರ್ ಯಾದವ್ ಐಪಿಎಲ್ 2012ರಲ್ಲಿ ಮುಂಬೈ ಇಂಡಿಯನ್ಸ್ ಪರ ಪಾದಾರ್ಪಣೆ ಮಾಡಿದರು. ಅವರ ಚೊಚ್ಚಲ ಪಂದ್ಯದಲ್ಲಿ 4 ಎಸೆತಗಳನ್ನು ಆಡಿದರು ಯಾವುದೇ ರನ್ ಗಳಿಸಿರಲಿಲ್ಲ. ಇದಾದ ನಂತರ, ಸೂರ್ಯ 2014, 2015, 2016, 2017 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಐಪಿಎಲ್ ಆಡಿದರು. ಕೆಕೆಆರ್ ಪರ 608 ರನ್ ಕಲೆ ಹಾಕಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications