ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ದಾಖಲೆ ಸೃಷ್ಟಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಎಲೈಟ್ ಕ್ಲಬ್ ಸೇರಿದ್ದಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಂತರ ಟಿ20 ಕ್ರಿಕೆಟ್‌ನಲ್ಲಿ 350 ಸಿಕ್ಸರ್‌ಗಳನ್ನು ಗಳಿಸಿದ ಏಕೈಕ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ಮಾಡಿದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ 350 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಸೂರ್ಯಕುಮಾರ್ ಯಾದವ್ ಅವರು ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಎಲೈಟ್ ಕ್ಲಬ್ ಸೇರಿದ್ದಾರೆ. ಐಪಿಎಲ್ 100 ನೇ ಪಂದ್ಯವನ್ನು ಆಡುತ್ತಿರುವ ಸೂರ್ಯಕುಮಾರ್ ಯಾದವ್ ಈ ಸಾಧನೆ ಮಾಡಿರುವುದು ವಿಶೇಷವಾಗಿದೆ.

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೂರ್ಯಕುಮಾರ್ ಯಾದವ್ ಕೇವಲ ಸಿಕ್ಸರ್ ಬಾರಿಸುವ ಮೂಲಕ ಈ ಮೈಲಿಗಲ್ಲು ಸಾಧಿಸಿದ್ದಾರೆ. ಅವರು ಲೆಗ್-ಸ್ಪಿನ್ನರ್ ರವಿ ಬಿಷ್ಣೋಯ್ ಎಸೆತದಲ್ಲಿ ಸಿಕ್ಸರ್ ಬಾರಿಸಿದರು. ಭಾರತೀಯ ಟಿ20 ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಪ್ರಸ್ತುತ 526 ಸಿಕ್ಸರ್‌ಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ 420 ಸಿಕ್ಸರ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
ವಿಶ್ವ ಟಿ20 ಕ್ರಿಕೆಟ್‌ನಲ್ಲಿ ವೆಸ್ಟ್ ಇಂಡೀಸ್‌ನ ದಿಗ್ಗಜ ಮಾಜಿ ಬ್ಯಾಟರ್ ಕ್ರಿಸ್ ಗೇಲ್ 1056 ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವ ದಾಖಲೆಯನ್ನು ಹೊಂದಿದ್ದಾರೆ. ಅವರು ಇಲ್ಲಿಯವರೆಗೆ 1000 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಹೊಡೆದ ಏಕೈಕ ಆಟಗಾರ.