ಐಪಿಎಲ್ 2025 ರಲ್ಲಿ ಇಂದು, ಶುಕ್ರವಾರ ನಡೆಯಲಿರುವ ಬ್ಲಾಕ್ ಬಸ್ಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಸೆಣಸಾಡಲಿವೆ. ಒಂದು ಕಡೆ 5 ಬಾರಿ ಚಾಂಪಿಯನ್ ಸಿಎಸ್‌ಕೆ ತಂಡದವಿದ್ದರೆ, ಮತ್ತೊಂದೆಡೆ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಎದುರು ನೋಡುತ್ತಿರುವ ಆರ್‍ಸಿಬಿ ತಂಡವಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯದ ಬಗ್ಗೆ ಕ್ರಿಕೆಟ್ ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಚೆಪಾಕ್ ಮೈದಾನ ಸಿಎಸ್‌ಕೆ ತಂಡದ ಭದ್ರಕೋಟೆಯಾಗಿದೆ. ಈ ಕೋಟೆಯಲ್ಲಿ ಆರ್‍ಸಿಬಿ 2008ರ ನಂತರ ಒಂದು ಪಂದ್ಯವನ್ನು ಗೆದ್ದಿಲ್ಲ. ಈಗ ಇದೇ ಚೆಪಾಕ್ ಭದ್ರಕೋಟೆಯಲ್ಲಿ ಸಿಎಸ್‌ಕೆ ಬೇಟೆಯಾಡಲು ರಜತ್ ಪಾಟಿದಾರ್ ನೇತೃತ್ವದ ಆರ್‍ಸಿಬಿ ಸಜ್ಜಾಗಿದೆ.
ಚೆಪಾಕ್ ಮೈದಾನದಲ್ಲಿ ಸಿಎಸ್‌ಕೆ ತಂಡವನ್ನು ಆರ್‍ಸಿಬಿ ಸೋಲಿಸುವುದು ಸುಲಭದ ಮಾತಲ್ಲ. ಐಪಿಎಲ್‌ನಲ್ಲಿ ಸಿಎಸ್‌ಕೆ ಮತ್ತು ಆರ್‍ಸಿಬಿ ಎರಡು ತಂಡಗಳು ಹೆಚ್ಚು ಅಭಿಮಾನಿಗಳ ಬಳಗವನ್ನು ಹೊಂದಿವೆ. ಆರ್‍ಸಿಬಿ ಮತ್ತು ಸಿಎಸ್‌ಕೆ ನಡುವಿನ ಪಂದ್ಯ ಪ್ರತಿ ಬಾರಿಯೂ ರೋಚಕವಾಗಿತ್ತದೆ. ಆದರೆ ಸಿಎಸ್‌ಕೆ ಎದುರು ಆರ್‍ಸಿಬಿ ತಂಡಕ್ಕೆ ಮುಜಗರ ಉಂಟು ಮಾಡಿದ ಮೂರು ಸೋಲುಗಳಿವೆ. ಈ ಸೋಲಿಗಳ ಬಗ್ಗೆ ಇಲ್ಲಿದೆ ಮಾಹಿತಿ.

ಐಪಿಎಲ್ ಇತಿಹಾಸದಲ್ಲಿ 2011 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಫೈನಲ್ ಪಂದ್ಯ ನಡೆದಿತ್ತು. ಈ ಫೈನಲ್ ಪಂದ್ಯವೂ ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದಿತ್ತು. ಆರ್‍ಸಿಬಿ ತಂಡವನ್ನು ಸಿಎಸ್‌ಕೆ ಭಾರಿ ಅಂತರದಿಂದ ಸೋಲಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್‌ಕೆ ನಿಗದಿತ 20 ಓವರ್‍ಗಳಲ್ಲಿ 5 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಆರ್‍ಸಿಬಿ 20 ಓವರ್‍ಗಳಲ್ಲಿ 8 ವಿಕೆಟ್ ಕಳೆದುಕೊಂಡು 147 ರನ್ ಗಳಿಗೆ ಇನ್ನಿಂಗ್ಸ್ ಮುಗಿಸಿತು. ಈ ಮೂಲಕ ಸಿಎಸ್‌ಕೆ 58 ರನ್‌ಗಳಿಂದ ಗೆದ್ದು ಪ್ರಶಸ್ತಿ ಎತ್ತಿ ಹಿಡಿದಿತ್ತು.
ಐಪಿಎಲ್ 2015 ರಲ್ಲಿಯೂ ಚೆಪಾಕ್ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಚೆನ್ನೈ ಸೂಪರ್ ಕಿಂಗ್ಸ್ ಮಣಿಸಿತ್ತು. ಈ ಪಂದ್ಯವನ್ನು ಚೆನ್ನೈ 24 ರನ್‌ಗಳಿಂದ ಗೆದ್ದು ಬೀಗಿತ್ತು. ಆದರೆ, ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಕೇವಲ148 ರನ್ ಗಳಿಸಿದ್ದರೂ ಸಹ, ದೊಡ್ಡ ಅಂತರದಿಂದ ಗೆದ್ದಿತ್ತು. ಚೆನ್ನೈ 20 ಓವರ್‍ಗಳಲ್ಲಿ 9 ವಿಕೆಟ್ ಕಳೆದುಕೊಂಡು 148 ರನ್ ಗಳಿಸಿತ್ತು. ಆದರೆ ಅರ್‍ಸಿಬಿ 124 ರನ್ ಗಳಿಸಲಷ್ಟೇ ಶಕ್ತವಾಗಿತ್ತು.
ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಹಲವು ಪಂದ್ಯಗಳು ನಡೆದಿವೆ. ಐಪಿಎಲ್ 2019 ರಲ್ಲಿ ಚೆಪಾಲ್ ಮೈದಾನದಲ್ಲಿ ಸಿಎಸ್‌ಕೆ ತಂಡವನ್ನು ಆರ್‍ಸಿಬಿ ಎದುರಿಸಿತ್ತು. ಈ ಪಂದ್ಯದಲ್ಲಿ ಸಿಎಸ್‌ಕೆ ಅದ್ಭುತ ಪ್ರದರ್ಶನ ನೀಡಿತ್ತು. ಆರ್‍ಸಿಬಿ ತಂಡವನ್ನು ಕೇವಲ 70 ರನ್‌ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಗುತ್ತು. ಸುಲಭ ಗುರಿ ಬೆನ್ನಟ್ಟಿದ ಸಿಎಸ್‌ಕೆ 3 ವಿಕೆಟ್ ನಷ್ಟಕ್ಕೆ ಗೆಲುವಿನ ನಗೆ ಬೀರಿತ್ತು.