IPL 2025 KKR: ಅದ್ಭುತ ಫಾರ್ಮ್‌ನಲ್ಲಿರುವ 3 ಕೆಕೆಆರ್ ಆಟಗಾರರು ಮಿಂಚಲು ರೆಡಿ
ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸಂಭ್ರಮ ಮುಗಿದ ನಂತರವೂ ಕ್ರಿಕೆಟ್‌ನ ಸಂಭ್ರಮ ಮುಂದುವರಿಯಲಿದೆ. ಕೆಲವೇ ದಿನಗಳಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಹಬ್ಬ ಭಾರತದಲ್ಲಿ ಶುರುವಾಗಲಿದೆ. ಈ ಮೆಗಾ ಟಿ20 ಲೀಗ್ ಮಾರ್ಚ್ 22 ರಿಂದ ಶುರುವಾಗಲಿದ್ದು, ಎಲ್ಲಾ ತಂಡಗಳು ಸಿದ್ಧವಾಗಿದವೆ. ಐಪಿಎಲ್ 2025ರ ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಮುಖಾಮುಖಿಯಾಗಲಿವೆ.
ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಈ ಬಾರಿ ಹಲವು ಹೊಸ ಆಟಗಾರರೊಂದಿಗೆ ಆಡಲಿದೆ. ಅನುಭವಿ ಅಜಿಂಕ್ಯ ರಹಾನೆ ತಂಡದ ನಾಯಕತ್ವ ವಹಿಸಿಕೊಂಡಿದ್ದು, ಕೆಲವು ಹಳೆಯ ಆಟಗಾರರ ಬೆಂಬಲದೊಂದಿಗೆ ಮತ್ತೊಮ್ಮೆ ಚಾಂಪಿಯನ್ ಆಗುವ ಕನಸು ಕಾಣುತ್ತಿದೆ. ಕೆಕೆಆರ್ ತಂಡವನ್ನು ಚಾಂಪಿಯನ್ ಮಾಡಲು ಮೂವರು ಆಟಗಾರರು ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಈ ಆಟಗಾರರ ಬಗ್ಗೆ ಇಲ್ಲಿದೆ.

ವರುಣ್ ಚಕ್ರವರ್ತಿ
ಆರ್‌ಸಿಬಿ ವಿರುದ್ಧ ಕೆಕೆಆರ್ ಉದ್ಘಾಟನಾ ಪಂದ್ಯವನ್ನು ಆಡಲು ಸಜ್ಜಾಗಿದೆ. ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಇತ್ತೀಚೆಗೆ ಟೀಮ್ ಇಂಡಿಯಾ ಪರ ಮಿಂಚುತ್ತಿದ್ದಾರೆ. ಸತತ ಪಂದ್ಯಗಳನ್ನು ಆಡುತ್ತಿರುವ ವರುಣ್ ವಿಕೆಟ್‌ಗಳನ್ನು ಉರುಳಿಸುತ್ತಿದ್ದಾರೆ. ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ವಿರುದ್ಧ ಸರಣಿಗಳಲ್ಲಿ ವರುಣ್ ಚಕ್ರವರ್ತಿ ಸ್ಥಿರ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ಇತ್ತೀಚೆಗೆ ಚಾಂಪಿಯನ್ಸ್ ಟ್ರೋಫಿ 2025ರಲ್ಲಿಯೂ ವರುಣ್ 9 ವಿಕೆಟ್‌ಗಳನ್ನು ಪಡೆದಿದ್ದರು.
ಅಜಿಂಕ್ಯಾ ರಹಾನೆ
ಟೀಮ್ ಇಂಡಿಯಾ ಅನುಭವಿ ಬ್ಯಾಟರ್ ಅಜಿಂಕ್ಯ ರಹಾನೆ ಅವರಿಗೆ ಐಪಿಎಲ್ 2025ರಲ್ಲಿ ಕೆಕೆಆರ್ ತಂಡದ ನಾಯಕತ್ವದ ಜವಾಬ್ದಾರಿಯನ್ನು ನೀಡಲಾಗಿದೆ. ರಹಾನೆ ನಾಯಕನಾಗಿ ಆಡಿ ವರ್ಷಗಳೇ ಕಳೆದಿವೆ. ಇದೀಗ ಮತ್ತೊಮ್ಮೆ ರಹಾನೆ ನಾಯಕನಾಗಿ ಐಪಿಎಲ್ 2025ರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ರಹಾನೆ ದೇಶೀಯ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಶ್ರೇಯಸ್ ಅಯ್ಯರ್ ನಾಯಕ್ವದಲ್ಲಿ ಸೈಯದ್ ಮುಷ್ಯಾಕ್ ಆಲಿ ಟ್ರೋಫಿಯಲ್ಲಿ ಅವರು ಮುಂಬೈ ತಂಡದ ಪರ ಸ್ಥಿರ ಪ್ರದರ್ಶನ ನೀಡಿದ್ದರು. ಆಡಿದ 9 ಪಂದ್ಯಗಳ 8 ಇನ್ನಿಂಗ್ಸ್‌ಗಳಲ್ಲಿ 469 ರನ್ ಕಲೆ ಹಾಕಿದ್ದರು.
ಹರ್ಷಿತ್ ರಾಣಾ
ಭಾರತ ತಂಡದ ಯುವ ವೇಗದ ಬೌಲರ್ ಹರ್ಷಿತ್ ರಾಣಾ ಮಿಂಚುತ್ತಿದ್ದಾರೆ. ಐಪಿಎಲ್‌ನಲ್ಲಿ ಕೆಕೆಆರ್ ಪರ ತಮ್ಮದೇ ಆದ ಛಾಪು ಮೂಡಿಸಿದ ಹರ್ಷಿತ್ ರಾಣಾ ಕಡಿಮೆ ಸಮಯದಲ್ಲಿ ಟೀಮ್ ಇಂಡಿಯಾ ಸೇರಿದರು. ಐಪಿಎಲ್ 2024ರಲ್ಲಿ ಕೆಕೆಆರ್ ಪರ ಹಲವು ವಿಕೆಟ್‌ಗಳನ್ನು ಕಬಳಿಸಿದ್ದರು. ಇದಾದ ಬಳಿಕ ಟೀಮ್ ಇಂಡಿಯಾದಲ್ಲಿ ಅವರಿಗೆ ಸ್ಥಾನ ಸಿಕ್ಕಿತು. ಇತ್ತೀಚೆಗೆ ಅವರು ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲಿ ವಿಕೆಟ್ ಪಡೆದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅವರ ಫಾರ್ಮ್ ಐಪಿಎಲ್ 2025ರಲ್ಲಿ ಕೆಕೆಆರ್ ತಂಡಕ್ಕೆ ನೆರವಾಗಬಹುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications