ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ವಿಶ್ವದ ಅತ್ಯಂತ ರೋಮಾಂಚಕಾರಿ ಮತ್ತು ಜನಪ್ರಿಯ ಟಿ20 ಕ್ರಿಕೆಟ್ ಲೀಗ್‌ಗಳಲ್ಲಿ ಒಂದಾಗಿದೆ. ಐಪಿಎಲ್‌ನಲ್ಲಿ ಪ್ರತಿ ವರ್ಷವೂ ಅನೇಕ ರೋಚಕ ಪಂದ್ಯಗಳು ಮತ್ತು ದಾಖಲೆಗಳು ಸೃಷ್ಟಿಯಾಗುತ್ತಿರುತ್ತವೆ. ಐಪಿಎಲ್‌ನಲ್ಲಿ ಅತ್ಯಂತ ವೇಗದ ಶತಕವು ಪ್ರತಿಯೊಬ್ಬ ಬ್ಯಾಟರ್ ಸಾಧಿಸಲು ಬಯಸುವ ದಾಖಲೆಯಾಗಿದೆ. ಮಾರ್ಚ್ 22 ರಿಂದ ಪ್ರಾರಂಭವಾಗುವ ಐಪಿಎಲ್ 2025ರ ಸೀಸನ್‌ಗೂ ಮೊದಲು ಇಲ್ಲಿವರೆಗೆ ಲೀಗ್‌ನಲ್ಲಿ ಅತ್ಯಂತ ವೇಗದ ಶತಕ ಗಳಿಸಿದ ಟಾಪ್ -5 ಬ್ಯಾಟರ್ಸ್‌ಗಳಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕ ಸಿಡಿಸಿರುವವರ ಪಟ್ಟಿಯಲ್ಲಿ ನಾಲ್ವರು ವಿದೇಶಿಯರಿದ್ದರೆ, ಒಬ್ಬ ಭಾರತೀಯ ಹೆಸರೂ ಇದೆ. ಈ ಟಾಪ್-5 ಬ್ಯಾಟರ್ಸ್ ಯಾರು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ವೆಸ್ಟ್ ಇಂಡೀಸ್‌ನ ಮಾಜಿ ಸ್ಫೋಟಕ ಬ್ಯಾಟರ್ ಕ್ರಿಸ್ ಗೇಲ್ ಐಪಿಎಲ್‌ನಲ್ಲಿ ಅತ್ಯಂತ ವೇಗದ ಶತಕ ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ. ಐಪಿಎಲ್ 2013 ರಲ್ಲಿ ಪುಣೆ ವಾರಿಯರ್ಸ್ ಇಂಡಿಯಾ ವಿರುದ್ಧ ಕೇವಲ 30 ಎಸೆತಗಳಲ್ಲಿ ಗೇಲ್ ಶತಕ ಪೂರೈಸಿದ್ದರು. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪರ ಗೇಲ್ ಒಟ್ಟು 66 ಎಸೆತಗಳಲ್ಲಿ 17 ಸಿಕ್ಸರ್‌ಗಳು ಮತ್ತು 13 ಬೌಂಡರಿಗಳ ನೆರವಿನಿಂದ ಅಜೇಯ 175 ರನ್ ಗಳಿಸಿದ್ದರು. ಇದು ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ವೈಯಕ್ತಿಕ ಸ್ಕೋರ್ ಆಗಿದೆ.
ಭಾರತ ತಂಡದ ಮಾಜಿ ಆಲ್‌ರೌಂಡರ್ ಯೂಸುಫ್ ಪಠಾಣ್ ಐಪಿಎಲ್‌ನಲ್ಲಿ ಅತಿ ವೇಗದ ಶತಕ ಬಾರಿಸಿದ ಎರಡನೇ ಬ್ಯಾಟರ್. ಐಪಿಎಲ್ 2010 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಯೂಸುಫ್ ಕೇವಲ 37 ಎಸೆತಗಳಲ್ಲಿ ಶತಕ ಗಳಿಸಿದರು. ರಾಜಸ್ಥಾನ ರಾಯಲ್ಸ್ ಪರ ಆಡಿದ ಪಠಾಣ್ 37 ಎಸೆತಗಳಲ್ಲಿ 9 ಬೌಂಡರಿ ಮತ್ತು 8 ಸಿಕ್ಸರ್‌ಗಳ ನೆರವಿನಿಂದ 100 ರನ್ ಗಳಿಸಿದ್ದರು. ಪಠಾಣ್ ಐಪಿಎಲ್‌ನಲ್ಲಿ ಅತಿ ವೇಗದ ಶತಕ ಬಾರಿಸಿದ ಏಕೈಕ ಭಾರತೀಯ ಬ್ಯಾಟರ್ ಆಗಿ ಉಳಿದಿದ್ದಾರೆ.
ದಕ್ಷಿಣ ಆಫ್ರಿಕಾದ ಸ್ಪೋಟಕ ಬ್ಯಾಟರ್ ಡೇವಿಡ್ ಮಿಲ್ಲರ್ ಐಪಿಎಲ್‌ನಲ್ಲಿ ಅತ್ಯಂತ ವೇಗದ ಶತಕ ಬಾರಿಸಿದ ಮೂರನೇ ಬ್ಯಾಟರ್ ಆಗಿದ್ದಾರೆ. ಐಪಿಎಲ್ 2013 ರಲ್ಲಿ ಆರ್‌ಸಿಬಿ ವಿರುದ್ಧ ಮಿಲ್ಲರ್ 38 ಎಸೆತಗಳಲ್ಲಿ ಶತಕ ಗಳಿಸಿದರು. ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಮಿಲ್ಲರ್ 38 ಎಸೆತಗಳಲ್ಲಿ 8 ಬೌಂಡರಿ ಮತ್ತು 7 ಸಿಕ್ಸರ್‌ಗಳ ಮೂಲಕ ಅಜೇಯ 101 ರನ್ ಗಳಿಸಿದ್ದರು.
ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್ ಟ್ರಾವಿಸ್ ಹೆಡ್ ಐಪಿಎಲ್‌ನಲ್ಲಿ ಅತಿ ವೇಗದ ಶತಕ ಬಾರಿಸಿದ ನಾಲ್ಕನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಐಪಿಎಲ್ 2024 ರಲ್ಲಿ ಆರ್‌ಸಿಬಿ ವಿರುದ್ಧ 39 ಎಸೆತಗಳಲ್ಲಿ ಹೆಡ್ ಶತಕ ಗಳಿಸಿದರು. ಸನ್‌ರೈಸರ್ಸ್ ಹೈದರಾಬಾದ್ ಪರ ಈ ಪಂದ್ಯದಲ್ಲಿ ಹೆಡ್ 41 ಎಸೆತಗಳಲ್ಲಿ 9 ಬೌಂಡರಿ ಮತ್ತು 8 ಸಿಕ್ಸರ್‌ಗಳು ನೆರವಿನಿಂದ 102 ರನ್ ಗಳಿಸಿದ್ದರು.
ಇಂಗ್ಲೆಂಡ್‌ನ ಯುವ ಬ್ಯಾಟರ್ ವಿಲ್ ಜ್ಯಾಕ್ಸ್ ಐಪಿಎಲ್‌ನಲ್ಲಿ ಅತ್ಯಂತ ವೇಗದ ಶತಕ ಬಾರಿಸಿದ ಐದನೇ ಬ್ಯಾಟರ್ ಆಗಿದ್ದಾರೆ. ಐಪಿಎಲ್ 2024 ರಲ್ಲಿ ಆರ್‌ಸಿಬಿ ಪರ ಆಡುವಾಗ ಅವರು ಗುಜರಾತ್ ಟೈಟಾನ್ಸ್ ವಿರುದ್ಧ 41 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಈ ಪಂದ್ಯದಲ್ಲಿ ಜ್ಯಾಕ್ಸ್ ಕೇವಲ 41 ಎಸೆತಗಳಲ್ಲಿ 5 ಬೌಂಡರಿ ಮತ್ತು 10 ಸಿಕ್ಸರ್‌ಗಳು ಸಹಾಯದಿಂದ ಅಜೇಯ 100 ರನ್ ಗಳಿಸಿದ್ದರು.
ಇವರಲ್ಲದೆ, ಇತರ ಅನೇಕ ಬ್ಯಾಟರ್‌ಗಳು ಐಪಿಎಲ್‌ನಲ್ಲಿ ವೇಗದ ಶತಕಗಳನ್ನು ಗಳಿಸಿದ್ದಾರೆ. ಎಬಿ ಡಿವಿಲಿಯರ್ಸ್, ಡೇವಿಡ್ ವಾರ್ನರ್ ಮತ್ತು ಸನತ್ ಜಯಸೂರ್ಯ ಅವರಂತಹ ಆಟಗಾರರು ಐಪಿಎಲ್‌ನಲ್ಲಿ 45 ಕ್ಕಿಂತ ಕಡಿಮೆ ಎಸೆತಗಳಲ್ಲಿ ಶತಕಗಳನ್ನು ಪೂರೈಸಿದ್ದಾರೆ.
ಪ್ರತಿ ವರ್ಷ ಐಪಿಎಲ್‌ನಲ್ಲಿ ಹೊಸ ಯುವ ಬ್ಯಾಟರ್ಸ್ ಹೊರಹೊಮ್ಮುತ್ತಾರೆ. ಭವಿಷ್ಯದಲ್ಲಿ ಕ್ರಿಸ್ ಗೇಲ್ ಅವರ 30 ಎಸೆತಗಳಲ್ಲಿ ಶತಕ ಗಳಿಸಿದ ದಾಖಲೆಯನ್ನು ಯಾವ ಬ್ಯಾಟರ್ಸ್ ಮುರಿಯುತ್ತಾರಾ? ಎಂಬುದನ್ನು ಕಾದು ನೋಡಬೇಕಾಗಿದೆ.