IPL 2025: ಐಪಿಎಲ್ ಟೂರ್ನಿ ಆರಂಭಕ್ಕೆ ದಿನಾಂಕ ಪ್ರಕಟ; ಬಿಸಿಸಿಐ ಉಪಾಧ್ಯಕ್ಷ ಘೋಷಣೆ
ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ದಿನಾಂಕಗಳನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದೆ. ಈ ಬಾರಿಯ ಟೂರ್ನಿಯು ಮಾರ್ಚ್ 21 ರಿಂದ ಆರಂಭವಾಗಲಿದ್ದು, ಮೇ 25ರವರೆಗೆ ನಡೆಯಲಿದೆ. ಈ ಕುರಿತು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಖಚಿತಪಡಿಸಿದ್ದಾರೆ. ಮುಂಬೈನಲ್ಲಿ ನಡೆದ ಬಿಸಿಸಿಐನ ವಿಶೇಷ ವಾರ್ಷಿಕ ಸಭೆ (ಎಸ್‌ಜಿಎಂ) ನಂತರ ರಾಜೀವ್ ಶುಕ್ಲಾ ಮಾಹಿತಿ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ರಾಜೀವ್ ಶುಕ್ಲಾ, ಐಪಿಎಲ್ 2025ರ ಉದ್ಘಾಟನಾ ಪಂದ್ಯದ ದಿನಾಂಕದ ಜೊತೆಗೆ ಮೇ 25 ರಂದು ನಡೆಯಲಿರುವ ಫೈನಲ್ ದಿನಾಂಕವನ್ನು ಸಹ ಅಂತಿಮಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಐಪಿಎಲ್ 2024ರ ಟೂರ್ನಿಯ ಮೊದಲ ಪಂದ್ಯ ಮಾರ್ಚ್ 22 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡಗಳು ಮುಖಾಮುಖಿಯಾಗಿದ್ದವು. ಮೇ 26 ರಂದು ನಡೆದ ಫೈನಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿ ಕೋಲ್ಕತ್ತಾ ನೈಟ್ ರೈಡರ್ಸ್ ಕಪ್ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.

ಇಂದಿನ ಬಿಸಿಸಿಐ ಸಭೆಯಲ್ಲಿ ನೂತನ ಖಜಾಂಚಿ ಹಾಗೂ ಕಾರ್ಯದರ್ಶಿ ನೇಮಕಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಹಾಗೂ ನೂತನ ಖಜಾಂಚಿಯಾಗಿ ಪ್ರಭತೇಜ್ ಸಿಂಗ್ ಭಾಟಿಯಾ ಆಯ್ಕೆಯಾಗಿದ್ದಾರೆ. ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್)ನ ಪಂದ್ಯಗಳು ನಡೆಯುವ ಸ್ಥಳದ ಬಗ್ಗೆ ಬಹುತೇಕ ಸ್ಪಷ್ಟತೆ ಇದೆ. ಇದಲ್ಲದೇ ಒಂದು ವರ್ಷಕ್ಕೆ ನೂತನ ಆಯುಕ್ತರ ನೇಮಕವನ್ನು ಐಪಿಎಲ್ ಪ್ರಕಟಿಸಿದೆ. ಜನವರಿ 18-19 ರಂದು ನಡೆಯಲಿರುವ ಮುಂದಿನ ಸಭೆಯು ಚಾಂಪಿಯನ್ಸ್ ಟ್ರೋಫಿಗೆ ಅಂತಿಮ ತಂಡವನ್ನು ಆಯ್ಕೆ ಮಾಡುವ ಬಗ್ಗೆ ಕೇಂದ್ರೀಕರಿಸಲಿದೆ.
ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಎರಡು ದಿನಗಳ ಕಾಲ ನಡೆದ ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ಒಟ್ಟು 182 ಆಟಗಾರರು 639.15 ಕೋಟಿ ರೂ.ಗೆ ಮಾರಾಟವಾದರು. 10 ತಂಡಗಳಲ್ಲಿ ಹೆಚ್ಚಿನವರು ತಮ್ಮ ಪ್ರಮುಖ ಆಟಗಾರರನ್ನು ಉಳಿಸಿಕೊಂಡ ನಂತರ ತಮ್ಮ ತಂಡವನ್ನು ಬಲಪಡಿಸುವತ್ತ ಗಮನಹರಿಸಿದ್ದರು. ಭಾರತದ ವಿಕೆಟ್‌ಕೀಪರ್-ಬ್ಯಾಟರ್ ರಿಷಬ್ ಪಂತ್ 27 ಕೋಟಿ ರೂ.ಗೆ ಬಿಡ್ ಆಗುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡರು. ನಂತರ ಶ್ರೇಯಸ್ ಅಯ್ಯರ್ (ರೂ. 26.75 ಕೋಟಿ) ಮತ್ತು ವೆಂಕಟೇಶ್ ಅಯ್ಯರ್ (ರೂ. 23.75 ಕೋಟಿ). ಈ ಪಟ್ಟಿಯಲ್ಲಿ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನವನ್ನು ಪಡೆದಿದ್ದಾರೆ.
ಐಪಿಎಲ್‌ನಲ್ಲಿ ಅಬ್ಬರಿಸಿದ ಡೇವಿಡ್ ವಾರ್ನರ್, ಪೃಥ್ವಿ ಶಾ ಮತ್ತು ಶಾರ್ದೂಲ್ ಠಾಕೂರ್ ಅವರಂತಹ ಸ್ಟಾರ್ ಆಟಗಾರರನ್ನು ಯಾವುದೇ ಫ್ರಾಂಚೈಸಿಗಳು ಬಿಡ್ ಮಾಡಲಿಲ್ಲ. ಹೀಗಾಗಿ ಈ ಸ್ಟಾರ್ ಆಟಗಾರರು ಐಪಿಎಲ್ 2025ರ ಟೂರ್ನಿಯಿಂದ ಹೊರಗುಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications