For Quick Alerts
ALLOW NOTIFICATIONS  
For Daily Alerts
 

ಮೈದಾನದಲ್ಲಿ ವಿರಾಟ್ ಕೊಹ್ಲಿ-ಕೆಎಲ್ ರಾಹುಲ್ ನಡುವೆ ವಾಗ್ವಾದ; ವಿಡಿಯೋ ವೈರಲ್

ಐಪಿಎಲ್ 2025 ರ 46ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ತೀವ್ರ ಪೈಪೋಟಿ ನಡೆಯಿತು. ಉಭಯ ತಂಡಗಳು ಗೆಲುವಿಗಾಗಿ ತಮ್ಮ ಅತ್ಯುತ್ತಮ ಪ್ರಯತ್ನ ನಡೆಸಿದವು. ಆದರೆ, ಈ ಪಂದ್ಯದಲ್ಲಿ ಡೆಲ್ಲಿ ನೀಡಿದ163 ರನ್‌ಗಳ ಗೆಲುವಿನ ಗುರಿಯನ್ನು ಬೆನ್ನಟ್ಟ ಆರ್‍‌ಸಿಬಿ ಕೇವಲ 18.3 ಓವರ್‍‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು ಗೆಲುವು ಸಾಧಿಸಿತು. ಈ ಚೇಸಿಂಗ್ ಸಮಯದಲ್ಲಿ ಯಾವುದೇ ಭಾರತೀಯ ಕ್ರಿಕೆಟ್ ಅಭಿಮಾನಿ ನಿರೀಕ್ಷಿಸದ ಘಟನೆವೊಂದು ಜರುಗಿತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿಕೆಟ್‌ಕೀಪರ್ ಕೆಎಲ್ ರಾಹುಲ್ ಪರಸ್ಪರ ಜಗಳವಾಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

IPL 2025 Virat Kohli-KL Rahul had an argument on the field

ಈ ಘಟನೆ ಆರ್‍‌ಸಿಬಿ ಇನ್ನಿಂಗ್ಸ್‌ನ ಆರಂಭಿಕ ಓವರ್‍‌ಗಳಲ್ಲಿ ಕಂಡು ಬಂದಿತು. ವಿಡಿಯೋ ನೋಡಿದಾಗ, ರಾಹುಲ್ ಅವರಿಗೆ ಕೊಹ್ಲಿ ಏನೋ ಹೇಳುವ ಮೂಲಕ ವಾಗ್ವಾದ ಶುರು ಮಾಡಿದಂತೆ ಕಾಣಿಸುತ್ತದೆ. ಇದಕ್ಕೆ ರಾಹುಲ್ ಕೂಡ ಪ್ರತಿಕ್ರಿಯಿಸಲು ಹಿಂಜರಿಯಲಿಲ್ಲ. ಇಬ್ಬರು ಆಟಗಾರರ ನಡುವೆ ಯಾವ ವಿಷಯದ ಬಗ್ಗೆ ಈ ಚರ್ಚೆ ನಡೆಯೊತು ಎಂಬುದರ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಬಹಿರಂಗವಾಗಿಲ್ಲ. ಅದರೆ ಇಬ್ಬರು ಸ್ಟಾರ್ ಅಟಗಾರರ ನಡುವಿನ ಇಂತಹ ದೃಶ್ಯವನ್ನು ನೋಡಿದ ನಂತರ ಅಭಿಮಾನಿಗಳು ಬೇಸರಗೊಂಡಿದ್ದಾರೆ.

ಭಾರತ ತಂಡ ಮಾಜಿ ಸ್ಪಿನ್ನರ್ ಪಿಯೂಷ್ ಚಾವ್ಲಾ ಅವರು ಇಬ್ಬರು ಸ್ಟಾರ್ ಆಟಗಾರರ ನಡುವೆ ಈ ಘಟನೆ ಏಕೆ ನಡೆಯಿತು ಎಂಬುದನ್ನು ವಿವರಿಸಿದ್ದಾರೆ. ಪಿಯೂಷ್ ಚಾವ್ಲಾ ಅವರ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡಿಂಗ್ ಸೆಟ್ ಮಾಡಲು ಸಾಕಷ್ಟು ಸಮಯ ತೆಗೆದುಕೊಂಡಿದ್ದಕ್ಕೆ ವಿರಾಟ್ ಕೊಹ್ಲಿ ಅಸಮಾಧಾನಗೊಂಡಿದ್ದರು. ಅವರು ಅದರ ಬಗ್ಗೆ ಕೆಎಲ್ ರಾಹುಲ್ ಅವರಿಗೆ ದೂರು ನೀಡಿದ್ದರು. ಅದೇ ಸಮಯದಲ್ಲಿ, ವಿರಾಟ್ ಕೊಹ್ಲಿ ಮಾತಿನಿಂದ ಕೆಎಲ್ ರಾಹುಲ್ ಕೂಡ ಕೋಪಗೊಂಡರು. ಹೀಗಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ ಎಂದು ತಿಳಿಸಿದ್ದಾರೆ.

ಭಾನುವಾರ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನೂ 9 ಎಸೆತಗಳು ಬಾಕಿ ಇರುವಂತೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತು ಕೃನಾಲ್ ಪಾಂಡ್ಯ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಇಬ್ಬರೂ ಅರ್ಧಶತಕಗಳನ್ನು ಗಳಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಈ ಗೆಲುವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 162 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು 18.3 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 165 ರನ್ ಗಳಿಸಿ ಅದ್ಭುತ ಜಯ ಗಳಿಸಿತು.

Story first published: Monday, April 28, 2025, 10:10 [IST]
Other articles published on Apr 28, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+