ಐಸಿಸಿ 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಪ್ರಶಸ್ತಿ ಗೆದ್ದ ನಂತರ, ಎಲ್ಲಾ ಟೀಮ್ ಇಂಡಿಯಾ ಆಟಗಾರರು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕಡೆ ಮುಖ ಮಾಡಿದ್ದಾರೆ. ಐಪಿಎಲ್ 2025ರ ಟೂರ್ನಿಗೆ ಭರ್ಜರಿ ನಡೆಸುತ್ತಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನೆಟ್ ಸೆಷನ್‌ನಲ್ಲಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಕೂಡ ಅಭ್ಯಾಸ ಮಾಡುತ್ತಿರುವುದು ಕಂಡುಬಂದಿದೆ. ನೆಟ್ಸ್‌ನಲ್ಲಿ ಅದ್ಭುತ ಬ್ಯಾಟಿಂಗ್ ಮಾಡುವಾಗ ಕೊಹ್ಲಿ ಬೆವರು ಸುರಿಸಿದ್ದಾರೆ.
ವಿರಾಟ್ ಕೊಹ್ಲಿ ಆರ್‌ಸಿಬಿ ಜೆರ್ಸಿಯಲ್ಲಿರುವ ಅಭ್ಯಾಸ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ವಿರಾಟ್ ಒಂದರ ನಂತರ ಒಂದರಂತೆ ಸಿಕ್ಸರ್ ಬಾರಿಸುತ್ತಿರುವುದು ವಿಡಿಯೋದಲ್ಲಿ ಸೆರೆ ಹಿಡಿಯಲಾಗಿದೆ.

ಚಾಂಪಿಯನ್ಸ್ ಟ್ರೋಫಿಗೂ ಮುನ್ನ ವಿರಾಟ್ ಕೊಹ್ಲಿ ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದರು. ಆದರೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕೊಹ್ಲಿ ಅದ್ಭುತ ಪುನರಾಗಮನ ಮಾಡಿದರು. ಇದಾದ ನಂತರ, ಅವರು ಚಾಂಪಿಯನ್ಸ್ ಟ್ರೋಫಿಯಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದರು. ಪಾಕಿಸ್ತಾನ ವಿರುದ್ಧ ಕೊಹ್ಲಿ ಭರ್ಜರಿ ಶತಕ ಸಿಡಿಸಿದರು. ನಂತರ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಕೊಹ್ಲಿ ಬಿಗ್ ಇನ್ಸಿಂಗ್ಸ್ ಆಡಲು ಸಾಧ್ಯವಾಗಲಿಲ್ಲ. ಈಗ ವಿರಾಟ್ ಐಪಿಎಲ್‌ಗಾಗಿ ಸಂಪೂರ್ಣ ತಯಾರಿ ನಡೆಸುತ್ತಿದ್ದಾರೆ.
ಐಪಿಎಲ್ 2025 ರ ಮೆಗಾ ಹರಾಜಿಗೂ ಮುನ್ನ, ವಿರಾಟ್ ಕೊಹ್ಲಿ ಆರ್‌ಸಿಬಿ ತಂಡದ ನಾಯಕತ್ವ ವಹಿಸಿಕೊಳ್ಳಬಹುದೆಂಬ ಊಹಾಪೋಹವಿತ್ತು. ಆದರೆ ಆರ್‌ಸಿಬಿ ಫ್ರಾಂಚೈಸಿ ರಜತ್ ಪಟಿದಾರ್ ಅವರನ್ನು ನಾಯಕನನ್ನಾಗಿ ಮಾಡಿತು. ಕೊಹ್ಲಿ ಅನುಭವದಿಂದ ಪಾಟಿದಾರ್ ಅವರಿಗೆ ಬೆಂಬಲ ಸಿಗಲಿದೆ. ಐಪಿಎಲ್ ಇತಿಹಾಸದಲ್ಲಿ ಆರ್‌ಸಿಬಿ ತಂಡ ಒಮ್ಮೆಯೂ ಪ್ರಶಸ್ತಿ ಗೆಲ್ಲುವಲ್ಲಿ ಯಶಸ್ವಿಯಾಗಿಲ್ಲ. ಈ ಬಾರಿ ಹೊಸ ಆರ್‌ಸಿಬಿ ತಂಡ ಹೇಗೆ ಪ್ರದರ್ಶನ ನೀಡುತ್ತದೆ ಎಂಬುದರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಐಪಿಎಲ್ 2025ರ ಲೀಗ್ ಮಾರ್ಚ್ 22 ರಿಂದ ಪ್ರಾರಂಭವಾಗಲಿದೆ. ಈ ಮೆಗಾ ಟೂರ್ನಿಯ ಉದ್ಘಾಟನಾ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಆರ್‌ಸಿಬಿ ನಡುವೆ ನಡೆಯಲಿದೆ. ಐಪಿಎಲ್‌ನಲ್ಲಿ ಕೆಕೆಆರ್ ಮೇಲುಗೈ ಸಾಧಿಸಿದ್ದರೂ, ಆರ್‌ಸಿಬಿ ಈ ಬಾರಿ ಎದುರಾಳಿ ತಂಡಗಳಿಗೆ ಸವಾಲು ಹಾಕಬಹುದು. ಈ ಋತುವಿನಲ್ಲಿ ಎಲ್ಲರ ಕಣ್ಣುಗಳು ವಿರಾಟ್ ಕೊಹ್ಲಿ ಪ್ರದರ್ಶನದ ಮೇಲಿದೆ. ಕೊಹ್ಲಿ ಕೂಡ ಹಲವು ದಾಖಲೆ ಮಾಡಲು ಸಜ್ಜಾಗಿದ್ದಾರೆ.
ಆರ್‌ಸಿಬಿ ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್‌ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಜಲ್‌ವುಡ್, ರಸಿಕ್‌ದರ್ ಸಲಾಂ, ಸುಯಂಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ನುವಾನ್ ತುಷಾರ, ಮನೋಜ್ ಭಂಡಗೆ, ಜಕೆಲ್ ಬೆಥೆಲ್, ದೇವದತ್ ಪಡಿಕ್ಕಲ್, ಸಾತ್ವಿಕ್ ಚಿಕಾರ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ.